ಕಾಣೆಯಾದ ಬಾಲಕ ಪತ್ತೆಗೆ ಮನವಿ
Appeal to locate missing boy
ಬಳ್ಳಾರಿ 08: ನಗರದ ದೇವಿನಗರ ಬಡಾವಣೆಯ 1ನೇ ಕ್ರಾಸ್‌ನ ಸರ್ಕಾರಿ ವೀಕ್ಷಣಾಲಯದಲ್ಲಿ ದಾಖಲಾದ ಮಾರುತಿ ಎನ್ನುವ 16 ವರ್ಷದ ಬಾಲಕ ಜು.06 ರಂದು ವೀಕ್ಷಣಾಲಯದಿಂದ ಕಾಣೆಯಾಗಿದ್ದು, ಈ ಕುರಿತು ಕೌಲ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕನ ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ತಿಳಿಸಿದ್ದಾರೆ.ಚಹರೆ: ಅಂದಾಜು 5.7 ಅಡಿ ಎತ್ತರ, ಕಪ್ಪು ಮೈಬಣ್ಣ, ತೆಳುವಾದ ಮೈಕಟ್ಟು ಹೊಂದಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ನೀಲಿ ಬಣ್ಣದ ತುಂಬು ತೋಳಿನ ಟಿ-ಶರ್ಟ್, ಬೂದಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ.
ಮೇಲ್ಕಂಡ ಚಹರೆ ಗುರುತುಗಳುಳ್ಳ ಬಾಲಕ ಬಗ್ಗೆ ಮಾಹಿತಿ ಸಿಕ್ಕಲ್ಲಿ ಕೌಲ್ ಬಜಾರ್ ಪೊಲೀಸ್ ಠಾಣೆಯ ದೂ.08392-240731, 244145, ಪಿಐ ಮೊ.9480803047, ಪಿಎಸ್‌ಐ ಮೊ.94808203085 ಮತ್ತು ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 