ಕಂಪ್ಲಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ತಜ್ಞ ವೈದ್ಯರನ್ನು ಹಾಗೂ ಸಿಬ್ಬಂದಿಗಳನ್ನು ನೇಮಕ ಮಾಡುವಂತೆ ಮನವಿ
Appeal to appoint specialist doctors and staff for the Compli Community Health Center
ಕಂಪಿ 06: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕೂಡಲೇ ಸ್ತ್ರೀರೋಗ, ಪ್ರಸೂತಿ ತಜ್ಞರು ಸೇರಿದಂತೆ ಸಿಬ್ಬಂದಿಗಳನ್ನು ನೇಮಕ ಮಾಡುವಂತೆ ಆಗ್ರಹಿಸಿ, ಪಟ್ಟಣದ ವಿವಿಧ ದಲಿತ ಸಂಘಟನೆಗಳು ತಹಶೀಲ್ದಾರ್ ಜೂಗಲ್ ಮಂಜುನಾಯಕ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು. ಮನವಿ ಸಲ್ಲಿಸಿ ಮಾತನಾಡಿದ ಕರ್ನಾಟಕ ಜನಶಕ್ತಿ ಸಂಘಟನೆಯ ರಾಜ್ಯ ಕಾರ್ಯದರ್ಶಿ ವಸಂತರಾಜ ಕಹಳೆ ಮಾತನಾಡಿ, ಕೂಲಿಕಾರ್ಮಿಕರಿಗೆ, ಬಡವರಿಗೆ ವಿಶೇಷ ಗರ್ಭಿಣಿ ಸ್ತ್ರೀಯರಿಗೆ ತುಂಬಾ ಆನಾನೂಕುಲವಾಗಿದೆ. ಹೆರಿಗೆ ಅಪಘಾತಗಳಂತಹ ಸಂದರ್ಭದಲ್ಲಿ ಪ್ರಾಥಮಿಕ ಚಿಕಿತ್ಸೆಯನ್ನು ನೀಡುವವರಿಲ್ಲದೆ ಗರ್ಭಿಣಿಯರು, ಗಾಯಾಳುಗಳು ಮಾರ್ಗಮಧ್ಯೆಯೇ ಸಾವನ್ನಪ್ಪುವಂತೆ ದುಸ್ಥಿತಿ ಬಂದಿದ್ದು, ಕೂಡಲೇ ತಾಲ್ಲೂಕು ಆಡಳಿತ ಮತ್ತು ಜಿಲ್ಲಾಡಳಿತ, ಆರೋಗ್ಯ ಇಲಾಖೆ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಸ್ತ್ರೀರೋಗ, ಪ್ರಸೂತಿ ತಜ್ಞರು ಸೇರಿದಂತೆ ನುರಿತ ವೈದ್ಯರನ್ನು ಮತ್ತು ಅಗತ್ಯ ಸಿಬ್ಬಂದಿಗಳನ್ನು ನೇಮಕ ಮಾಡಬೇಕೆಂದು ಆಗ್ರಹಿಸಿ ತಹಶೀಲ್ದಾರ್ ಜೂಗಲ್ ಮಂಜುನಾಯಕ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು. ನಂತರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಾಲ್ಲೂಕು ಪ್ರಭಾರಿ ವೈದ್ಯಾಧಿಕಾರಿ ಡಾ.ಅರುಣ್ ಅವರಿಗೂ ಮನವಿ ಪತ್ರವನ್ನು ಸಲ್ಲಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಬಿ.ಬಸವರಾಜ, ಕಂಪ್ಲಿ ಅಭಿವೃದ್ದಿಗಾಗಿ ಯುವ ನರ ವೇದಿಕೆಯ ರವಿ ಮಣ್ಣೂರು, ಕರ್ನಾಟಕ ರಾಜ್ಯ ಡಾ.ಭೀಮರಾವ್ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಸಂಘದ ಉಪಾಧ್ಯಕ್ಷ ಹುಸೇನಪ್ಪ, ಕಲ್ಯಾಣ ಕರ್ನಾಟಕ ವಿಭಾಗೀಯ ಅಧ್ಯಕ್ಷ ಕೆ.ಲಕ್ಷ್ಮಣ, ಕಿಸಾನ್ ಜಾಗೃತಿ ಸಮಿತಿಯ ಪಿ.ಯುಗಂಧರನಾಯ್ಡು, ಸಣಾಪುರ ಮರಿಯಪ್ಪ, ದುರ್ಗಪ್ಪ, ಮುತ್ತಣ್ಣ, ಧನಂಜಯ, ರಾಮಪ್ಪ, ರುದ್ರ್ಪ ಸೇರಿದಂತೆ ಇತರರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 