ನಗರದ ಕೊಳಗೇರಿಗಳ ಅಭಿವೃಧ್ದಿಯಲ್ಲಿ ಆಗುತ್ತಿರುವ ತಾರತಮ್ಯ ನೀತಿಯನ್ನು ಖಂಡಿಸಿ ಪೌರಾಯುಕ್ತರಿಗೆ ಮನವಿ
Appeal to the Municipal Commissioner condemning the discriminatory policy in the development of the
ಲೋಕದರ್ಶನ ವರದಿ
ಗದಗ 03 : ಗದಗ-ಬೆಟಗೇರಿ ನಗರದಲ್ಲಿ 80ಕ್ಕೊ ಹೆಚ್ಚು ಕೊಳಗೇರಿ ಪ್ರದೇಶಗಳು ಇದ್ದು ಇದರಲ್ಲಿ 48 ಗುಡಿಸಲು ಪ್ರದೇಶಗಳನ್ನು ಸ್ಲಂ ಕಾಯ್ದೆ 1973ರ ಪ್ರಕಾರ ಸ್ಲಂ ಘೋಷಣೆ ಮಾಡಲಾಗಿದೆ, ಆದರೆ ಈ ವರೆಗೊ ಘೋಷಣೆ ಆಗಿರುವ ಕೊಳಗೇರಿ ಪ್ರದೇಶಗಳಲ್ಲಿ ಸ್ಲಂ ಜನರಿಗೆ ನಾಗರೀಕ ಸೌಲಭ್ಯಗಳನ್ನು ಒದಗಿಸುವಲ್ಲಿ ನಗರಸಭೆಯಿಂದ ನಿರ್ಲಕ್ಷ ನೀತಿಯನ್ನು ಅನುಸರಿಸಲಾಗುತ್ತಿದೆ. ಗದಗ-ಬೆಟಗೇರಿ ನಗರದ ಕೊಳಗೇರಿಗಳ ಅಭಿವೃಧ್ದಿಗೆ ನಗರಸಭೆ ಪೌರಾಯುಕ್ತರು ತಾರತಮ್ಯ ನೀತಿಯನ್ನು ಅನಸರಿಸುತ್ತಿರುವುದನ್ನು ಖಂಡಿಸಿ ಸ್ಲಂ ಜನಾದೋಲನ-ಕರ್ನಾಟಕ ಹಾಗೂ ಗದಗ ಜಿಲ್ಲಾ ಸ್ಲಂ ಸಮಿತಿ ಪದಾಧಿಕಾರಿಗಳು ಪೌರಾಯುಕ್ತರಿಗೆ ಮನವಿ ಸಲ್ಲಿಸಿದರು. ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ.ಆರ್.ಮಾನ್ವಿ ಮಾತನಾಡಿ ಸ್ಲಂ ಪ್ರದೇಶದಲ್ಲಿ ಶೌಚಾಲಯ, ರಸ್ತೆ, ಬೀದಿ ದೀಪಗಳ ವ್ಯವಸ್ಥೆ, ವಸತಿ ಹಾಗೂ ಇನ್ನು ಮುಂತಾದ ಸೌಲಭ್ಯವನ್ನು ಕಲ್ಪಿಸಬೇಕೆಂದು ಅನೇಕ ಬಾರಿ ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿ ಒತ್ತಾಯಿಸುತ್ತ ಬಂದರು ಸಹ ನಮ್ಮ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ.
