ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ನಡೆದಿರುವ ಅಕ್ರಮ ಭ್ರಷ್ಟಾಚಾರ ತನಿಖೆ ನಡೆಸಲು ಜಿಲ್ಲಾಧಿಕಾರಿಗಳಿಗೆ ಮನವಿ
Appeal to the District Magistrate to investigate the illegal corruption in the Public Education Depa
ಲೋಕದರ್ಶನ ವರದಿ
ವಿಜಯಪುರ 13 : ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ನಡೆದಿರುವ ಅಕ್ರಮಗಳು, ನಿಯಮ ಉಲ್ಲಂಘನೆಗಳು ಹಾಗೂ ಭ್ರಷ್ಟಾಚಾರದ ಕುರಿತು ಸಮಗ್ರ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಕನ್ನಡಿಗರ ವೇದಿಕೆಯ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕನ್ನಡಿಗರ ವೇದಿಕೆಯ ರಾಜ್ಯಾಧ್ಯಕ್ಷರಾದ ಲಕ್ಷ್ಮಣ ಕಂಬಾಗಿ ಮಾತನಾಡಿ, ಸಾರ್ವಜನಿಕ ಶಿಕ್ಷಣ ಇಲಾಖೆ ಸಮಾಜದ ಅಭಿವೃದ್ಧಿ ಹಾಗೂ ಭವಿಷ್ಯದ ಪೀಳಿಗೆಯ ಶಿಕ್ಷಣದ ಗುಣಮಟ್ಟವನ್ನು ರೂಪಿಸುವ ಅತ್ಯಂತ ಪ್ರಮುಖ ಇಲಾಖೆ ಆಗಿದೆ.
ಈ ಇಲಾಖೆಯ ಆಡಳಿತ ಕ್ರಮಗಳು ಪಾರದರ್ಶಕತೆ, ನಿಷ್ಠೆ ಹಾಗೂ ಕಾನೂನುಬದ್ಧತೆಯ ಆಧಾರದ ಮೇಲೆ ನಡೆಯುವುದು ಅನಿವಾರ್ಯವಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಕಾರ್ಯವೈಖರಿಯಲ್ಲಿ ಕೆಲವು ಗಂಭೀರ ಅಕ್ರಮಗಳು ಮತ್ತು ನಿಯಮ ಉಲ್ಲಂಘನೆಗಳು ನಡೆದಿರುವ ಕುರಿತು ವಿಶ್ವಾಸಾರ್ಹ ಮಾಹಿತಿ ಹಾಗೂ ಸಂಬಂಧಿತ ದಾಖಲೆಗಳು ನಮ್ಮ ಗಮನಕ್ಕೆ ಬಂದಿವೆ. ಇಂತಹ ಘಟನೆಗಳು ಶಿಕ್ಷಣ ವ್ಯವಸ್ಥೆಯ ನಂಬಿಕೆ ಹಾಗೂ ಶಿಸ್ತಿನ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಈ ವಿಷಯಗಳನ್ನು ನಿಮ್ಮ ಗಮನಕ್ಕೆ ತರಲಾಗುತ್ತಿದೆ.
ದೈಹಿಕ ಶಿಕ್ಷಕರ ಬಡ್ತಿ ಪ್ರಕ್ರಿಯೆಯಲ್ಲಿ ಸರ್ಕಾರ ಹೊರಡಿಸಿದ ಸುತ್ತೋಲೆಗಳಲ್ಲಿರುವ ನಿಯಮಾವಳಿಗಳನ್ನು ಮೀರಿ ಕ್ರಮ ಕೈಗೊಳ್ಳಲಾಗಿದೆ ಎಂಬ ಗಂಭೀರ ಆರೋಪಗಳು ವ್ಯಕ್ತವಾಗಿವೆ. ಈ ಸಂಬಂಧಿತ ಸರ್ಕಾರಿ ಸುತ್ತೋಲೆಗಳ ಪ್ರತಿಗಳು ಹಾಗೂ ಇತರ ದಾಖಲೆಗಳು ನಮ್ಮ ಬಳಿ ಲಭ್ಯವಿದ್ದು ಅಗತ್ಯವಿದ್ದಲ್ಲಿ ಪರೀಶೀಲನೆಗಾಗಿ ಸಲ್ಲಿಸಲು ಸಿದ್ಧರಾಗಿದ್ದೇವೆ. "ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ 14 ಜನರ ನಿಯೋಜನೆ ಮಾಡುವ ಪ್ರಕ್ರಿಯೆಯಲ್ಲಿ ಶಿಕ್ಷಣ ಇಲಾಖೆಯ ಆಯುಕ್ತರ ಅನುಮತಿ ಪಡೆಯದೇ ಇಬ್ಬರನ್ನು ತಾತ್ಕಾಲಿಕವಾಗಿ ನಿಯೋಜಿಸಿರುವುದು” ಎಂಬ ಆರೋಪಗಳು ಕೇಳಿಬರುತ್ತಿವೆ.
ಇಂತಹ ಕ್ರಮಗಳು ಸರ್ಕಾರದ ನಿಗದಿತ ಆಡಳಿತಾತ್ಮಕ ನಿಯಮಗಳಿಗೆ ವಿರುದ್ಧವಾಗಿರುವ ಸಾಧ್ಯತೆ ಇದೆ. 353 ಶಾಲೆಗಳಿಗೆ ಮಾನ್ಯತೆ ನವೀಕರಣ ನೀಡಿರುವ ಪ್ರಕ್ರಿಯೆಯಲ್ಲಿ ನಿಯಮ ಉಲ್ಲಂಘನೆಗಳು ಮತ್ತು ಅಕ್ರಮಗಳು ನಡೆದಿರುವ ಸಾಧ್ಯತೆ ಇದೆ ಎಂಬ ಅನುಮಾನ ವ್ಯಕ್ತವಾಗಿದೆ. ಈ ವಿಷಯವು ಶಿಕ್ಷಣ ಸಂಸ್ಥೆಗಳ ಮಾನ್ಯತಾ ವ್ಯವಸ್ಥೆಯ ಪಾರದರ್ಶಕತೆಯ ಬಗ್ಗೆ ಪ್ರಶ್ನೆ ಎಬ್ಬಿಸುವಂತಹದ್ದಾಗಿದೆ ಎಂದರು.
ಈ ಸಂದರ್ಭದಲ್ಲಿ ಆಮ್ ಆದ್ಮಿ ಭೋಗೇಶ ಸೋಲಾಪೂರ ಮಾತನಾಡಿ, ವಿಜಯಪುರ ಜಿಲ್ಲೆಯ ಶಿಕ್ಷಣ ಇಲಾಖೆಯಲ್ಲಿ ಡಿಡಿಪಿಐ ಲಾಗಿನ್ ಐಡಿ ಕದ್ದು ಮಾನ್ಯತೆ ನವೀಕರಣಗೊಳಿಸಿದ್ದಾರೆ ಎಂದು ಡಿಡಿಪಿಐ ಅವರು ಹೇಳಿದ್ದಾರೆ. ಈ ಸಂಬಂಧ ಡಿಪಿಐ ಅವರು ಎಫ್ಐಆರ್ ದಾಖಲು ಮಾಡಿದ್ದಾರೆ. ಕೂಡಲೇ ಡಿಡಿಪಿಐ ಅವರು ನವೀಕರಿಸಿದ ಎಲ್ಲ ಶಾಲೆಗಳನ್ನು ರದ್ದುಪಡಿಸಬೇಕು. ಹೋದ ಬಾರಿ ಎಸ್ಎಸ್ಎಲ್ಸಿ ಫಲಿತಾಂಶ ಕಡಿಮೆಮಟ್ಟದಲ್ಲಿ ಬಂದ ಕಾರಣ ವಿಜಯಪುರ ಮಾನ ಮರ್ಯಾದೆ ರಾಜ್ಯ ಮಟ್ಟದಲ್ಲಿ ಹರಾಜುವಾಗಿದೆ. ಫಲಿತಾಂಶ ಸುಧಾರಣೆ ಮಾಡುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಶ್ರಮಿಸದೆ ಇಂತಹ ಭ್ರಷ್ಟಾಚಾರದಲ್ಲಿ ಮೂಗು ತೋರಿಸಿ ವಯಕ್ತಿಕ ಸ್ವಾರ್ಥ ಮೆರೆಯುತ್ತಿರುವುದು ದುರದುಷ್ಟಕರ ಸಂಗತಿ ಎಂದರು.
ಈ ಸಂದರ್ಭದಲ್ಲಿ ವಾಲ್ಮೀಕಿ ಸಮಾಜದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಟಗಿ ಮಾತನಾಡಿ, ಸಾರವಾಡ ಗ್ರಾಮದ ಜಗದಂಬಾ ಪ್ರಾಥಮಿಕ ಖಾಸಗಿ ಶಾಲೆ ಸರ್ಕಾರಿ ಕೆರೆ ಅಂಗಳದಲ್ಲಿ ನಡೆಸುತ್ತಿದ್ದು ಸರಕಾರಿ ಶಾಲೆಯ ಎದುಡುಗಡೆ ಶಾಲಾ ನೋಂದಣಿಯನ್ನು ಕೊಟ್ಟಿರುವುದು ಇದು ಕಾನೂನು ಬಾಹೀರವಾಗಿದೆ. ಕೆರೆ ಒಡೆದರೆ ವಿದ್ಯಾರ್ಥಿಗಳ ಜೀವಕ್ಕೆ ಪ್ರಾಣಾಪಾಯವಿದ್ದು ಅನುಮತಿ ನೀಡಿದ್ದನ್ನು ಕೂಡಲೇ ಜಿಲ್ಲಾಡಳಿತ ರದ್ದು ಪಡಿಸಬೇಕು. ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಪ್ರಾಣಾಪಾಯ ಹಾನಿಯಾಗಿದ್ದೆ ಆದಲ್ಲಿ ಜಿಲ್ಲಾಡಳಿತ ಹಾಗೂ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ ಎಂದು ಎಚ್ಚರಿಸಿದರು. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಕನ್ನಡಿಗರ ವೇದಿಕೆಯ ಮಹಿಳಾ ಘಟಕದ ಜಿಲ್ಲಾಧ್ಯಕ್ಷರಾದ ಪೂಜಾ ಜುಮ್ಮೆವಾಲೆ, ಇಂದುಮತಿ ಜಾಲವಾದಿ, ಪ್ರೇಮಾ ಲೋನಾರಮಠ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 