ಏಕಲವ್ಯ ವಸತಿ ಶಾಲೆ ಸ್ಥಾಪನಿಗೆ ಮನವಿ
Appeal to the founder of Ekalavya Residential School
ಇಂಡಿ 17: ಜಿಲ್ಲೆಯಲ್ಲಿ ಕೇಂದ್ರೀಯ ಏಕಲವ್ಯ ವಸತಿ ಶಾಲೆ ಮಂಜೂರು ಮಾಡುವಂತೆ ಒತ್ತಾಯಿಸಿ ಬಿಜೆಪಿ ಎಸ್.ಟಿ. ಮೋರ್ಚಾ ಜಿಲ್ಲಾಧ್ಯಕ್ಷ ರವಿಕಾಂತ ವಗ್ಗಿ ನೇತೃತ್ವದಲ್ಲಿ ತಳವಾರ ಸಮಾಜ ಬಾಂಧವರು ವಿಜಯಪೂರ ಸಂಸದ ರಮೇಶ ಜಿಗಜಿಣಗಿ ಅವರಿಗೆ ಮನವಿ ಸಲ್ಲಿಸಿದರು. ತಳವಾರ ಸಮಾಜದ ಜಿಲ್ಲಾಧ್ಯಕ್ಷ ಅನೀಲ ಜಮಾದಾರ, ರವಿಕಾಂತ ವಗ್ಗೆ ಮಾತನಾಡಿ, ಜಿಲ್ಲೆಯಲ್ಲಿ ಪರಿಶಿಷ್ಠ ಪಂಗಡದಲ್ಲಿ ಬರುವ ತಳವಾರ, ವಾಲ್ಮೀಕಿ, ಬೇಡ, ಬೇಡರ ಹಾಗೂ ಹರಣಶಿಕಾರಿ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದರೆ ಈ ಎಲ್ಲ ಸಮುದಾಯಗಳು ಶಿಕ್ಷಣವಂಚಿರಾಗಿದ್ದರಿಂದ ಯಾವುದೇ ಕ್ಷೇತ್ರದಲ್ಲಿ ಪ್ರಗತಿ ಕಾಣಲು ಸಾಧ್ಯವಾಗಿಲ್ಲ. ಈ ಸಮುದಾಯಗಳು ಮುಖ್ಯವಾಹಿನಿಗೆ ಬರಬೇಕಾದರೆ ಶೈಕ್ಷಣಿಕ ರಂಗ ಅವಶ್ಯವಾಗಿದ್ದು ಕೇಂದ್ರೀಯ ಏಕಲವ್ಯ ಮಾದರಿ ವಸತಿ ಶಾಲೆ ಮಂಜೂರು ಮಾಡಿ ಈ ಸಮುದಾಯಗಳ ಮಕ್ಕಳ ಭವಿಷ್ಯಕ್ಕೆ ದಾರಿ ಮಾಡಿಕೊಡಬೇಕೆಂದು ಮನವಿ ಮಾಡಿಕೊಂಡರು. ರವಿ ರಾಯಜಿ, ರಮೇಶ ಗುಡ್ಡೇವಾಡಿ, ಸಂತೋಶ ಕೋಳಿ, ಮಂಜು ಜಮಾದಾರ, ವಿವೇಕಾನಂದ ಡಬ್ಬಿ, ರಮೇಶ ಕೋಳಿ, ಗುರು ತಳವಾರ, ಅಣ್ಣಪ್ಪ ತಳವಾರ, ಶಾಂತು ವಾಲೀಕಾರ, ಸಂತೋಷ ವಾಲೀಕಾರ, ಸುರೇಶ ಕೋಲ್ಕರ ಸೇರಿದಂತೆ ಇನ್ನಿತರರು ಇದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 