ಕಳೆದ 2014 ರಿಂದ ಗದಗ-ಬೆಟಗೇರಿ ನಗರದ ವಸತಿರಹಿತ ಕುಟುಂಬಗಳಿಗೆ ಸರ್ಕಾರದಿಂದ ಮನೆಗಳನ್ನು ಹಂಚಿಕೆ ಮಾಡಬೇಕೆಂದು ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ನಗರಸಭೆ ಮುಂದೆ ಅನೇಕ ಬಾರಿ ಹೋರಾಟಗಳನ್ನು ನಡೆಸಲಾಗಿದೆ. ಆದರೆ ಫಲಾನುಭವಿಗಳ ಯಾದಿಯನ್ನು ತಯಾರಿಸುವ ಸಂಧರ್ಬದಲ್ಲಿ ನಗರಸಭೆ ಸಿಬ್ಬಂದಿಗಳು ಮಾಡಿರುವ ಎಡವಟ್ಟುನಿಂದ ನೈಜ್ 348 ವಸತಿರಹಿತ ಕುಟುಂಬಗಳಿಗೆ ಅನ್ಯಾಯ ಮಾಡಲಾಗಿದೆ. ಸ್ಥಳೀಯ ಶಾಸಕರು 2019ರಲ್ಲಿ ಎಲ್ಲಾ 348 ಕುಟುಂಬಗಳಿಗೆ ಮನೆ ಮಂಜೂರಾತಿ ಪತ್ರಗಳನ್ನು ಹಂಚಿಕೆ ಮಾಡಿದಾರೆ. ಆದರೆ ಮನೆ ಹಂಚಿಕೆ ಮಾಡುವ ಸಂದರ್ಭದಲ್ಲಿ ನೈಜ್ ಫಲಾನುಭವಿಗಳಿಗೆ ಕಡೆಗಣಿಸಲಾಗಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು. ಮಹಿಳಾ ಸಮಿತಿ ಅಧ್ಯಕ್ಷರಾದ ಪರವೀಬಾನು ಹವಾಲ್ದಾರ ಮಾತನಾಡಿ ಸ್ವಚ್ ಭಾರತ ಯೋಜನೆಡಿಯಲ್ಲಿ ಮನೆ-ಮನೆಗೆ ಶೌಚಾಲಯ ನಿರ್ಮಾಣಕ್ಕಾಗಿ ಗದಗ-ಬೆಟಗೇರಿ ನಗರಸಭೆಗೆ ಕೊಟ್ಯಾಂತರ ಅನುದಾನ ನೀಡಲಾಗಿದೆ. ಆದರೆ ನಗರದ ಕೊಳಗೇರಿ ಪ್ರದೇಶಗಳಲ್ಲಿ ಶೌಚಾಲಯಗಳ ನಿರ್ಮಾಣಕ್ಕೆ ನಗರಸಭೆ ಅಧಿಕಾರಿಗಳು ಅನುದಾನ ನೀಡದೇ ಸ್ಲಂ ಪ್ರದೇಶದ ಸಾವಿರಾರು ಮಹಿಳೆಯರಿಗೆ ಅನ್ಯಾಯ ಮಾಡಿದ್ದಾರೆ. ನಗರಸಭೆಯಿಂದ ಶೌಚಾಲಯಗಳ ವ್ಯವಸ್ಥೆಯನ್ನು ಕಲ್ಪಿಸದೇ ಇರುವುದರಿಂದ ಇವತ್ತು ನಗರದ ಸಾವಿರಾರು ಸ್ಲಂ ನಿವಾಸಿಗಳು ಬೈಲು ಶೌಚಾಲಯವನ್ನು ಅವಲಂಬಿತರಾಗಿದ್ದಾರೆ. ಇದಕ್ಕೆ ನಗರಸಭೆ ಅಧಿಕಾರಿಗಳ ನಿರ್ಲಲಕ್ಷ್ಯವೇ ಕಾರಣ ಎಂದು ಆರೋಪಿಸಿದರು.
