ಶಿಥಿಲಗೊಂಡ ಕಟ್ಟಡವನ್ನು ತೆರವುಗೊಳಿಸಿ ಹೊಸ ಭವನ ನಿರ್ಮಾಣಕ್ಕೆ ಮನವಿ
Appeal to clear dilapidated building and construct new building
ಶಿಗ್ಗಾವಿ 08: ಪಟ್ಟಣದಲ್ಲಿ ಶಿಥಿಲಗೊಂಡ ಗುರುಭವನ ಕಟ್ಟಡವನ್ನು ತೆರವುಗೊಳಿಸಿ ಹೊಸ ಭವನ ನಿರ್ಮಾಣಕ್ಕೆ ಕ್ರಮಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ಶಾಸಕ ಯಾಸೀರಖಾನ್ ಪಠಾಣ ಅವರಿಗೆ ಮನವಿ ಸಲ್ಲಿಸಿದರು. ತಾಲೂಕಿನಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಸುಮಾರು 1500 ಶಿಕ್ಷಕರು ಸೇವೆ ಸಲ್ಲಿಸುತ್ತಿದ್ದಾರೆ.
ಈಗಿರುವ ಗುರುಭವನದಲ್ಲಿ ಸುಮಾರು 40 ವರ್ಷಗಳಿಂದ ಶೈಕ್ಷಣಿಕ ಸಭೆ, ಸಮಾರಂಭಗಳು ಸೇರಿದಂತೆ ಶಾಲಾ ಮಕ್ಕಳಿಗೆ ಪ್ರತಿಭಾ ಕಾರಂಜಿ ಸೇರಿದಂತೆ ಶೈಕ್ಷಣಿಕ ಚಟುವಟಿಕೆಗಳಿಗೆ ಗುರುಭವನ ಕೇಂದ್ರ ಬಿಂದುವಾಗಿದೆ. ಇಲ್ಲಿ ಕುಡಿ ಯುವ ನೀರು, ಬೋರ್‌ವೆಲ್, ಶೌಚಾ ಲಯದ ವ್ಯವಸ್ಥೆ ಇಲ್ಲದ್ದರಿಂದ ಶಿಕ್ಷಕ-ಶಿಕ್ಷಕಿಯರಿಗೆ ಬಹಳ ತೊಂದರೆಯಾಗಿದೆ. ಈಗಿರುವ ಭವನ ಮಳೆಗಾಲದಲ್ಲಿ ಸೋರುತ್ತಿದೆ. ಹೀಗಾಗಿ ಮಳೆಗಾಲದಲ್ಲಿ ಸಭೆ, ಸಮಾರಂಭಗಳನ್ನು ನಡೆಸುವುದು ಬಹಳ ಕಷ್ಟವಾಗಿದೆ. ತಮ್ಮ ಶಾಸಕರ ಅನುದಾನದಲ್ಲಿ 3 ಕೋಟಿ ರೂ.ವೆಚ್ಚದಲ್ಲಿ ನೂತನ ಗುರುಭವನ ಮಾಡಿಕೊಡಲು ಮನವಿ ಮಾಡಿದರು. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಅರುಣ ಹುಡೆದಗೌಡ್ರ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಎಪ್ ಸಿ ಕಾಡಪ್ಪಗೌಡ್ರ, ಎನ್ ಎಸ್ ಹೊಸಗೌಡ್ರ, ಬಿ ವೈ ಉಪ್ಪಾರ, ಸಯ್ಯದ್ ಹುಸೇನ್, ಸುರೇಶ ಕುಂದೂರು, ಎಸ್ ಎನ್ ಮುಗಳಿ, ರವೀಂದ್ರಗೌಡ ಡೊಳ್ಳೆಗೌಡ್ರ, ಆರ್ ಎಮ್ ಹಾರೂಗೇರಿ ಸೇರಿದಂತೆ ಇತರರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 