ರಾಜ್ಯ ಸರಕಾರ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ಘೋಷಿಸಿದ ಅನುದಾನಗಳನ್ನು ಖಂಡಿಸಿ ರಾಜ್ಯಪಾಲರಿಗೆ ಮನವಿ
ರಾಯಬಾಗ: ರಾಜ್ಯ ಸರಕಾರ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ಘೋಷಿಸಿದ ಅನುದಾನಗಳನ್ನು ಖಂಡಿಸಿ ಮಂಗಳವಾರ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ಗ್ರೇಡ್2 ತಹಶೀಲ್ದಾರ ಪರಮಾನಂದ ಮಂಗಸೂಳಿ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ಜಯದೀಪ ದೇಸಾಯಿ ಮಾತನಾಡಿ, ಕರ್ನಾಟಕ ಸರಕಾರವು ಇತ್ತಿಚೇಗೆ ತನ್ನ ಬಜೆಟ್ ದಲ್ಲಿ ಅಲ್ಪಸಂಖ್ಯಾತರಿಗೆ ವಿಶೇಷವಾದ ಅನುದಾನವನ್ನು ನೀಡಿ ಹಿಂದೂಗಳ ಮೇಲೆ ಅನ್ಯಾಯ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಸರಕಾರವು ಅಲ್ಪಸಂಖ್ಯಾತರ ಅಭಿವೃದ್ದಿ ನೆಪದಲ್ಲಿ 4500 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಿದೆ. ಅದಲ್ಲದೆ ಸರಕಾರದ ಟೆಂಡರ್ ಗಳಲ್ಲಿ ಅಲ್ಪಸಂಖ್ಯಾತರಿಗೆ 4ಅ ಮೀಸಲಾತಿ ನೀಡುವ ಮಸೂದೆಯನ್ನು ಸಹ ಮಂಡಿಸಲಾಗಿದೆ. ಭಾರತದ ಸಂವಿಧಾನದಲ್ಲಿ ಧರ್ಮಾಧಾರಿತ ಮೀಸಲಾತಿಗೆ ಅವಕಾಶವಿಲ್ಲದಿರುವಾಗಲೂ, ಸರಕಾರವು ಸಂವಿಧಾನಕ್ಕೆ ವಿರುದ್ಧವಾಗಿ ಸಂವಿಧಾನಬಾಹಿರ ಮೀಸಲಾತಿಯನ್ನು ನೀಡಿದೆ ಎಂದೂ ಆರೋಪಿದರು.ಸರಕಾರವು ಸಾರ್ವಜನಿಕರ ತೆರಿಗೆ ಹಣವನ್ನು ಕೇವಲ ಒಂದೇ ಸಮುದಾಯದ ಅಭಿವೃದ್ಧಿಗೆ ವಿನಿಯೋಗಿಸುವುದು ಭಾರತದ ಸಂವಿಧಾನದ ಉಲ್ಲಂಘನೆಯಾಗಿದೆ. ಹಾಗಾಗಿ ಸರಕಾರದ ಈ ವರ್ಷದ ಹಣಕಾಸು ವಿಧೇಯಕಕ್ಕೆ ಅನುಮೋದನೆ ನೀಡಬಾರದು ಎಂದು ಮನವಿ ಮಾಡಿದರು.
ಜೈದೀಪ ದೇಸಾಯಿ, ಅಭಿಷೇಕ ನರಸಗೌಡರ, ಸಿದ್ಧಾರ್ಥ ಬಂತೆ ಹಾಗೂ ಕಾರ್ಯಕರ್ತರು ಇದ್ದರು.