ದೇವಾಲಯದ ಪಾವಿತ್ರ್ಯ ಕಾಪಾಡಲು ಪ್ರೀ-ವೆಡ್ಡಿಂಗ್ ಶೂಟಿಂಗ್‌ಗಳನ್ನು ನಿಷೇದಿಸಿ ಧಾರ್ಮಿಕದತ್ತಿ ಇಲಾಖೆಯ ಸಚಿವರಾದ ರಾಮಲಿಂಗ ರೆಡ್ಡಿಯವರಿಗೆ ಮನವಿ
Appeal to Religious Endowments Minister Ramalinga Reddy to ban pre-wedding shootings to protect the
ಲಕ್ಷ್ಮೇಶ್ವರ 08: ಕರ್ನಾಟಕ ರಾಜ್ಯದ ದೇವಸ್ಥಾನಗಳು ಧಾರ್ಮಿಕ ನಂಬಿಕೆ, ಸಂಸ್ಕೃತಿ ಹಾಗೂ ಆಧ್ಯಾತ್ಮಿಕ ಪರಂಪರೆಯ ಪ್ರತೀಕಗಳಾಗಿವೆ. ಇವು ಭಕ್ತರ ಶ್ರದ್ಧೆಯ ಕೇಂದ್ರಗಳಾಗಿದ್ದು, ಶಾಂತಿ, ಭಕ್ತಿ, ದೈವಿ ಚೈತನ್ಯ ಮತ್ತು ಸಂಪ್ರದಾಯದ ಸಂಕೇತಗಳಾಗಿವೆ. ಇಂತಹ ಪವಿತ್ರ ಧಾರ್ಮಿಕ ಕ್ಷೇತ್ರಗಳಲ್ಲಿ ಪ್ರಿ ವೆಡ್ಡಿಂಗ್ ಶೂಟಿಂಗ್ ಗಳನ್ನು ನಿಷೇದಿಸಿ ಕಾನೂನು ರೂಪಿಸಬೇಕೆಂದು ಕರ್ನಾಟಕ ಮಂದಿರ ಮಹಾಸಂಘದ ವತಿಯಿಂದ ತಹಶೀಲ್ದಾರ್ ಎಂ ಧನಂಜಯ ಇವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಈ ಸಂಧರ್ಭದಲ್ಲಿ ಹಿತಚಿಂತಕರಾದ ಶಿವಶಂಕರ ಬ್ಯಾಡಗಿ, ಅನಿಲಕುಮಾರ ಮುಳಗುಂದ,ಮಂಜುನಾಥ ಸುಣ್ಣದಮನಿ,ಕಾವೇರಿ ಲಮಾಣಿ,ಪವಿತ್ರಾ ಲಮಾಣಿ,ಶಿವಪ್ಪ ಮಂಟೂರ,ಮಂಜುನಾಥ ಹರಿಜನ, ಎಲ್ ಎಫ್ ಗೋಣೆಪ್ಪನವರ, ಶೋಭಾ ಇಟಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಇತ್ತೀಚೆಗೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಟ್ಟದ ಬೈರವೇಶ್ವರ ದೇವಸ್ಥಾನದಲ್ಲಿ ಕೆಲವರು ದೇವಸ್ಥಾನದ ಒಳಭಾಗದಲ್ಲಿ ಚಪ್ಪಲಿ ಧರಿಸಿ ಅಸಭ್ಯ ರೀತಿಯಲ್ಲಿ ಪ್ರೀ-ವೆಡ್ಡಿಂಗ್ ಫೋಟೋಶೂಟಿಂಗ್ ನಡೆಸಿದ ಘಟನೆ ವರದಿಯಾಗಿದೆ. ಈ ಕುರಿತು ಆಕ್ಷೇಪ ವ್ಯಕ್ತಪಡಿಸಿದ ಅರ್ಚಕರು ಹಾಗೂ ಸ್ಥಳೀಯ ಭಕ್ತರ ವಿರುದ್ಧ ಅವಾಚ್ಯ ಶಬ್ದ ಬಳಕೆ ಮತ್ತು ಅಸಭ್ಯ ವರ್ತನೆ ನಡೆದಿರುವುದು ಅತ್ಯಂತ ಖಂಡನೀಯವಾಗಿದೆ.