ಪಾರದರ್ಶಕ ಸಮೀಕ್ಷೆ ನಡೆಸಲು ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಮನವಿ

 ಪಾರದರ್ಶಕ ಸಮೀಕ್ಷೆ ನಡೆಸಲು ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಮನವಿ Appeal to the Chief Minister demanding a transparent survey

ಲೋಕದರ್ಶನ ವರದಿ 

ಪಾರದರ್ಶಕ ಸಮೀಕ್ಷೆ ನಡೆಸಲು ಒತ್ತಾಯಿಸಿ ಮುಖ್ಯಮಂತ್ರಿಗಳಿಗೆ ಮನವಿ 

ಗದಗ 10: ರಾಜ್ಯ ಸರ್ಕಾರದ ಆದೇಶದಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಶಾಸ್ವತ ಆಯೋಗದಿಂದ ಹಮ್ಮಿಕೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪಾರದರ್ಶಕತೆಯಿಂದ ನಡೆಸಲು ಒತ್ತಾಯಿಸಿ ಸ್ಲಂ ಜನಾಂದೋಲನ-ಕರ್ನಾಟಕ ಮತ್ತು ಗದಗ ಜಿಲ್ಲಾ ಸ್ಲಂ ಸಮಿತಿ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷರಾದ ಇಮ್ತಿಯಾಜ.ಆರ್‌.ಮಾನ್ವಿ ಮಾತನಾಡಿ ಕರ್ನಾಟಕ ರಾಜ್ಯ ಹಿಂದುಳಿದ ಆಯೋಗ 1995 ರ ಕಾಯ್ದೆಯ ಅನ್ವಯ ಒಂದು ಶಾಸನ ಬದ್ದ ಸ್ವಯತ್ತ ಸಾಂವಿಧಾನಿಕ ಸಂಸ್ಥೆಯಾಗಿದ್ದು, ಈ ಆಯೋಗವು ಪ್ರತಿ 10 ವರ್ಷಗಳಿಗೊಮ್ಮೆ ಕಡ್ಡಾಯವಾಗಿ ರಾಜ್ಯದ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಮಾಡಬೇಕು.  

ಈ ಸಮೀಕ್ಷೆಯನ್ನು ವಿರೋಧ ಮಾಡುತ್ತಿರುವ ವಿರೋಧ ಪಕ್ಷದ ನಾಯಕರು ಪ್ರಧಾನ ಮಂತ್ರಿಗಳು ಸಂಸತ್ತಿನಲ್ಲಿ ಮಾತನಾಡಿ ದೇಶಾದ್ಯಂತ ಜಾತಿಗಣತಿ ನಡೆಸುತ್ತೇವೆ ಎಂದು ಘೋಷಣೆ ಮಾಡಿದಾಗ ವಿರೋಧಿಸದೆ ಇದ್ದವರು ಈಗ ರಾಜ್ಯದ ಸಮೀಕ್ಷೆಯನ್ನು ವಿರೋಧ ಮಾಡುತ್ತಿರುವುದೇಕೆ ರಂದು ರಾಜ್ಯದ ಜನತೆ ಪ್ರಶ್ನೆ ಮಾಡುತ್ತಿದ್ದಾರೆ. ಈ ಸಮೀಕ್ಷೆಯಲ್ಲಿ ರಾಜ್ಯದ ಜನತೆ ಅತಿ ಉತ್ಸಹದಿಂದ ಪಾಲ್ಗೊತ್ತಿರುವುದು ವಿರೋಧಿಗಳ ಎದೆಯಲ್ಲಿ ನಡುಕವನ್ನು ಉಂಟು ಮಾಡಿದೆ. ಸಮೀಕ್ಷೆ ವಿರುಧ್ದವಾಗಿ ವಿರೋಧ ಪಕ್ಷದ ಮುಖಂಡರಗಳು ನಡೆಸುತ್ತಿರುವ ಕುತಂತ್ರಗಳಿಗೆ ಮುಖ್ಯಮಂತ್ರಿಗಳು ಗಮನ ನೀಡದೇ ಹಿಂದುಳಿದ ಆಯೋಗದಿಂದ ನಡೆಸಲಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪಾರದರ್ಶಕತೆಯಿಂದ ನಡೆಸಿ ರಾಜ್ಯದ ಒಂದು ಕುಟುಂಬವು ಕೂಡಾ ಸಮೀಕ್ಷೆಯಿಂದ ವಂಚಿತವಾಗದೇ ಈ ಸಮೀಕ್ಷೆಯಲ್ಲಿ ಎಲ್ಲರೂ ಪಾಲ್ಗೊಳುವಂತೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮೂಲಕ ಮೂಖಾಂತರ ಒತ್ತಾಯಿಸಲಾಗಿದೆ.  

ಮನವಿ ನೀಡುವ ಸಂದರ್ಭದಲ್ಲಿ ಸ್ಲಂ ಸಮಿತಿ ಕರ್ಯದರ್ಶಿ ಅಶೋಕ ಕುಸಬಿ, ಮುಖಂಡರಾದ ಮೌಲಾಸಾಬ ಗಚ್ಚಿ, ಮೆಹಬೂಬಸಾಬ ಬಳ್ಳಾರಿ, ವೆಂಕಟೇಶ ಬಿಂಕದಕಟ್ಟಿ, ಖಾಜಾಸಾಬ ಇಸ್ಮಾಯಿಲನವರ, ಸಲೀಂ ಹರಿಹರ, ಭರತ ನವಲಗುಂದ, ರಿಜ್ವಾನ ಮುಲ್ಲಾ, ಖಾಜಾಸಾಬ ಬಳ್ಳಾರಿ, ಶರಣಪ್ಪ ಸೂಡಿ ಗೌಸಸಾಬ ಅಕ್ಕಿ ಮುಂತಾದವರು ಉಪಸ್ಥಿತರಿದ್ದರು.