ಆಶಾ ಕಾರ್ಯಕರ್ತರನ್ನು ಕೆಲಸದಿಂದ ವಜಾ ಗೊಳಿಸುವ ಕುರಿತು ಜಿಲ್ಲಾಧ್ಯಕ್ಷೆ ಭುವನಾ ಅವರಿಗೆ ಮನವಿ
Appeal to District President Bhuvana regarding dismissal of ASHA workers
ಹುಬ್ಬಳ್ಳಿ 30: ಎಐಯುಟಿಯುಸಿ ಗೆ ಸೇರಿದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿ ಯ ಮುಖಂಡರ ಜೊತೆಗೆ ಇಂದು ಕಲಘಟಗಿಯ ತಮ್ಮ ನಿವಾಸದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸಂತೋಷ್ ಲಾಡ್ ಅವರು ಮಾತನಾಡಿದರು. ಜಿಲ್ಲೆಯ ಆಶಾ ಕಾರ್ಯಕರ್ತರ ಸಮಸ್ಯೆಯನ್ನು ಆಲಿಸಿದ ಸಚಿವರು ತರ್ಕಬದ್ಧಗೊಳಿಸುವಿಕೆಯ ಕಾರಣ ನೀಡಿ ಆಶಾ ಕಾರ್ಯಕರ್ತರನ್ನು ಕೆಲಸದಿಂದ ವಜಾ ಗೊಳಿಸುವ ಬಗ್ಗೆ ಆತಂಕ ನಿವಾರಿಸುವ ನಿಟ್ಟಿನಲ್ಲಿ ನಾಳೆ ಡಿಸಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ಕರೆಯಲಾಗುವುದು. ನಿಮ್ಮ ಜೊತೆಗೆ ನಾನಿದ್ದೇನೆ ಎಂಬ ಭರವಸೆ ನೀಡಿದರು.
ಈ ಹಿನ್ನೆಲೆಯಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷೆ ಭುವನಾ ಬಳ್ಳಾರಿ ಸಚಿವರ ಮಧ್ಯಪ್ರವೇಶಕ್ಕೆ ಆಗ್ರಹಿಸಿ ಅವರ ಆಪ್ತ ಸಹಾಯಕರಿಗೆ ಮನವಿ ಪತ್ರ ನೀಡಿದ್ದು ಅದರಂತೆ ಅವರು ಸಭೆ ಕರೆಯದಾಗಿ ಹೇಳಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಮಾನ್ಯ ಸಚಿವರು ಜಿಲ್ಲೆಯ ಆಶಾ ಕಾರ್ಯಕರ್ತೆಯರ ಆತಂಕ ದೂರ ಮಾಡುತ್ತಾರೆ ಎಂಬ ಭರವಸೆ ಇದೆ. ಈ ಸಭೆಯ ಫಲಿತಾಂಶದ ಆಧಾರದ ಮೇಲೆ ಮುಂದಿನ ನಡೆಯನ್ನು ನಿರ್ಧರಿಸಲಾಗುವುದು, ಎಂದರು.ನಿಯೋಗದಲ್ಲಿ ಎಐಯುಟಿಯುಸಿ ಜಿಲ್ಲಾಧ್ಯಕ್ಷ ಗಂಗಾಧರ ಬಡಿಗೇರ, ಆಶಾ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ಶೋಭಾ ಹಿರೇಮಠ, ಮಂಜುಳಾ ಗಾಡುಗೋಳಿ, ನಂದಾ ದೊಡ್ಡಮನಿ, ಮುಖಂಡರಾದ ಶೋಭಾ ಸಂತಭಾನವರ, ಶೀಲಾ ಭಾಗೋಡ, ರೇಣುಕಾ ಪಾಟೀಲ್, ಜಾಹಿರಾ, ಮಂಜುಳಾ, ಅಂಜನಾ, ಬಸಮ್ಮ ಇನ್ನೂ ಮುಂತಾದವರು ಇದ್ದರು
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 