ಪತ್ರಿಕಾ ಭವನದ ನಿವೇಶನಕ್ಕೆ ಶಾಸಕ, ಸಚಿವರಿಗೆ ಮನವಿ
Appeal to MLAs and Ministers for the location of Patrika Bhavan
ದೇವರ ಹಿಪ್ಪರಗಿ 03: ತಾಲೂಕು ಕೇಂದ್ರ ದೇವರ ಹಿಪ್ಪರಗಿ ಪಟ್ಟಣದಲ್ಲಿ ನೂತನವಾಗಿ ಪತ್ರಿಕಾ ಭವನ ನಿರ್ಮಿಸಲು ನಿವೇಶನ ಹಾಗೂ ಅಗತ್ಯ ಅನುದಾನ ದೊರಕಿಸಿಕೊಡಬೇಕೆಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕ ಅಧ್ಯಕ್ಷ ಸಂಗಮೇಶ ಉತ್ನಾಳ ಅವರ ನೇತೃತ್ವದಲ್ಲಿ ಪತ್ರಕರ್ತರು ಪಟ್ಟಣದಲ್ಲಿ ಶಾಸಕ ರಾಜುಗೌಡ ಪಾಟೀಲ ಕುದರಿಸಾಲವಾಡಗಿ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲರಿಗೆ ಮನವಿ ಸಲ್ಲಿಸಿದರು.
ಪತ್ರಕರ್ತರ ಮನವಿಗೆ ತಕ್ಷಣ ಸ್ಪಂದಿಸಿದ ಸಚಿವರು ಸ್ಥಳದಲ್ಲಿ ಉಪಸ್ಥಿತರಿದ್ದ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಅಪ್ರೋಜ ಅಹ್ಮದ್ ಪಟೇಲ ಅವರನ್ನು ಕರೆದು ಪತ್ರಕರ್ತರ ಮನವಿಗೆ ಶೀಘ್ರವಾಗಿ ನಿವೇಶನ ದೊರಕಿಸಿಕೊಡಲು ಸೂಕ್ತ ಕ್ರಮ ಕೈಗೊಳ್ಳಲು ಸೂಚಿಸಿದರು.
ಕಾನಿಪ ತಾಲೂಕ ಪ್ರಧಾನ ಕಾರ್ಯದರ್ಶಿ ಶಿವಾನಂದ ಕುಂಬಾರ, ಉಪಾಧ್ಯಕ್ಷ ಶ್ರೀಧರ ನಾಡಗೌಡ, ಮಂಜುನಾಥ ಬ್ಯಾಕೋಡ, ಖಜಾಂಚಿ, ಮಲ್ಲಿಕಾರ್ಜುನ ಪಟ್ಟಣಶೆಟ್ಟಿ, ಕಾರ್ಯದರ್ಶಿಗಳಾದ ಹುಸೇನ ಕೊಕಟನೂರ, ಈರನಗೌಡ ಪಾಟೀಲ, ಮಳೆಪ್ಪಗೌಡ ಬಿರಾದಾರ, ಅಶೋಕ ಗೊಲ್ಲರ, ಅಹ್ಮದ್ ಅಲಿ ಮುಲ್ಲಾ, ಸಾಯಿಬಣ್ಣ ಹಳ್ಳಿ ಸೇರಿದಂತೆ ತಾಲೂಕ ಪದಾಧಿಕಾರಿಗಳು ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 