ಅಕ್ರಮವಾಗಿ ಮರ ಕಡಿದವರ ವಿರುದ್ಧ ಕ್ರಮಕ್ಕೆ ಸಚಿವ ಖಂಡ್ರೆಗೆ ಮನವಿ
Appeal to Minister Khandre to take action against those who cut down trees illegally
ಬಳ್ಳಾರಿ 14: ನಗರದಲ್ಲಿ ಅರಣ್ಯ ಇಲಾಖೆಯ ಅನುಮತಿ ಪಡೆಯದೇ ಕಾನೂನುಬಾಹಿರವಾಗಿ ಮರಗಳನ್ನು ಕಡಿದು ಹಾಕಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಹೋರಾಟಗಾರ ಸಿದ್ದೇಶ ಊಳೂರು ಅರಣ್ಯ ಸಚಿವ ಈಶ್ವರ ಖಂಡ್ರೆ ಅವರಿಗೆ ಮನವಿ ಸಲ್ಲಿಸಿದ್ದಾರೆ.ನಗರದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಹೆಸರಿನಲ್ಲಿ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಈಗಾಗಲೇ 25ಕ್ಕೂ ಹೆಚ್ಚು ಮರಗಳನ್ನು ಅನಧಿಕೃತವಾಗಿ ಕಡಿದು ಹಾಕಿದ್ದಾರೆ. ಇದರಿಂದ ಈಗಾಗಲೇ ಬಿಸಿಲಿನ ತೀವ್ರತೆಯಿಂದ ಬಳಲುತ್ತಿರುವ ಬಳ್ಳಾರಿ ನಗರದಲ್ಲಿ ಶುದ್ಧ ಗಾಳಿ ಮತ್ತು ನೆರಳಿನ ಕೊರತೆ ಮತ್ತಷ್ಟು ಹೆಚ್ಚಾಗುವ ಆತಂಕ ಎದುರಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಮರಗಳ ತೆರವು ಕಾರ್ಯಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆಯ ಅನುಮತಿ, ದೃಢೀಕೃತ ನಕ್ಷೆ ಹಾಗೂ ಅಗತ್ಯ ದಾಖಲೆಗಳನ್ನು ಸಾರ್ವಜನಿಕರಿಗೆ ನೀಡದೇ ಇರುವುದರಿಂದ ಹಲವು ಅನುಮಾನಗಳು ಮೂಡಿವೆ ಎಂದು ಸಿದ್ದೇಶ ಊಳೂರು ಆರೋಪಿಸಿದ್ದಾರೆ.ರಸ್ತೆ ಅಭಿವೃದ್ಧಿ ಕಾಮಗಾರಿಗಳ ವೇಳೆ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್ಜಿಟಿ) ನಿಯಮಗಳನ್ನು ಉಲ್ಲಂಘಿಸಿರುವ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು. ಜೊತೆಗೆ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಕರ್ನಾಟಕ ಅರಣ್ಯ ಅಧಿನಿಯಮ 1969ರಡಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ಮನವಿಯಲ್ಲಿ ಆಗ್ರಹಿಸಿದ್ದಾರೆ.ನಗರದಲ್ಲಿ ಹೆಚ್ಚುತ್ತಿರುವ ಉಷ್ಣಾಂಶ ಮತ್ತು ಪರಿಸರ ಹಾನಿಯನ್ನು ಗಮನದಲ್ಲಿಟ್ಟುಕೊಂಡು, ಮರಗಳ ಸಂರಕ್ಷಣೆಗೆ ಸರ್ಕಾರ ಗಂಭೀರ ಕ್ರಮ ಕೈಗೊಳ್ಳಬೇಕೆಂದು ಪರಿಸರ ಪ್ರೇಮಿಗಳು ಒತ್ತಾಯಿಸಿದ್ದಾರೆ.
24 ಗಂಟೆಯಲ್ಲಿ ಕಾರು ಕಳ್ಳತನ ಪ್ರಕರಣ ಭೇಧಿಸಿದ ಪೊಲೀಸರು : ಖದೀಮರ ಪತ್ತೆಗಾಗಿ ಶೋಧ
ಗಡಿ ಮರಾಠಿ ಶಾಲೆಗಳಲ್ಲಿ ಕನ್ನಡ ಕಹಳೆ: 7 ಕನ್ನಡ ಪ್ರಾಥಮಿಕ, 2 ಪ್ರೌಡ ಶಾಲೆಗಳಿಗೆ ರಾಜ್ಯ ಸರಕಾರ ಗ್ರಿನ್ ಸಿಗ್ನಲ್
ಅಂತರಾಜ್ಯ ಖದೀಮನ ಬಂಧನ : 45.56 ಲಕ್ಷ ಮೌಲ್ಯದ ಚಿನ್ನಾಭರಣ, ದ್ವಿಚಕ್ರ ವಾಹನ ವಶಕ್ಕೆ
ಹಿಡಕಲ್ ಹಿನ್ನೀರಿನಲ್ಲಿ ಮುಳುಗಿದ್ದ ಹುನ್ನೂರು ವಿಠಲ ಮಂದಿರ ಜಲದಿಗ್ಭಂಧನದಿಂದ ಮುಕ್ತಿ
2027ರ ಮೇ. 4ರಿಂದ ಸಂಕೇಶ್ವರ ಮಹಾಲಕ್ಷ್ಮೀ ಜಾತ್ರಾ ಮಹೋತ್ಸವ ಪ್ರಾರಂಭ
48 ಗಂಟೆಯಲ್ಲಿ ಮನೆಗಳ್ಳರಿಬ್ಬರ ಬಂಧನ : 21,02 ಲಕ್ಷ ಮೌಲ್ಯದ 154.6 ಗ್ರಾಂ ಚಿನ್ನಾಭರಣ ವಶಕ್ಕೆ 