ಶತಮಾನದ ಇತಿಹಾಸವಿರುವ ಶಾಲೆಯ ಕೊಠಡಿಗಳಿಗೆ ದುರಸ್ತಿ ಅನುದಾನ ಬಿಡುಗಡೆ ಮಾಡುವಂತೆ ಮನವಿ
Appeal to release repair grant for school rooms with a century-old history
ಯರಗಟ್ಟಿ 14 : ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಮಕ್ಕಳ ದಾಖಲಾತಿ ಹೊಂದಿರುವ ಹಾಗೂ ಒಂದೂವರೆ ಶತಮಾನದ ಇತಿಹಾಸವಿರುವ ಪಟ್ಟಣದ ಸರ್ಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲೆಯ ಕೊಠಡಿಗಳಿಗೆ ದುರಸ್ತಿ ಅನುದಾನ ಬಿಡುಗಡೆ ಮಾಡುವಂತೆ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಹಾಗೂ ಸದಸ್ಯರು ಶನಿವಾರ ಶಾಸಕ ವಿಶ್ವಾಸ ವೈದ್ಯ ಅವರಿಗೆ ಮನವಿ ಸಲ್ಲಿಸಿದರು. ಇಲ್ಲಿ 1ರಿಂದ 8ನೇ ತರಗತಿಯ ವರೆಗೆ ಒಟ್ಟು 550 ವಿದ್ಯಾರ್ಥಿಗಳು ಓದುತ್ತಿದ್ದಾರೆ.
ಇಲ್ಲಿರುವ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಮೂಲ ಸೌಕರ್ಯ ಸಿಗದೆ ವಂಚಿತರಾಗಿದ್ದಾರೆ. ಕೊಠಡಿಗಳು ಸಂಪೂರ್ಣ ಶಿಥಿಲಗೊಂಡ ಬಗ್ಗೆ ಪಾಲಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಕ್ಷೇತ್ರ ಶಿಕ್ಷಣಾಧಿಕಾರಿ ಎ. ಎ. ಖಾಜಿ ಶಾಲೆಗೆ ಭೇಟಿ ನೀಡಿ ಶಾಲೆಯ ಪ್ರಸ್ತುತ ಶೈಕ್ಷಣಿಕ ವರ್ಷದಿಂದ ಈ ಶಾಲೆಯಲ್ಲಿ ಎಲ್.ಕೆ.ಜಿ ಮತ್ತು ಯುಕೆಜಿ ತರಗತಿಗಳು ಮಂಜುರಾಗಿದ್ದು ಸದ್ಯ ಎರಡು ಕೊಠಡಿಗಳ ಮತ್ತು ಮೇನ್ ಗೇಟ್ ದುರಸ್ತಿ ಕಾಮಗಾರಿ ಮಾಡಬೇಗಾಗಿದೆ ಎಂದು ಹೇಳಿದರು.
ಶಾಸಕ ವಿಶ್ವಾಸ ವೈದ್ಯ ಮನವಿ ಸ್ವೀಕರಿಸಿ ಮಾತನಾಡಿದ ಅವರು ಅಷ್ಟೇ ಅಲ್ಲದೆ ಶತಮಾನಗಳ ಕಂಡ ಶಾಲೆಗಳ ಅಭಿವೃದ್ಧಿಗೆ ದೊರೆಯುತ್ತಿರುವ ವಿಶೇಷ ಅನುದಾನವೂ ದೊರೆಯಲಿದ್ದು, ಆ ಹಣವನ್ನೂ ಕೊಠಡಿಗಳ ದುರಸ್ತಿಗೆ ಬಳಸಲಾಗುವುದು ಎಂದು ಮಾಹಿತಿ ನೀಡಿದರು.ಈ ವೇಳೆ ಪ. ಪಂ. ಸದಸ್ಯ ನಿಖಿಲ ಪಾಟೀಲ, ಎಸ್.ಡಿ.ಎಮ್.ಸಿ ಅಧ್ಯಕ್ಷ ಲಕ್ಕಪ್ಪ ಜಗದಾರ, ಉಪಾಧ್ಯಕ್ಷ ಸುನಿತಾ ಹಿರೇಮಠ, ಮುಖ್ಯೋಪಾಧ್ಯಾಯರಾದ ಎ.ಎ. ಮಕ್ತುಮನವರ, ಎಸ್.ಡಿ.ಎಂ.ಸಿ ಸದಸ್ಯರಾದ ದುಂಡಯ್ಯ ಹಿರೇಮಠ, ವಿಜಯ ಬಡಿಗೇರ , ಫಿರೋಜ ಖಾದ್ರಿ, ಹುಸೇನ ದಿಲಾವರನಾಯ್ಕ, ಮುದುಕಪ್ಪ ತಡಸಲೂರು, ಲಕ್ಷ್ಮಣ ಹಣಬರ, ಲಕ್ಷ್ಮಿ ಸುರೇಬಾನ, ರತ್ನಾ ಹಡಪದ, ಪ್ರೇಮಾ ಹೂಲಿಕಟ್ಟಿ, ಮೀನಾಕ್ಷಿ ಮದ್ದಾನಿ, ಶಕುಂತಲಾ ಹಡಪದ ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 