ಸಾರವಾಡದ ಹಿಂದೂ ಸಮಾಜದ ಎಲ್ಲ ಉಪ ಪಂಗಡಗಳಿಗೆ ರುದ್ರಭೂಮಿ ಮಂಜೂರು ಮಾಡಲು ಮನವಿ
Appeal to allocate burial grounds to all sub-sects of Hindu society in Sarawada
ವಿಜಯಪುರ 11 : ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದ ಹಿಂದೂ ಸಮಾಜದ ಎಲ್ಲ ಉಪ ಪಂಗಡಗಳಿಗೆ ರುದ್ರಭೂಮಿ ಮಂಜೂರು ಮಾಡುವಂತೆ ಗ್ರಾಮ ಪಂಚಾಯತ ಕಾರ್ಯಾಲಯ ಸಾರವಾಡ ಅಧ್ಯಕ್ಷರು, ಉಪಾಧ್ಯಕ್ಷರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಬಬಲೇಶ್ವರ ತಾಲೂಕಿನ ಸಾರವಾಡ ಗ್ರಾಮದಲ್ಲಿ ಹಿಂದೂ ಧರ್ಮದ ಎಲ್ಲ ಉಪ ಪಂಗಡಗಳಿಗೆ ರುದ್ರಭೂಮಿ ಇರುವುದಿಲ್ಲ. ಇದರಿಂದ ಗ್ರಾಮಸ್ಥರಿಗೆ ಶವ ಸಂಸ್ಕಾರ ಮಾಡಲು ತೀವ್ರ ತೊಂದರೆ ಉಂಟಾಗುತ್ತಿದೆ. ಗ್ರಾಮದ ರಿ.ಸ.ನಂ. 805/* ಪೈಕಿ 4 ಎಕರೆ 13 ಗುಂಟೆ ಮತ್ತು ರಿ.ಸ.ನಂ 806 ರಲ್ಲಿ 2 ಎಕರೆ 1 ಗುಂಟೆ ಈಗಾಗಲೇ ಉತಾರೆಯಲ್ಲಿ ಸರಕಾರ ಮಸನವಾಟ ಅಂತ ನಮೂದು ಇರುವ ಜಮೀನನ್ನು ಪಿ.ಟಿ.ಶೀಟ್ ಹದ್ದ ಬಸ್ತ ಗುರುತು ಮಾಡಿ ಸಾರವಾಡ ಗ್ರಾಮಸ್ಥರಿಗೆ ಶವ ಸಂಸ್ಕಾರ ಮಾಡಲು ಅನುಕೂಲ ಕಲ್ಪಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
ಈ ಕುರಿತು ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ ಹಾಗೂ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ರುದ್ರಭೂಮಿಯಲ್ಲಿ ಮಂಜೂರಿ ಮಾಡಬೇಕೆಂದು ಮನವಿಯಲ್ಲಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಾರವಾಡ ಗ್ರಾಮ ಪಂಚಾಯತ ಅಧ್ಯಕ್ಷರಾದ ಎಂ.ಎಸ್. ಪಾಟೀಲ, ಉಪಾಧ್ಯಕ್ಷರಾದ ಎಸ್.ಎಂ.ಸೋಮಕ್ಕನವರ, ಅಖಿಲ ಭಾರತೀಯ ವಾಲ್ಮೀಕಿ ಸಮಾಜ ಸೇವಾ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಟಗಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 