ಪೌರಕಾರ್ಮಿಕರ ಮೇಲೆ ನಡೆದಿರುವ ಹಲ್ಲೆಯನ್ನು ಖಂಡಿಸಿ ಮುಖ್ಯಮಂತ್ರಿಗಳಿಗೆ ಮನವಿ
Appeal to the Chief Minister condemning the attack on civil servants
ಗದಗ 11: ಹಾವೇರಿ ನಗರದಲ್ಲಿ ಬ್ಯಾನರ್ ತೆರವುಗೊಳಿಸುವ ವಿಚಾರವಾಗಿ ಅಮಾಯಕ ಇಬ್ಬರು ಪೌರಕಾರ್ಮಿಕರ ಮೇಲೆ ಸ್ಥಳೀಯ ಗುಂಡಾಗಳು ಮಾರಣಾಂತಿಕ ಹಲ್ಲೆಯನ್ನು ನಡೆಸಿರುವುದು ಸ್ಲಂ ಜನಾಂದೋಲನ-ಕರ್ನಾಟಕ ಮತ್ತು ಗದಗ ಜಿಲ್ಲಾ ಸ್ಲಂ ಸಮಿತಿಯಿಂದ ಖಂಡಿಸುತ್ತೇವೆ, ರಾಜ್ಯ ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಸಂಘಟನೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು, ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷರಾದ ಇಮ್ತಿಯಾಜ.ಆರ್.ಮಾನ್ವಿ ಮಾತನಾಡಿ ಈ ಘಟನೆಯಿಂದ ನಮ್ಮ ರಾಜ್ಯದಲ್ಲಿ ಶ್ರಮ ಜೀವಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ರಕ್ಷಣೆ ಇಲ್ಲದಂತಾಗಿದೆ, ನಗರದ ಸ್ವಚ್ಛತೆಗಾಗಿ ಶ್ರಮಿಸುತ್ತಿರುವ ನಮ್ಮ ಪೌರಕಾರ್ಮಿಕರಿಗೆ ರಾಜ್ಯ ಸರ್ಕಾರ ರಕ್ಷಣೆ ನೀಡಬೇಕು, ಹಾವೇರಿಯ ನಗರಸಭೆ ಎದುರು ಆರೋಪಿಗಳು ಕಾನೂನಿನ ಯಾವುದೇ ಭಯವಿಲ್ಲದೇ ಪೌರಕಾರ್ಮಿಕರ ಮೇಲೆ ಹಲ್ಲೆಯನ್ನು ನಡೆಸಿದ್ದಾರೆ, ಬ್ಯಾನರ್ ತೆರುವುಗೊಳಿಸಿರುವ ಒಂದು ಸಣ್ಣ ಕಾರಣಕ್ಕಾಗಿ ಅಮಾಯಕ ಪೌರಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆಯನ್ನು ನಡೆಸಿ ಗೊಂಡಾ ವರ್ತತನೆ ನಡೆಸಿರುವ ವಿರುಧ್ದ ರಾಜ್ಯ ಸರ್ಕಾರ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು,
