ಲೋಕದರ್ಶನ ವರದಿ
ರಾಯಬಾಗ: 1995ರ ನಂತರ ಪ್ರಾರಂಭವಾದ ಕನ್ನಡ ಮಾಧ್ಯಮ ಅನುದಾನ ರಹಿತ ಶಾಲಾ ಕಾಲೇಜಗಳಿಗೆ ಅನುದಾನ ಕೊಡಿಸಿ ಕನ್ನಡ ಶಾಲೆಗಳನ್ನು ಉಳಿಸಬೇಕೆಂದು ಒತ್ತಾಯಿಸಿ ಕನರ್ಾಟಕ ರಾಜು ಖಾಸಗಿ ಶಾಲಾ ಕಾಲೇಜುಗಳ ಆಡಳಿತ ಮಂಡಳಿ ಮತ್ತು ನೌಕರರ ಸಮನ್ವಯ ಹೋರಾಟ ಸಮಿತಿ ರಾಯಬಾಗ ತಾಲೂಕು ಘಟಕ ಅಧ್ಯಕ್ಷ ಅಭಿನವ ಬ್ರಹ್ಮಾನಂದ ಸ್ವಾಮೀಜಿಯವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ತಹಶೀಲ್ದಾರ ಡಿ.ಎಚ್.ಕೋಮಾರಅವರಿಗೆ ಶನಿವಾರ ಮನವಿ ಸಲ್ಲಿಸಿದರು.
ಸ್ವಾಮೀಜಿಯವರು ಮಾತನಾಡಿ, ಸ್ವಾತಂತ್ರ್ಯ ನಂತರ ಸಕರ್ಾರ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಅನುದಾನ ನೀಡುತ್ತಾ ಬಂದರೂ, ಅದು 1986ರಲ್ಲಿ ನಿಂತು ಹೋಗಿತ್ತು.ಆದರೆ 2006 ರಲ್ಲಿಅಧಿಕಾರಕ್ಕೆ ಬಂದ ಸಮ್ಮಿಶ್ರ ಸಕರ್ಾರ ಮತ್ತು 2008 ರಲ್ಲಿಅಧಿಕಾರಕ್ಕೆ ಬಂದ ಬಿಜೆಪಿ ನೇತೃತ್ವದ ಸಕರ್ಾರಗಳು 1986 ರಿಂದ 1995ರವರೆಗೆಕನ್ನಡ ಮಾಧ್ಯಮ ಶಾಲಾ ಕಾಲೇಜುಗಳಿಗೆ ಅನುದಾನವನ್ನು ನೀಡಿವೆ. ಆದರೆ ನಂತರ ಬಂದ ಸಕರ್ಾರಗಳು 1995ರ ನಂತರ ಪ್ರಾರಂಭವಾದ ಅನುದಾನ ರಹಿತ ಕನ್ನಡ ಮಾಧ್ಯಮ ಶಾಲಾ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸದೇ ಕನ್ನಡ ಶಾಲೆಗಳಿಗೆ ಅನ್ಯಾಯ ಮಾಡಿವೆ. ಇದರಿಂದ ಈ ಶಾಲೆಗಳಲ್ಲಿ ಕಲಿಯುವ ಲಕ್ಷಾಂತರ ಬಡ ಮಕ್ಕಳು ಸಕರ್ಾರದ ಸೌಲಭ್ಯಗಳಿಂದ ವಂಚಿತವಾಗಿವೆ. ಮತ್ತು ಈ ಶಾಲೆ ಶಿಕ್ಷಕರು 23 ವರ್ಷಗಳಿಂದ ಕನಿಷ್ಠ ಸಂಬಳಕ್ಕೆ ಕರ್ತವ್ಯ ನಿರ್ವಹಿಸುತ್ತಿರುವುದರಿಂದ ಅವರ ಜೀವನ ಶೋಚನೀಯವಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಕೂಡಲೇ ಸಕರ್ಾರ ನಮ್ಮ ಮನವಿಗೆ ಸ್ಪಂದಿಸಿ, 1995ರ ನಂತರ ಪ್ರಾರಂಭವಾದ ಕನ್ನಡ ಮಾಧ್ಯಮ ಅನುದಾನರಹಿತ ಶಾಲಾ ಕಾಲೇಜುಗಳನ್ನು ಅನುದಾನಕ್ಕೆ ಒಳಪಡಿಸಿ, ಕನ್ನಡ ಶಾಲೆಗಳನ್ನು ಉಳಿಸಬೇಕೆಂದು ಒತ್ತಾಯಿಸಿದರು. ಒಂದು ವೇಳೆ ನಮ್ಮ ಬೇಡಿಕೆಗೆ ಸ್ಪಂದಿಸದಿದ್ದರೆ ಬರುವ ದಿನಗಳಲ್ಲಿ ಜಿಲ್ಲಾ, ವಿಭಾಗ ಮತ್ತು ರಾಜ್ಯಮಟ್ಟದಲ್ಲಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.
ಸ್ವಾಮೀಜಿಯವರ ನೇತೃತ್ವದಲ್ಲಿ ಪ್ರತಿಭಟನಾಕಾರರು ಕೈಗೆ ಕಪ್ಪು ಬಟ್ಟೆಯನ್ನು ಕಟ್ಟಿಕೊಂಡು ಪಟ್ಟಣದ ಝೇಂಡಾಕಟ್ಟೆಯಿಂದ ತಹಶೀಲ್ದಾರ ಕಚೇರಿ ವರೆಗೆ ಘೋಷಣೆಕೂಗುತ್ತ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಪ್ರತಿಭಟನೆಯಲ್ಲಿ ನಿವೃತ್ತ ಶಿಕ್ಷಕ ಆರ್.ಎಮ್.ಸನದಿ, ಎನ್.ಎಸ್.ಚೌಗಲಾ, ಪಿ.ಎ.ಪಾಟೀಲ, ಎಲ್.ಎಸ್.ಚೌರಿ, ಎ.ಎಸ್.ಟೊಣ್ಣೆ ಸೇರಿದಂತೆ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿ ಸದಸ್ಯರು ಮತ್ತು ಶಿಕ್ಷಕರು ಪಾಲ್ಗೊಂಡಿದ್ದರು.