ಒಳಮೀಸಲಾತಿ ಜಾರಿಗೊಳಿಸಲು ಮುಖ್ಯ ಮಂತ್ರಿಯವರಿಗೆ ಮನವಿ
Appeal to the Chief Minister to implement internal reservation
ಲೋಕದರ್ಶನ ವರದಿ
ಹಾವೇರಿ 25: ಒಳಮೀಸಲಾತಿ ಇಲ್ಲದೇ ಸರ್ಕಾರಿ ಖಾಲಿ ಹುದ್ದೆಗಳ ನೇಮಕ ಮಾಡಲು ಆದೇಶ ಹೊರಡಿಸಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ವತಿಯಿಂದ ಪ್ರತಿಭಟಿಸಿ ಅಪರ ಜಿಲ್ಲಾಧಿಕಾರಿಗಳಾದ ಡಾ.ನಾಗರಾಜಎಲ್ ಅವರ ಮೂಲಕ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.
ರಾಜ್ಯಾದ್ಯಂತ 35 ವರ್ಷಗಳಿಂದ ನಿರಂತರ ಹೋರಾಟ ನಡೆಸಿದ್ದೇವೆ.ಸುಪ್ರೀಂ ಕೋರ್ಟ್ ಪರಿಶಿಷ್ಟ ಮೀಸಲಾತಿ ವರ್ಗೀಕರಿಸಲುರಾಜ್ಯಕ್ಕೆ ಅವಕಾಶ ನೀಡಿತು.ರಾಜ್ಯ ಸರ್ಕಾರಗೌರವಾನ್ವಿತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗ ರಚಿಸಿ ವರದಿ ಪಡೆದು ಸಚಿವ ಸಂಪುಟದಲ್ಲಿ ಅನುಮೋಧಿಸಿತು. ಆ ನಂತರ ವಿಧಾನ ಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಮಸೂದೆ ಅಂಗೀಕರಿಸಿ ರಾಜ್ಯಪಾಲರ ಸಹಿ ನಂತರ ವಿಧೇಯಕವಾಗಿದೆ. ಕಾಂಗ್ರೆಸ್ ಸರ್ಕಾರ ಆರಂಭದಿಂದಲೂ ಒಳಮೀಸಲಾತಿ ವಿರೋಧಿಯಾಗಿದೆ.
ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಳಮೀಸಲಾತಿ ವಿರೋಧಿಗಳ ರಾಜಕೀಯ ಒತ್ತಡದ ಪ್ರಭಾವಕ್ಕೆ ಒಳಗಾಗಿದ್ದಾರೆ. ಒಳಮೀಸಲಾತಿ ಜಾರಿ ಮಾಡಲು ವಿಶೇಷ ಸಚಿವ ಸಂಪುಟದ ದೀರ್ಘ ಚರ್ಚೆಯ ಅಗತ್ಯವಿಲ್ಲ ಯಾವ ಕೋರ್ಟ್‌ತಡೆಯಾಜ್ಞೆ ಹಾಗೂ ತಾಂತ್ರಿಕ ಆಡಚಣೆಗಳಿಲ್ಲ.ಅಡಚಣೆ ಇರುವುದು ಸರ್ಕಾರದಲ್ಲಿ ಆದ್ದರಿಂದ ಮುಖ್ಯಮಂತ್ರಿಗಳು ಸಮರ್ಥ ಹಾಗೂ ನಿಷ್ಟುರ ನಿರ್ಧಾರ ಮಾಡಬೇಕಿದೆ. ಹಲವಾರು ಹಕ್ಕೊತ್ತಾಯಗಳನ್ನು ಇದೇ ಅವಧಿಯಲ್ಲಿ ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕರಾದ ಉಡಚಪ್ಪ ಮಾಳಗಿ,ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಜಿಲ್ಲಾಧ್ಯಕ್ಷರಾದ ಮಂಜಪ್ಪ ಮರೋಳ,ಜಿಲ್ಲಾ ಮುಖಂಡರಾದ ಜಗದೀಶ ಹರಿಜನ,ಶಿವಲಿಂಗಪ್ಪ ನಿಂಗಪ್ಪನವರ,ಮಹೇಶಪ್ಪ ಶಾಕಾರ,ರಾಜಪ್ಪ ಸೋಮನಕಟ್ಟಿ, ವೆಂಕಟೇಶ ಹಾವನೂರ, ಪುನೀತ ಹಾವನೂರ,ಯಶವಂತ ಹಾವನೂರ,ನಿಂಗಪ್ಪ ಸೇರಿದಂತೆ ಪದಾಧಿಕಾರಿಗಳು ಹಾಗೂ ಸಂಘಟನೆಯ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 