ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಚಿವ ಜಮೀರ್ ಅಹ್ಮದ್‌ಗೆ ಮನವಿ
Appeal to Minister Zameer Ahmed for fulfillment of various demands
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಚಿವ ಜಮೀರ್ ಅಹ್ಮದ್‌ಗೆ ಮನವಿ
ಕೊಪ್ಪಳ 04: ಭಾಗ್ಯನಗರದ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಮುಸ್ಲಿಂ ಸಮಾಜದ ಶಾದಿ ಮಹಲ್ ಕಟ್ಟಡ ಕಾಮಗಾರಿಗೆ ಹೆಚ್ಚುವರಿ ಅನುದಾನ ಸೇರಿದಂತೆ ನಗರದ ಆಶ್ರಯ ಯೋಜನೆ ಅಡಿಯಲ್ಲಿ ಬಸವ ಅಂಬೇಡ್ಕರ ಮನೆಗಳ ನಿರ್ಮಾಣಕ್ಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವರಾದ ಜಮೀರ್ ಅಹ್ಮದ್ ಖಾನ್ ರವರಿಗೆ ಕೊಪ್ಪಳ ಕ್ಷೇತ್ರದ ಶಾಸಕರಾದ ಕೆ ರಾಘವೇಂದ್ರ ಹಿಟ್ನಾಳ ರವರ ನೇತೃತ್ವದಲ್ಲಿ ಕೊಪ್ಪಳ ನಗರಸಭೆಯ ಅಧ್ಯಕ್ಷ ಹಾಗೂ ಸಮಾಜದ ಮುಖಂಡ ಅಮ್ಜದ್ ಪಟೇಲ್ ಮತ್ತು ಭಾಗ್ಯನಗರ್ ಪಟ್ಟಣ ಪಂಚಾಯಿತಿಯ ಉಪಾಧ್ಯಕ್ಷ ಹೊನ್ನೂರ ಸಾಬ ಬೈರಾಪುರ ಸೇರಿದಂತೆ ಅನೇಕರು ಬೆಂಗಳೂರಿನಲ್ಲಿ ಸಚಿವರ ಕಚೇರಿ ಯಲ್ಲಿ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.
ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ವಿಶೇಷ ಅನುದಾನ ಗಳ ಬಗ್ಗೆ ಸಚಿವರೊಂದಿಗೆ ಸುಧೀರ್ಘ ಚರ್ಚೆ ನಡೆಯಿತು. ಎಲ್ಲಾ ಬೇಡಿಕೆಗಳ ಬಗ್ಗೆ ಸಚಿವರಿಂದ ಉತ್ತಮ ರೀತಿಯ ಸ್ಪಂದನೆ ದೊರೆಯಿತು ವಿವಿಧ ಬೇಡಿಕೆಗಳ ಪೈಕಿ ಕೊಪ್ಪಳಕ್ಕೆ ಹತ್ತು ಕೋಟಿ ಹಾಗೂ ಭಾಗ್ಯನಗರ ಪಟ್ಟಣ ಪಂಚಾಯಿತಿಗೆ ಐದು ಕೋಟಿ ಅನುದಾನ ನೀಡುವದಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿದ್ದಾರೆ ಎಂದು ಕೊಪ್ಪಳ ನಗರಸಭೆಯ ಅಧ್ಯಕ್ಷ ಅಮ್ಜದ್ ಪಟೇಲ್ ವಿವರಿಸಿದ್ದಾರೆ ಮತ್ತು ಕೊಪ್ಪಳ ಮತ್ತು ಭಾಗ್ಯನಗರ ಸಮಸ್ತ ಅಲ್ಪಸಂಖ್ಯಾತರ ಸಮುದಾಯದ ಪರವಾಗಿ ಸಚಿವರಿಗೆ ಮತ್ತು ಶಾಸಕರಿಗೆ ಅಮ್ಜದ್ ಪಟೇಲ್ ಅಭಿನಂದಿಸಿದ್ದಾರೆಈ ಸಂದರ್ಭದಲ್ಲಿ ಭಾಗ್ಯನಗರ ಪಟ್ಟಣ ಪಂಚಾಯಿತಿಯ ಸ್ಥಾಯಿ ಸಮಿತಿ ಅಧ್ಯಕ್ಷ ಶಿವರಾಂ ಮೇಗಳಮನಿ ಸೇರಿದಂತೆ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಾಲ್ಗೊಂಡಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 