ಜಮಖಂಡಿ ಜಲಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಸಚಿವರಿಗೆ ಮನವಿ

  ಜಮಖಂಡಿ ಜಲಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಸಚಿವರಿಗೆ ಮನವಿ   Appeal to Minister for a permanent solution to Jamkhandi's water problem

ಲೋಕದರ್ಶನ ವರದಿ 

ಜಮಖಂಡಿ  23 :  ತಾಲೂಕಿನ ಜಲಸಮಸ್ಯೆಗಳ ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಮಾಜಿ ಶಾಸಕ ಆನಂದ ಸಿದ್ದು ನ್ಯಾಮಗೌಡ ಅವರ ನೇತೃತ್ವದ ನಿಯೋಗವು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿ ಮಾಡಿ ಮನವಿಯನ್ನು ಸಲ್ಲಿಸಿದ್ದಾರೆ.  ಮರೆಗುದ್ದಿ ಏತನೀರಾವರಿ ಯೋಜನೆಯನ್ನು 2026ಹಿ27ನೇ ಸಾಲಿನ ನಬಾರ್ಡ್‌ ಅನುದಾನದಲ್ಲಿ ಸೇರೆ​‍್ಡಗೊಳಿಸಿ ಶೀಘ್ರ ಕಾಮಗಾರಿ ಆರಂಭಿಸಬೇಕು. ನಾಗನೂರ, ಶೂರಪಾಲಿ ಹಾಗೂ ಕವಟಗಿ ಗ್ರಾಮಗಳ ಮುಳುಗಡೆ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಿ, ರೈತರು ಹಾಗೂ ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ನಿವಾರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.  ಸ್ಪಂದಿಸಿದ ಸಚಿವ ರಾಮಲಿಂಗಾರೆಡ್ಡಿ ಅವರು ಯೋಜನೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹಾಗೂ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರದಿಂದ ಧನಾತ್ಮಕವಾಗಿ ಸ್ಪಂದಿಸುವುದಾಗಿ ಭರವಸೆ ನೀಡಿದ್ದಾರೆ.  ಇದೇ ಸಂದರ್ಭದಲ್ಲಿ ನಿಯೋಗದ ಸದಸ್ಯರು ಉಪಸ್ಥಿತರಿದ್ದು, ಜಮಖಂಡಿ ಭಾಗದ ನೀರಾವರಿ ಹಾಗೂ ಮುಳುಗಡೆ ಸಮಸ್ಯೆಗಳಿಗೆ ಶೀಘ್ರ ಪರಿಹಾರ ಕಲ್ಪಿಸುವಂತೆ ಸಚಿವರಿಗೆ ಮನವಿ ಮಾಡಿದ್ದಾರೆ.