ಜೈವಿಕ ಪಾಲಕರ ಪತ್ತೆಗೆ ಮನವಿ
Appeal to find biological parents
ಬೆಳಗಾವಿ 11: ಚಿಕ್ಕೋಡಿ ತಾಲ್ಲೂಕಿನ ಉಮರಾಣಿ ಗ್ರಾಮದಲ್ಲಿ ಇತ್ತಿಚಿಗೆ ಮುಳ್ಳಿನ ಪೊದೆಯಲ್ಲಿ ನವಜಾತ ಗಂಡು ಶಿಶುವನ್ನು ಅಪರಿಚಿತರು ಬಿಟ್ಟು ಹೊಗಿದ್ದು, ನಂತರ ಸ್ಥಳಿಯರು ಶಿಶು ಅಭಿವೃದ್ದಿ ಯೋಜನಾಧಿಕಾರಿಗಳಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ಮಾಹಿತಿ ನೀಡಿರುತ್ತಾರೆ. ಮಾಹಿತಿ ತಿಳಿದ ತಕ್ಷಣ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಮಗುವನ್ನು ರಕ್ಷಣೆ ಮಾಡಿ ಮಗುವಿನ ಹೆಚ್ಚಿನ ಆರೋಗ್ಯ ತಪಾಸಣೆಗಾಗಿ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲು ಮಾಡಿರುತ್ತಾರೆ. ಸದ್ಯ ಮಗುವಿನ ಆರೋಗ್ಯ ಸುಧಾರಣೆಯಾಗಿದ್ದು, ಜಿಲ್ಲಾ ಆಸ್ಪತ್ರೆಯಿಂದ ಬಿಡುಗಡೆ ಮಾಡಿ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರಪಡಿಸಲಾಗಿರತ್ತದೆ.
ಸದರಿ ಮಗುವನ್ನು ಮಕ್ಕಳ ಕಲ್ಯಾಣ ಸಮಿತಿಯವರ ಆದೇಶದ ಮೇರೆಗೆ ತಾತ್ಕಾಲಿಕವಾಗಿ ರಕ್ಷಣೆ ಮತ್ತು ಪೋಷಣೆಗಾಗಿ ಸರ್ಕಾರಿ ವಿಶೇಷ ದತ್ತು ಸ್ವೀಕಾರ ಕೇಂದ್ರದಲ್ಲಿ ಅಭಿರಕ್ಷಣೆಗಾಗಿ ಇಡಲಾಗಿದೆ. ಮಗುವಿನ ಜೈವಿಕ ಪಾಲಕರು ಇದ್ದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪ್ಲಾಟ ನಂ.2688, ಸೆಕ್ಟರ್ ನಂ.12 ಡಬಲ್ ರೋಡ ಶ್ರೀನಗರ, ಬೆಳಗಾವಿ ಇಲ್ಲಿಗೆ ಅಥವಾ ದೂರವಾಣಿ ಸಂಖ್ಯೆ 0831-2474111 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಡಾ. ಪರ್ವಿನ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 