ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ಮನವಿ
Appeal to register names in the voters' list
ಲೋಕದರ್ಶನ ವರದಿ
ಮಹಾಲಿಂಗಪುರ, ಜು.6: ಪ್ರಜಾಪ್ರಭುತ್ವದ ಯಶಸ್ಸಿಗೆ ಮತದಾರರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಕಾರ್ಯಕ್ರಮವನ್ನು ಪ್ರತಿಯೊಬ್ಬ ನಾಗರಿಕರೂ ಗಂಭೀರವಾಗಿ ಪರಿಗಣಿಸಿ, ಮತದಾರರ ಪಟ್ಟಿಯನ್ನು ದೋಷರಹಿತ ಹಾಗೂ ಸಮಗ್ರಗೊಳಿಸುವಲ್ಲಿ ಸಹಕರಿಸಬೇಕು ಎಂದು ಶಾಸಕ ಆರಿ್ಬ. ತಿಮ್ಮಾಪೂರ ಕರೆ ನೀಡಿದರು.
ಬೆಳಗಲಿ ಪಟ್ಟಣದ ಶ್ರೀ ಬಂದ ಲಕ್ಷ್ಮೀ ದೇವಸ್ಥಾನದ ಸಭಾಭವನದಲ್ಲಿ ಶನಿವಾರ ಆಯೋಜಿಸಿದ್ದ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮತದಾರರ ಪಟ್ಟಿ ಪ್ರಜಾಪ್ರಭುತ್ವದ ಮೂಲ ಆಧಾರವಾಗಿದ್ದು, ಅರ್ಹ ನಾಗರಿಕರು ಮತದಾನದ ಹಕ್ಕಿನಿಂದ ವಂಚಿತರಾಗಬಾರದು ಎಂದರು.
ಹೊಸದಾಗಿ 18 ವರ್ಷ ಪೂರ್ಣಗೊಳಿಸಿರುವ ಯುವಜನರು ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕು. ಈಗಾಗಲೇ ಹೆಸರು ಇರುವವರು ತಮ್ಮ ಹೆಸರು, ವಿಳಾಸ ಹಾಗೂ ಇತರೆ ಮಾಹಿತಿಯನ್ನು ಪರೀಶೀಲಿಸಿ, ಅಗತ್ಯವಿದ್ದರೆ ತಿದ್ದುಪಡಿ ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಎಸ್ಐಆರ್ ಪ್ರಕ್ರಿಯೆಯಲ್ಲಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್ಒಗಳು) ಮನೆಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುತ್ತಿದ್ದು, ಸಾರ್ವಜನಿಕರು ಅವರಿಗೆ ಸಂಪೂರ್ಣ ಸಹಕಾರ ನೀಡಬೇಕು. ತಪ್ಪು ಮಾಹಿತಿ ನೀಡದೇ, ಅಗತ್ಯ ದಾಖಲೆಗಳನ್ನು ಒದಗಿಸುವ ಮೂಲಕ ಮತದಾರರ ಪಟ್ಟಿಯನ್ನು ದೋಷರಹಿತಗೊಳಿಸಲು ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಮತದಾರರ ಜಾಗೃತಿ ಮೂಡಿಸುವ ಜವಾಬ್ದಾರಿ ಕೇವಲ ಅಧಿಕಾರಿಗಳದ್ದಲ್ಲ. ಕಾರ್ಯಕರ್ತರು, ಸಾರ್ವಜನಿಕರು ತಮ್ಮ ಕುಟುಂಬ ಸದಸ್ಯರು, ನೆರೆಹೊರೆಯವರು ಹಾಗೂ ಗ್ರಾಮಸ್ಥರಿಗೂ ಮತದಾರರ ಪಟ್ಟಿಯ ಮಹತ್ವದ ಬಗ್ಗೆ ಅರಿವು ಮೂಡಿಸಬೇಕು. ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕನ ಅಮೂಲ್ಯ ಹಕ್ಕಾಗಿದ್ದು, ಅದನ್ನು ಸಂರಕ್ಷಿಸುವುದು ಎಲ್ಲರ ಕರ್ತವ್ಯವಾಗಿದೆ ಎಂದು ಹೇಳಿದರು.
ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲಪಡಿಸಲು ಅರ್ಹರಾದ ಪ್ರತಿಯೊಬ್ಬರೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರೆ್ಡ ಮಾಡಿಸಿಕೊಳ್ಳುವಂತೆ ಮತ್ತು ಮತದಾರರ ಪಟ್ಟಿಯ ಪರಿಷ್ಕರಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಶಾಸಕ ತಿಮ್ಮಾಪೂರ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ, ಹೊಸ ಹೆಸರು ಸೇರೆ್ಡ, ಹೆಸರು ಕೈಬಿಡುವಿಕೆ, ತಿದ್ದುಪಡಿ ಹಾಗೂ ವಿಳಾಸ ಬದಲಾವಣೆ ಸೇರಿದಂತೆ ವಿವಿಧ ವಿಷಯಗಳ ಕುರಿತು ಅಧಿಕಾರಿಗಳು ಮಾಹಿತಿ ನೀಡಿದರು. ಸಾರ್ವಜನಿಕರ ಪ್ರಶ್ನೆಗಳಿಗೆ ಉತ್ತರಿಸಿ, ಅವರ ಅನುಮಾನಗಳಿಗೆ ಸ್ಪಷ್ಟನೆ ನೀಡಲಾಯಿತು.
ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷ ಸದುಗೌಡ ಪಾಟೀಲ, ಶಿವನಗೌಡ ಪಾಟೀಲ (ವಕೀಲರು), ಪ್ರವೀಣ ಪಾಟೀಲ, ಸಂಗಪ್ಪ ಅಮಾತಿ, ಈರ್ಪ ಕಿತ್ತೂರ, ಯಮನಪ್ಪ ದೊಡ್ಡಮನಿ, ಮುಬಾರಕ್ ಅತ್ತಾರ್, ನೀಲಕಂಠ ಸೈದಾಪುರ, ಮುತ್ತು ಸಣ್ಣಟ್ಟಿ, ಸಿದ್ದು ಧಡೂತಿ, ಶಿವಪ್ಪ ಮಂಟೂರ, ಮಲ್ಲಪ್ಪ ಹೊಸಪೇಟೆ, ಮುದಕಪ್ಪ ದೋಬಸಿ, ಪ್ರಕಾಶ ಕೊಣ್ಣೂರ, ಸವಿತಾ ಚವಳಿ, ಮಲ್ಲಪ್ಪ ಮಲಾವಡಿ, ಅಡಿವೆಪ್ಪ ಪೂಜಾರಿ, ಲಕ್ಕಪ್ಪ ಹಂಚಿನಾಳ, ಕಲ್ಲಪ್ಪ ಹೊಸಟ್ಟಿ, ಅಲ್ಲಪ್ಪ ಅರೇನಾಡ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ 