ಇಂಡಸ್ಟ್ರಿ, ಕಂಪನಿಗಳಲ್ಲಿ ರಾಜ್ಯೋತ್ಸವ ಆಚರಣೆ ಕಡ್ಡಾಯಕ್ಕೆ ಮನವಿ
Appeal to make Rajyotsava celebrations mandatory in industry and companies
ಇಂಡಸ್ಟ್ರಿ, ಕಂಪನಿಗಳಲ್ಲಿ ರಾಜ್ಯೋತ್ಸವ ಆಚರಣೆ ಕಡ್ಡಾಯಕ್ಕೆ ಮನವಿ
ಬೆಳಗಾವಿ 27: ಕೈಗಾರಿಕಾ ಪ್ರದೇಶಗಳಲ್ಲಿ ಹಾಗೂ ಕಂಪನಿಗಳಲ್ಲಿ ಭುವನೇಶ್ವರಿ ಪೂಜೆ ಸಲ್ಲಿಸುವ ಮೂಲಕ ಕರ್ನಾಟಕ ರಾಜ್ಯೋತ್ಸವ ಆಚರಣೆಯನ್ನು ಕಡ್ಡಾಯಗೊಳಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಿಸಿತು. ಮನವಿಯಲ್ಲಿ ಬೆಳಗಾವಿ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿರುವ ಹಲವು ಇಂಡಸ್ಟ್ರಿಗಳು ಹಾಗೂ ಕಂಪನಿಗಳಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸುವ ಪರಂಪರೆ ಕಾಣಿಸಿಕೊಂಡಿಲ್ಲ ಆದ್ದರಿಂದ ನವೆಂಬರ 1ರಂದು ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಪ್ರತಿಯೊಂದು ಇಂಡಸ್ಟ್ರಿ ಮತ್ತು ಕಂಪನಿಗಳಲ್ಲಿ ಕನ್ನಡ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ರಾಜ್ಯೋತ್ಸವ ಆಚರಿಸುವಂತೆ ಜಿಲ್ಲಾಡಳಿತದಿಂದ ಆದೇಶ ಹೊರಡಿಸಬೇಕೆಂದು ಕೋರಲಾಗಿದೆ. ಈ ಕ್ರಮದಿಂದ ಕನ್ನಡದ ಗೌರವ ಹೆಚ್ಚಿ ರಾಜ್ಯೋತ್ಸವದ ಆತ್ಮವನ್ನು ಪ್ರತಿಯೊಬ್ಬ ಉದ್ಯೋಗಸ್ಥರ ಮನಗಳಲ್ಲಿ ಬೇರೂರಿಸುವಲ್ಲಿ ಸಹಕಾರಿಯಾಗುತ್ತದೆ ಎಂದು ತಿಳಿಸಲಾಗಿದೆ. ಈ ಸಮಯದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ಜಿಲ್ಲಾಧ್ಯಕ್ಷ ಬಾಳಪ್ಪ ಬಿ. ಗುಡೆಗನಟ್ಟಿ, ಸಂಘದ ಪದಾಧಿಕಾರಿಗಳು ಮತ್ತು ಕನ್ನಡಾಭಿಮಾನಿಗಳು ಇದ್ದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 