ವಸತಿ ನಿಲಯ ಮಂಜೂರಾತಿಗೆ ಒತ್ತಾಯಿಸಿ ತಹಸಿಲ್ದಾರ್ ಗೆ ಮನವಿ
Appeal to the Tehsildar demanding sanction for a hostel
ತಾಳಿಕೋಟಿ 04: ಪಟ್ಟಣದಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿನಿಯರಿಗೆ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯವನ್ನು ಮಂಜೂರು ಮಾಡುವಂತೆ ಒತ್ತಾಯಿಸಿ ಅಂಬೇಡ್ಕರ್ ಸೇನೆ ಜಿಲ್ಲಾ ಉಪಾಧ್ಯಕ್ಷ ಬಸ್ಸು ಮಾದರ ನೇತೃತ್ವದಲ್ಲಿ ತಾಲೂಕ ಸಮಿತಿಯ ಪದಾಧಿಕಾರಿಗಳು ಶುಕ್ರವಾರ ತಾಲೂಕ ಆಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಮನವಿ ಪತ್ರದಲ್ಲಿ ಪಟ್ಟಣದಲ್ಲಿ ಎಸ್ ಎಸ್ ಎಲ್ ಸಿ ಶಿಕ್ಷಣವನ್ನು ಮುಗಿಸಿದ ನಂತರ ಇಲ್ಲಿಯೇ ಇದ್ದು ಹೆಚ್ಚಿನ ಶಿಕ್ಷಣವನ್ನು ಪಡೆಯ ಬಯಸುವ ವಿದ್ಯಾರ್ಥಿನಿಯರಿಗೆ ವಸತಿ ನಿಲಯ ಇಲ್ಲದೆ ಇರುವುದರಿಂದ ಸಾಕಷ್ಟು ತೊಂದರೆಯಾಗುತ್ತಿದೆ ಇದರಿಂದ ಎಷ್ಟೋ ಬಡ ವಿದ್ಯಾರ್ಥಿನಿಯರು ತಮ್ಮ ಶಿಕ್ಷಣವನ್ನು ಮಧ್ಯದಲ್ಲಿಯೇ ಕೈ ಬಿಡುವಂತಾಗಿದೆ.
ಆದ್ದರಿಂದ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಸಮಾಜ ಕಲ್ಯಾಣ ಸಚಿರಾದ ಮಾನ್ಯ ಎಚ್.ಸಿ. ಮಹದೇವಪ್ಪನವರು ನಮ್ಮ ಈ ಮನವಿಯನ್ನು ಮನ್ನಿಸಿ ಮೆಟ್ರಿಕ್ ನಂತರದ ವಿದ್ಯಾರ್ಥಿನೀಯರಿಗೆ ಅನುಕೂಲವಾಗಲು ಆದಷ್ಟು ಬೇಗ ವಸತಿ ನಿಲಯವನ್ನು ಮಂಜೂರು ಮಾಡಬೇಕೆಂದು ಕೇಳಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಅಂಬೇಡ್ಕರ್ ಸೇನೆಯ ವಿಜಯಪುರ ಜಿಲ್ಲಾ ಉಪಾಧ್ಯಕ್ಷರಾದ ಬಸ್ಸು ಈ ಮಾದರ, ತಾಲೂಕು ಅಧ್ಯಕ್ಷರಾದ ಗೋಪಾಲ್ ಕಟ್ಟಿಮನಿ, ನಾಗರಾಜ ಗಜಕೋಶ ಯಮನಪ್ಪ ನಾಯ್ಕೋಡಿ ಪರಶುರಾಮ ತಳವಾರ, ಭೀಮಾಶಂಕರ ಸೋನೋನೆ ಮೈಬೂಬ್ ಅವಟಿ, ಪರಶುರಾಮ ನಾಲತವಾಡ, ಬಾಗಪ್ಪ ಕಟ್ಟಿಮನಿ, ಮಡು ಚಲವಾದಿ, ಶಶಿಕುಮಾರ ಚಲವಾದಿ, ಬಸವರಾಜ ತೋಟದ, ಸಾಬಣ್ಣ ಕಡದಾಳ, ಶಿವಪ್ಪ ಮಾದರ, ಶೇಖಪ್ಪ ಕಟ್ಟಿಮನಿ ಮತ್ತಿತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 