ಹಾಸ್ಟೆಲ್ ಗಳಿಗೆ ಮೂಲಭೂತ ಸೌಲಭ್ಯ ಒದಗಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ
Appeal to the Chief Minister to provide basic facilities to hostels
ಮುದ್ದೇಬಿಹಾಳ 25: ಮುದ್ದೇಬಿಹಾಳ ವಿದ್ಯಾರ್ಥಿ ವೇತನ ಬಿಡುಗಡೆ ಹಾಗೂ ಹಾಸ್ಟೆಲ್ ಗಳ ಮೂಲಭೂತ ಸೌಲಭ್ಯವನ್ನು ಸರಿಪಡಿಸುವಂತೆ ಆಗ್ರಹಿಸಿ ಪಟ್ಟಣದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸದಸ್ಯರು ಬುಧವಾರ ಪ್ರತಿಭಟನೆ ನಡೆಸಿ ಶಿರಸ್ಥೆದಾರ ಎಂ ಎ ಬಾಗೇವಾಡಿಯವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಒಂದು ದೇಶ ಹಾಗೂ ರಾಜ್ಯ ಅಭಿವೃದ್ಧಿಯಾಗಬೇಕೆಂದರೆ ಅಲ್ಲಿನ ಶಿಕ್ಷಣ ವ್ಯವಸ್ಥೆಗೆ ಬೇಕಾಗಿರುವ ಮೂಲಭೂತ ಸೌಲಭ್ಯಗಳು ವಿದ್ಯಾರ್ಥಿಗಳಿಗೆ ಒದಗಿಸುವುದು ಸರ್ಕಾರಗಳ ಪ್ರಮುಖ ಕರ್ತವ್ಯವಾಗಿದೆ ಗ್ರಾಮೀಣ ಬಡ ಪ್ರತಿಭಾವಂತ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಕಾರಣಕ್ಕೆ ಹಲವಾರು ಯೋಜನೆಗಳನ್ನ ಜಾರಿಗೆ ತರಲಾಗುತ್ತಿದೆ ಆದರೆ ಅವುಗಳ ಸಮರ್ಕ ಅನುಷ್ಠಾನವಾಗದೆ ವಿದ್ಯಾರ್ಥಿಗಳು ತೊಂದರೆ ಅನುಭವಿಸುವಂತಾಗಿದೆ. ರಾಜ್ಯದಲ್ಲಿ ಆಡಳಿತ ಮಾಡುತ್ತಿರುವ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಸರಿಯಾದ ಹಾಸ್ಟೆಲ್ ವ್ಯವಸ್ಥೆ ಹಾಗೂ ವಿದ್ಯಾರ್ಥಿ ವೇತನವನ್ನು ನೀಡದೆ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡುತ್ತಿದೆ.
ಕರ್ನಾಟಕ ರಾಜ್ಯದಲ್ಲಿ ಹಿಂದುಳಿದ ವರ್ಗಗಳ ಇಲಾಖೆಯ ವ್ಯಾಪ್ತಿಯಲ್ಲಿ 1,258 ಹಾಸ್ಟೆಲ್ ಗಳಿದ್ದು 1,68,833 ವಿದ್ಯಾರ್ಥಿಗಳು ವಸತಿ ನಿಲಯಗಳಲ್ಲಿ ವಾಸವಿದ್ದಾರೆ, ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ 1972 ವಸತಿ ನಿಲಯಗಳಿದ್ದು 1,87,200 ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಲ್ಲಿ ಉಳಿಯಲು ಅವಕಾಶ ನೀಡಬಹುದಾಗಿದೆ, ಆದರೆ ಕರ್ನಾಟಕ ರಾಜ್ಯದಲ್ಲಿ ಹಿಂದಿನ 3 ವರ್ಷಗಳ ಸರಕಾರದ ವರದಿ ಪ್ರಕಾರ ಅರ್ಜಿ ಸಲ್ಲಿಸಿದ 100 ವಿದ್ಯಾರ್ಥಿಗಳಲ್ಲಿ 40 ರಿಂದ 50 ವಿದ್ಯಾರ್ಥಿಗಳಿಗೆ ಮಾತ್ರ ವಸತಿ ನಿಲಯಗಳಲ್ಲಿ ಅವಕಾಶ ಸಿಗುತ್ತಿದೆ. ಇನ್ನುಳಿದ ವಿದ್ಯಾರ್ಥಿಗಳು ವಸತಿ ನಿಲಯಗಳಿಂದ ವಂಚಿತರಾಗುತ್ತಿದ್ದಾರೆ ಸರ್ಕಾರ ವಸತಿ ನಿಲಯಗಳಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಆಯಾ ಜಿಲ್ಲೆಗಳಿಗೆ ಹೊಸ ವಸತಿ ನಿಲಯಗಳನ್ನು ಘೋಷಣೆ ಮಾಡಬೇಕು. ರಾಜ್ಯದಲ್ಲಿ ಕಳೆದ ನಾಲ್ಕು ತಿಂಗಳುಗಳಿಂದ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಲ್ಲಿ ನೀಡುತ್ತಿದ್ದ ಕಿಟ್ ಗಳು ತಲುಪುತ್ತಿಲ್ಲ, 40 ಹಿ 50 ವಿದ್ಯಾರ್ಥಿಗಳಿಗೆ ಸೇರಿ 2-3 ಶೌಚಾಲಯಗಳು ಇವೆ, 100 ವಿದ್ಯಾರ್ಥಿಗಳು ಇರಬೇಕಾದ ವಸತಿ ನಿಲಯಗಳಲ್ಲಿ 140 150 ವಿದ್ಯಾರ್ಥಿಗಳನ್ನ ಇರಿಸುವಂತಾಗಿದೆ, ಪ್ರತಿ ತಿಂಗಳು ಊಟದ ವೆಚ್ಚಕ್ಕೆ ಪ್ರತಿ ವಿದ್ಯಾರ್ಥಿಗೆ 1, 850 ರೂ ಮಾತ್ರ ನೀಡಲಾಗುತ್ತಿದೆ ಈ ಹಣದಲ್ಲಿ ಡಯಟ್ ಚಾರ್ಟ್ ನಲ್ಲಿ ಇರುವಂತೆ ಸರಿಯಾಗಿ ಆಹಾರವನ್ನು ಕೊಡುವುದಕ್ಕೆ ಆಗುವುದಿಲ್ಲ ಕಾರಣ ಸರಕಾರ ಈ ಹಣವನ್ನು ಹೆಚ್ಚಳ ಮಾಡಬೇಕು, ಈ ರೀತಿ ಹಲವಾರು ಸಮಸ್ಯೆಗಳು ರಾಜ್ಯದ ವಸತಿ ನಿಲಯಗಳಲ್ಲಿದ್ದು ರಾಜ್ಯ ಸರ್ಕಾರ ತಕ್ಷಣವೇ ಹಾಸ್ಟೆಲ್ ಗಳ ಮೂಲಭೂತ ಸೌಲಭ್ಯಕ್ಕೆ ವಿಶೇಷ ಅನುದಾನವನ್ನು ನೀಡಿ ಸುವ್ಯವಸ್ಥಿತ ಹಾಸ್ಟೆಲಗಳನ್ನು ನಿರ್ಮಾಣ ಮಾಡಬೇಕು.
ಸಧ್ಯ ಲಕ್ಷಾಂತರ ಬಡ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನವನ್ನು ನಂಬಿ ಶಿಕ್ಷಣವನ್ನ ಪಡೆಯುತ್ತಿದ್ದಾರೆ, ತಮ್ಮ ಶಿಕ್ಷಣಕ್ಕೆ ಸರ್ಕಾರಗಳು ನೀಡುವ ವಿದ್ಯಾರ್ಥಿವೇತನ ಸಹಕಾರಿಯಾಗಲಿದೆ ಎಂಬ ಭಾವನೆಯೊಂದಿಗೆ ಅರ್ಜಿ ಸಲ್ಲಿಸಿದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಕಳೆದ ವರ್ಷದ ವಿದ್ಯಾರ್ಥಿವೇತನ ಜಮೆಯಾಗದೆ ಬಹಳಷ್ಟು ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಕಾರ್ಮಿಕರ ಮಕ್ಕಳ ವಿದ್ಯಾರ್ಥಿ ವೇತನವನ್ನು ಕಡಿತಗೊಳಿಸಿರುವುದು, ವಿದ್ಯಾಸಿರಿ ವಿದ್ಯಾರ್ಥಿ ವೇತನ ಸರಿಯಾಗಿ ಜಮೆಯಾಗದೇ ಇರುವುದು, ರೈತ ವಿದ್ಯಾನಿಧಿಯನ್ನ ರದ್ದುಗೊಳಿಸಿರುವುದು, ಹಾಗೂ ಇನ್ನುಳಿದ ವಿದ್ಯಾರ್ಥಿ ವೇತನವು ಸರಿಯಾಗಿ ವಿದ್ಯಾರ್ಥಿಗಳಿಗೆ ಜಮೆ ಮಾಡದೆ ವಿದ್ಯಾರ್ಥಿ ವಿರೋಧಿ ನೀತಿಯನ್ನ ಅನುಸರಿಸುತ್ತಿರುವ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಸಂಬಂಧಿಸಿದ ಸಚಿವರು ತಕ್ಷಣವೇ ವಿದ್ಯಾರ್ಥಿವೇತನವನ್ನು ವಿದ್ಯಾರ್ಥಿಗಳ ಖಾತೆಗೆ ಜಮೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೇ ರಾಜ್ಯದಾಧ್ಯಂತ ಉಗ್ರ ಹೋರಾಟ ಅನಿವಾರ್ಯವಾಗುತ್ತದೆ ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಗ್ರಹಿಸುತ್ತದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 