ದೌರ್ಜನ್ಯಕ್ಕೆ ಒಳಗಾಗಿರವ ಪೌರಕಾರ್ಮಿಕರ ರಕ್ಷಣೆಗೆ ಸರ್ಕಾರ ಕ್ರಮಗೊಂಡು ಹಲ್ಲೆಗೊಳಗಾದ ಕುಟುಂಬಕ್ಕೆ ರಾಜ್ಯ ಸರ್ಕಾರ ಪರಿಹಾರ ನೀಡಬೇಕೆಂದು ಆಗ್ರಹಿಸಿದರು, ಸ್ಲಂ ಸಮಿತಿ ಕಾರ್ಯದರ್ಶಿ ಅಶೋಕ ಕುಸಬಿ ಮಾತನಾಡಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜಾತಿ ಧರ್ಮಗಳ ಹೆಸರಲ್ಲಿ ಕೋಮುವಾದಿಗಳು ಅಮಾಯಕರ ಮೇಲೆ ಹಲ್ಲೆಗಳನ್ನು ನಡೆಸುತ್ತಿದ್ದಾರೆ, ರಾಜ್ಯದ ಮುಖ್ಯಮಂತ್ರಿಳು ಕಂಡಿರುವ ಸರ್ವಜನಾಂಗದ ಶಾಂತಿಯ ತೋಟದಲ್ಲಿ ಅಶಾಂತಿಯನ್ನು ಹುಟ್ಟಿ ಹಾಕುತ್ತಿರುವ ವಿರುಧ್ದ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ ಮುಂದಾಗಬೇಕು, ರಾಜ್ಯದಲ್ಲಿ ಎಲ್ಲಾ ಜಾತಿ, ಧರ್ಮಗಳ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕುವ ವಾತಾವರಣ ನಿರ್ಮಾಣವಾಗಬೇಕು, ಯಾವುದೇ ಜಾತಿ ಮತ್ತು ಧರ್ಮದವರಾಗಲಿ ಇಂತಹ ಹೇಯ ಕೃತ್ಯವನ್ನು ಎಸಗಿದರೇ ಅಂತಹವರ ವಿರುಧ್ದ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು,
ಜಾತಿ, ಧರ್ಮಗಳ ಹೆಸರಲ್ಲಿ ಭೇದಭಾವ ಹುಟ್ಟಿಸಿ ರಾಜ್ಯಲ್ಲಿ ಕೋಮು ಗಲಭೆಗಳನ್ನು ನಡೆಸಲು ಪ್ರಚೋದನೆ ನೀಡುತ್ತಿರುವ ವಿರುಧ್ದ ರಾಜ್ಯ ಸರ್ಕಾರ ಕ್ರಮ ಕೈಗೊಂಡು ಇಂತಹ ಜನವಿರೋಧಿ, ಮಾನವ ವಿರೋಧಿ ಜಾತಿವಾದಿಗಳಿಗೆ ನಮ್ಮ ದೇಶದ ಸಂವಿಧಾನದ ಕಾನೂನು ಪ್ರಕಾರ ಹೆಡೆಮುರಿ ಕಟ್ಟಲು ರಾಜ್ಯ ಸರ್ಕಾರ ಮುಂದಾಗಬೇಕೆಂದು ಒತ್ತಾಯಿಸಿದರು, ಗದಗ ಜಿಲ್ಲಾ ಸ್ಲಂ ಮಹಿಳಾ ಸಮಿತಿ ಸಂಚಾಲಕಿ ಪರವೀನಬಾನು ಹವಾಲ್ದಾರ, ಸಮಿತಿ ಮುಖಂಡರಾದ ಇಬ್ರಾಹಿಂ ಮುಲ್ಲಾ, ಶರಣಪ್ಪ ಸೂಡಿ, ಮೆಹಬೂಬಸಾಬ ಬಳ್ಳಾರಿ, ಮಲೇಶಪ್ಪ ಕಲಾಲ, ಮಂಜುನಾಥ ಶ್ರೀಗಿರಿ, ಖಾಜಾಸಾಬ ಇಸ್ಮಾಯಿಲನವರ, ಮೌಲಾಸಾಬ ಗಚ್ಚಿ, ರೇಷ್ಮಾ ಢಾಲಾಯತ, ಮಕ್ತುಮಸಾಬ ಮುಲ್ಲಾನವರ, ರವಿ ಗೋಸಾವಿ, ಸಲೀಂ ಹರಿಹರ, ರಿಯಾಜ ಪಾಮಡಿ, ಬಾಷಾಸಾಬ ಡಂಬಳ, ಶಂಕ್ರ್ಪ ಶಿವಪೂರ, ರಾಕೇಶ ಗೋಸಾವಿ, ಮಂಜುಳಾ ಮುಂಡರಗಿ, ಚನ್ನಪ್ಪ ಲಕ್ಕುಂಡಿ ಮುಂತಾದ ಪದಾಧಿಕಾರಿಗಳು ಮನವಿ ನೀಡುವ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 