ಖಾಯಂ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಮನವಿ
Appeal to appoint permanent teachers
ಮುದ್ದೇಬಿಹಾಳ 04: ತಾಲೂಕಿನ ಬಿದರಕುಂದಿ ಗ್ರಾಮದ ಸರಕಾರಿ ಆದರ್ಶ ವಿದ್ಯಾಲಯದ 2025-26 ನೇ ಸಾಲಿನ ವಿದ್ಯಾರ್ಥಿಗಳಿಗೆ ವಿಜ್ಞಾನ ವಿಷಯದ ಹಾಗೂ ಸಮಾಜ ವಿಜ್ಞಾನ ಬೋಧಿಸುವ ಖಾಯಂ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವಂತೆ ಆಗ್ರಹಿಸಿ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಯವರು ತಾಲೂಕಾ ಕ್ಷೇತ್ರ ಸಮನ್ವಯಾಧಿಕಾರಿ ಆರ್ ಬಿ ದಮ್ಮೂರಮಠ ಅವರಿಗೆ ಮಂಗಳವಾರ ಮನವಿ ಸಲ್ಲಿದರು.
ತಾಲೂಕಿನ ಬಿದರಕುಂದಿ ಗ್ರಾಮದ ಸರಕಾರಿ ಆದರ್ಶ ವಿದ್ಯಾಲಯದಲ್ಲಿ ಸುಮಾರು 509 ವಿಧ್ಯಾರ್ಥಿಗಳು ಪ್ರವೇಶ ಪಡೆದು ವ್ಯಾಸಂಗ ಮಾಡುತ್ತಿದ್ದಾರೆ. ಈ ಶಾಲೆಯ ವಿಧ್ಯಾರ್ಥಿಗಳು ಎಸ್.ಎಸ್.ಎಲ್.ಸಿ.ಯಲ್ಲಿ ಪ್ರತಿ ವರ್ಷವೂ ಕೂಡ ಗಿರಿಷ್ಠ ಅಂಕಗಳೊಂದಿಗೆ ಉತ್ತಿರ್ಣರಾಗುವ ಮೂಲಕ ಮಾದರಿಯ ಶಾಲೆ ಎನಿಸಿಕೊಂಡಿದೆ ಸಧ್ಯ ಈ ಶಾಲೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ ಆದರೆ ವಿಧ್ಯಾರ್ಥಿಗಳಿಗೆ ವಿಜ್ಞಾನ ವಿಷಯ ಹಾಗೂ ಸಮಾಜ ವಿಜ್ಞಾನ ಬೋಧಿಸುವ ಖಾಯಂ ಶಿಕ್ಷಕರು ಇರುವುದಿಲ್ಲವಾದ್ದರಿಂದ ಖಾಲಿ ಹುದ್ದೆಗಳಿಗೆ ಇಲಾಖಾ ನಿಯಮಾನುಸಾರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಂದಿದ್ದಾರೆ,
ಆದರೆ ಅತಿಥಿ ಶಿಕ್ಷಕರು ಖಾಯಂ ಆಗಿ ಬರದೇ ನಡುವೆ ಶಾಲೆ ಬಿಟ್ಟು ಬೇರೆ ಶಾಲೆಗೆ ಹೋಗುತ್ತಿದ್ದಾರೆ, ಕಾರಣ ಈ ಶಾಲೆಯಲ್ಲಿ ಕೆಲಸದ ಒತ್ತಡ ಹೆಚ್ಚಾಗಿದ್ದರಿಂದ ಅತಿಥಿ ಶಿಕ್ಷಕರು ಹೆಚ್ಚಿನ ವೇತನ ಬಯಸುತ್ತಿದ್ದಾರೆ. ಆದ್ದರಿಂದ ಅತಿಥಿ ಶಿಕ್ಷಕರು ಖಾಯಂ ಆಗಿ ಬರುತ್ತಿಲ್ಲವಾದ್ದರಿಂದ ವಿಧ್ಯಾರ್ಥಿಗಳ ಕಲಿಕೆಯ ಮೇಲೆ ಪರಿಣಾಮ ಬೀರುತ್ತಿದೆ, ಕಾರಣ ಖಾಯಂ ಶಿಕ್ಷಕರು ನೇಮಕವಾಗುವವರೆಗೆ ವಿಜ್ಞಾನ, ಸಿ.ಬಿ.ಝಡ್. ಆಂಗ್ಲ ಮಾಧ್ಯಮ ಇಬ್ಬರು ಶಿಕ್ಷಕರು ಹಾಗೂ ಸಮಾಜ ವಿಜ್ಞಾನ ಶಿಕ್ಷಕರನ್ನು ಶಾಲೆಗೆ ತುರ್ತಾಗಿ ನಿಯೊಜನೆ ಮಾಡಬೇಕು. ಒಂದು ವೇಳೆ ತಾವುಗಳು ಶಿಕ್ಷಕರನ್ನು ತುರ್ತಾಗಿ ನಿಯೋಜನೆ ಮಾಡದಿದ್ದಲ್ಲಿ ನಾವು ಎಲ್ಲ ಪಾಲಕರನ್ನು ಕರೆದುಕೊಂಡು ತಮ್ಮ ಕಾರ್ಯಾಲಯದ ಮುಂದೆ ಧರಣಿ ಸತ್ಯಾಗ್ರಹ ನಡೆಸಬೇಕಾಗುತ್ತದೆ ಎಂದು ಮನವಿಯಲ್ಲಿ ಎಚ್ಚರಿಕೆ ನೀಡಿದ್ದಾರೆ.
ಈ ವೇಳೆ ಆರ್ ಎಂ ಎಸ್ ಎ ಶಾಲೆಯ ಆಡಳಿತ ಸಲಹಾ ಸಮೀತಿ ಅಧ್ಯಕ್ಷೆ ಪೂರ್ಣೀಮಾ ಬೆಳಗಲ್ಲ, ಎಸ್ ಡಿ ಎಂ ಸಿ ಸದಸ್ಯರಾದ ಯಲ್ಲಪ್ಪ ಮ್ಯಾಗೇರಿ, ಬಂದೇನವಾಜ ಕುಮಶಿ, ಎಚ್ ಆರ್ ಬಾಗವಾನ, ಸೇರಿದಂತೆ ಹಲವರು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 