ರಾಜ್ಯಮಟ್ಟದ ಕಾರ್ಯಕ್ರಮ ಯಶಸ್ವಿಗೊಳಿಸಲು ಸಮಾಜ ಬಾಂಧವರಿಗೆ ಮನವಿ
Appeal to community members to make the state-level event a success
ಜುಲೈ 29ರಂದು ಬೆಂಗಳೂರಿನಲ್ಲಿ ಶರಣ ಹಡಪದ ಅಪ್ಪಣ್ಣ ಜಯಂತ್ಯೋತ್ಸವ
ಲಕ್ಕೇಶ್ವರ 27: ಬಸವಣ್ಣನವರ ಆಪ್ತ ಕಾರ್ಯದರ್ಶಿ ಶರಣ ಹಡಪದ ಅಪ್ಪಣ್ಣ ಅವರ 892ನೇ ಜಯಂತ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಅಖಿಲ ಕರ್ನಾಟಕ ಹಡಪದ ಅಪ್ಪಣ್ಣ ಸಮಾಜದ ರಾಜ್ಯಾಧ್ಯಕ್ಷ ದೇವಪ್ಪ ಹಡಪದ ಮುಂಡರಗಿ ಅವರು ಸಮಾಜದ ಮುಖಂಡರು ಹಾಗೂ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಜುಲೈ 29ರಂದು ಸರ್ಕಾರದ ವತಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ರಾಜ್ಯಮಟ್ಟದ ಶಿವಶರಣ ಹಡಪದ ಅಪ್ಪಣ್ಣ ಜಯಂತ್ಯೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.
ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಹಡಪದ ಅಪ್ಪಣ್ಣನವರ ಸಂಸ್ಥಾನ ಮಠದ ತಂಗಡಗಿಯ ಪೂಜ್ಯ ಶ್ರೀ ಅನ್ನದಾನ ಭಾರತಿ ಅಪ್ಪಣ್ಣ ಮಹಾಸ್ವಾಮಿಗಳು, ರಾಜ್ಯದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಸೇರಿದಂತೆ ಸರ್ಕಾರದ ಸಚಿವರು, ಶಾಸಕರು, ಮಾಜಿ ಶಾಸಕರು ಹಾಗೂ ರಾಜ್ಯದ ಎಲ್ಲ ಹಡಪದ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಿದರು.
ಶರಣ ಹಡಪದ ಅಪ್ಪಣ್ಣನವರ ಜೀವನ, ಆದರ್ಶಗಳು ಮತ್ತು ಸಮಾಜ ಸೇವೆಯನ್ನು ಸ್ಮರಿಸುವ ಉದ್ದೇಶದಿಂದ ನಡೆಯುವ ಈ ಕಾರ್ಯಕ್ರಮವನ್ನು ಎಲ್ಲರೂ ಒಗ್ಗಟ್ಟಿನಿಂದ ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದರು.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 