ಡಿಜಿಟಲ್ ಗ್ರಂಥಾಲಯ ಮಾಡುವಂತೆ ಶಾಸಕರಿಗೆ ಮನವಿ
Appeal to MLAs to create a digital library
ಯರಗಟ್ಟಿ 10 : ಸ್ಥಳೀಯ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ಡಿಜಿಟಲ್ ಗ್ರಂಥಾಲಯ ಅತ್ಯಗತ್ಯ. ಈ ನಿಟ್ಟಿನಲ್ಲಿ ನಮ್ಮ ವಿಧಾನಸಭಾ ಕ್ಷೇತ್ರದಲ್ಲಿ ಸುಸಜ್ಜಿತ ಡಿಜಿಟಲ್ ಗ್ರಂಥಾಲಯ ಸ್ಥಾಪಿಸಲು ಅಗತ್ಯವಿರುವ ಅನುದಾನ ಮತ್ತು ಮೂಲಸೌಕರ್ಯಗಳನ್ನು ಒದಗಿಸಿಕೊಡಬೇಕೆಂದು ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದಿಂದ ಶಾಸಕ ವಿಶ್ವಾಸ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.ಕಸಾಪ ಅಧ್ಯಕ್ಷ ಟಿ.ಎಂ. ಕಾಮಣ್ಣವರ ಮಾತನಾಡಿ ಗ್ರಂಥಾಲಯದಲ್ಲಿ ಇ-ಪುಸ್ತಕಗಳು, ಇ-ಜರ್ನಲ್‌ಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಲೈವ್ ತರಗತಿಗಳ ವ್ಯವಸ್ಥೆ ಇರಬೇಕು. ಅಂತರ್ಜಾಲ ಸಂಪರ್ಕದೊಂದಿಗೆ ಕಂಪ್ಯೂಟರ್‌ಗಳನ್ನು ಒದಗಿಸುವುದು. ವಿದ್ಯಾರ್ಥಿಗಳ ಸಾಧನೆಗೆ ಪೂರಕವಾಗಿದೆ. ಇದು ಗ್ರಾಮೀಣ ವಿದ್ಯಾರ್ಥಿಗಳಿಗೆ ಜಾಗತಿಕ ಜ್ಞಾನವನ್ನು ಪಡೆಯಲು ನೆರವಾಗುತ್ತದೆ. ಎಂದು ಹೇಳಿದರು.ಈ ವೇಳೆ ಆರ್.ಎಲ್. ಜೂಗನ್ನವರ, ಎಸ್.ಎಸ್. ಕುರುಬಗಟ್ಟಿಮಠ, ಭಾಸ್ಕರ ಹಿರೇಮೆತ್ರಿ, ಡಾ. ರಾಜಶೇಖರ ಬಿರಾದಾರ, ಈರಣ್ಣಾ ಹೂಲ್ಲೂರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 