ಮುಖಂಡರಾದ ಶರಣಪ್ಪ ಸೂಡಿ ಮಾತನಾಡಿ ಜಿಲ್ಲಾಕಾರಿಗಳ ಅಧ್ಯಕ್ಷತೆಯಲ್ಲಿ ನಡೆದ 2026-27 ಸಾಲಿನ ನಗರಸಭೆ ಬಜೇಟ್ ಪೂರ್ವಭಾವಿ ಸಭೆಯಲ್ಲಿ ಕೊಳಗೇರಿಗಳ ಅಭಿವೃಧ್ದಿಗೆ ಪ್ರತ್ಯೇಕ ಅನುದಾನ ಮೀಸಲಿಟ್ಟು ನಗರದ ಸ್ಲಂ ಪ್ರದೇಶಗಳಲ್ಲಿ ಅಭಿವೃಧ್ದಿ ಕಾಮಗಾರಿಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ. ಆದರೆ ಈ ಬಾರಿ ನಗರಸಭೆ ಬಜೇಟನಲ್ಲಿ ನಗರದ ಸ್ಲಂ ಪ್ರದೇಶಗಳ ಅಭಿವೃದ್ದಿಗೆ ಪ್ರತ್ಯೇಕ ಅನುದಾನ ಮೀಸಲಿಟ್ಟು ಅಭಿವೃಧ್ದಿ ಕಾಮಗಾರಿಗಳನ್ನು ನಡೆಸದೇ ನಗರಸಭೆಯಿಂದ ಸ್ಲಂ ಜನರ ವಿರೋಧಿ ನೀತಿಯನ್ನು ಅನುಸರಿಸಲಾಗುತ್ತಿದೆ. ಇದನ್ನು ಖಂಡಿಸಿ ಸ್ಲಂ ಜನಾಂದೋಲನ ಕರ್ನಾಟಕ ಹಾಗೂ ಗದಗ ಜಿಲ್ಲಾ ಸ್ಲಂ ಸಮಿತಿಯ ನೇತ್ರತ್ವದಲ್ಲಿ ನಗರದ ಸಾವಿರಾರು ಸ್ಲಂ ನಿವಾಸಿಗಳೊಂದಿಗೆ ಶೀಘ್ರವೇ ನಗರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕ್ಕೆ ನೀಡಿದರು. ಪೌರಾಯುಕ್ತರು ಮನವಿ ಸ್ವಿಕರಿಸಿ ಮಾತನಾಡಿ ವಸತಿರಹಿತ ಕುಟುಂಬಗಳಿಗೆ ಆದಷ್ಟು ಬೇಗನೇ ಅರ್ಹ ಫಲಾನುಭವಿಗಳಿಗೆ ಮನೆ ಹಂಚಿಕೆಗೆ ಕ್ರಮ ಕೈಗೊಳ್ಳಲಾಗುವುದು. ಗದಗ-ಬೆಟಗೇರಿ ನಗರದ ಸ್ಲಂಗಳಲ್ಲಿ ಶೌಚಾಲಯಗಳ ನಿರ್ಮಾಣಕ್ಕಾಗಿ ಅನುದಾನ ಮಂಜೂರು ಮಾಡಲಾಗುವುದೆಂದು ಭರವಸೆ ನೀಡಿದರು. ಮನವಿ ನೀಡುವ ಸಂದರ್ಭದಲ್ಲಿ ಸ್ಲಂ ಸಮಿತಿ ಕಾರ್ಯದರ್ಶಿ ಅಶೋಕ ಕುಸಬಿ. ಉಪಾಧ್ಯಕ್ಷ ಅಶೋಕ ಕುಡತಿನ್ನಿ, ಮುಖಂಡರಾದ ಇಬ್ರಾಹಿಂ ಮುಲ್ಲಾ, ಮೌಲಾಸಾಬ ಗಚ್ಚಿ. ಫೈರುಜಾ ನಾಗನೂರ, ಶಿವಪ್ಪ ಹಾತಲಗೇರಿ, ಮೆಹಬೂಬಸಾಬ ಬಳ್ಳಾರಿ, ಖಾಜಾಸಾಬ ಇಸ್ಮಾಯಿಲನವರ, ಗೌಸಸಾಬ ಅಕ್ಕಿ, ಸಾಕ್ರುಬಾಯಿ ಗೋಸಾವಿ ಮುಂತಾದವರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 