ಇಂತಹ ಘಟನೆಗಳು ಇತ್ತೀಚಿನ ದಿನಗಳಲ್ಲಿ ರಾಜ್ಯದ ಅನೇಕ ದೇವಸ್ಥಾನಗಳಲ್ಲಿ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ದೇವಸ್ಥಾನಗಳ ಪ್ರಾಂಗಣದಲ್ಲಿ ಯಾವುದೇ ಅನುಮತಿ ಇಲ್ಲದೆ ಆಶ್ಲೀಲ, ಅಸಭ್ಯ ಅಥವಾ ಸಂಪ್ರದಾಯ ವಿರುದ್ಧ ಉಡುಪುಗಳಲ್ಲಿ ಪ್ರೀ-ವೆಡ್ಡಿಂಗ್ ಶೂಟಿಂಗ್, ರೀಲ್ಸ್ ನಿರ್ಮಾಣ ಇತ್ಯಾದಿ ಚಟುವಟಿಕೆಗಳು ಹೆಚ್ಚಾಗುತ್ತಿವೆ. ದೇವಸ್ಥಾನಗಳನ್ನು ವೈಯಕ್ತಿಕ ಪ್ರಚಾರ, ಸಾಮಾಜಿಕ ಜಾಲತಾಣದ ಲೈಕ್ಸ್ ಮತ್ತು ವೀಕ್ಷಣೆಗಳಿಗಾಗಿ ಬಳಸುವುದು
ಧಾರ್ಮಿಕ ಸ್ಥಳಗಳ ಗೌರವಕ್ಕೆ ಧಕ್ಕೆ ತರುವುದಲ್ಲದೆ, ಅವುಗಳ ವ್ಯಾಪಾರೀಕರಣಕ್ಕೂ ಕಾರಣವಾಗುತ್ತಿದೆ. ಅದಲ್ಲದೇ ಭಕ್ತಾಧಿಗಳ ಧಾರ್ಮಿಕ ಭಾವನೆಗೆ ನೋವುಂಟು ಮಾಡಲಾಗುತ್ತಿದೆ.ಇಂತಹ ಕೃತ್ಯಗಳು ಕೆಳಗಿನ ಕಾನೂನು ಪ್ರಕಾರ ಗಂಭೀರ ಅಪರಾಧವಾಗಿರುತ್ತದೆ1.ಭಾರತೀಯ ಸಂವಿಧಾನದ ಕಲಂ 25 ಮತ್ತು 26 ಧಾರ್ಮಿಕ ಸ್ವಾತಂತ್ರ್ಯ ಮತ್ತು ಧಾರ್ಮಿಕ ಸಂಸ್ಥೆಗಳ ನಿರ್ವಹಣೆಯ ಹಕ್ಕುಗಳನ್ನು ಭಕ್ತರಿಗೆ ಹಾಗೂ ಸಂಸ್ಥೆಗಳಿಗೆ ನೀಡುತ್ತದೆ. ದೇವಸ್ಥಾನಗಳ ಪಾವಿತ್ರ್ಯಕ್ಕೆ ಧಕ್ಕೆ ತರುವ ಚಟುವಟಿಕೆಗಳು ಈ ಹಕ್ಕುಗಳಿಗೆ ವಿರುದ್ಧವಾಗಿರುತ್ತವೆ.2.ಭಾರತೀಯ ನ್ಯಾಯ ಸಂಹಿತೆ 2023ರ ಪ್ರಕಾರಸೆಕ್ಷನ್ 298 - ಧಾರ್ಮಿಕ ಸ್ಥಳಗಳನ್ನು ಅಪವಿತ್ರಗೊಳಿಸುವುದು ಅಥವಾ ಅವುಗಳಿಗೆ ಹಾನಿ ಮಾಡುವುದು ದಂಡನೀಯ ಅಪರಾಧ. ಸೆಕ್ಷನ್ 299 - ಧಾರ್ಮಿಕ ಭಾವನೆಗಳನ್ನು ಉದ್ದೇಶಪೂರ್ವಕವಾಗಿ ಅವಮಾನಿಸುವ ಕೃತ್ಯಗಳು ಗಂಭೀರ ಅಪರಾಧವಾಗಿದೆ.ಸೆಕ್ಷನ್ 270 - ಸಾರ್ವಜನಿಕ ತೊಂದರೆನೀಡುವುದು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 