ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜೆ. ಕಾರ್ತಿಕ್ ಸಂಘಟನೆ ಸರ್ಕಾರಕ್ಕೆ ಮನವಿ
Appeal to the government by the Karnataka State Farmers' Association and Hasiru Sene (J. Karthik fac
ಹೊಸಪೇಟೆ, ಜು.21: ವಿಜಯನಗರ ಜಿಲ್ಲೆಯಲ್ಲಿ ಮುಂಗಾರು ಮಳೆಯ ಕೊರತೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಜಿಲ್ಲೆಯನ್ನು ತಕ್ಷಣವೇ ಅಧಿಕೃತ ಬರಪೀಡಿತ ಪ್ರದೇಶ ಎಂದು ಘೋಷಿಸಿ, ರೈತರಿಗೆ ಎಕರೆಗೆ ?50 ಸಾವಿರ ಪರಿಹಾರ ನೀಡಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ಜೆ. ಕಾರ್ತಿಕ್ ಸಂಘಟನೆ) ಸರ್ಕಾರವನ್ನು ಒತ್ತಾಯಿಸಿದೆ.
ಜಿಲ್ಲೆಯಲ್ಲಿ ಈ ವರ್ಷ ಸುಮಾರು 3 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಿದ್ದರೂ, ಇದುವರೆಗೆ ಕೇವಲ 55,539 ಹೆಕ್ಟೇರ್ ಪ್ರದೇಶದಲ್ಲಿ ಮಾತ್ರ ಬಿತ್ತನೆ ನಡೆದಿದೆ. ಮುಂಗಾರು ಮಳೆಯ ಅಭಾವದಿಂದ ಮೆಕ್ಕೆಜೋಳ, ಸೂರ್ಯಕಾಂತಿ, ಬಾಳೆ, ಕಬ್ಬು ಸೇರಿದಂತೆ ಹಲವು ಬೆಳೆಗಳು ಹಾನಿಗೊಳಗಾಗಿದ್ದು, ಸುಮಾರು 70 ಶೇಕಡಾ ಬಿತ್ತನೆ ಸಾಧ್ಯವಾಗಿಲ್ಲ ಎಂದು ಸಂಘಟನೆ ತಿಳಿಸಿದೆ.
ಬೀಜ, ಗೊಬ್ಬರ ಸೇರಿದಂತೆ ಕೃಷಿ ಕಾರ್ಯಗಳಿಗೆ ರೈತರು ಈಗಾಗಲೇ ಹಣ ಖರ್ಚು ಮಾಡಿದ್ದು, ಮಳೆ ಕೈಕೊಟ್ಟ ಪರಿಣಾಮ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಆದ್ದರಿಂದ ಎಕರೆಗೆ ?50 ಸಾವಿರ ಪರಿಹಾರ ನೀಡುವುದರ ಜೊತೆಗೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ನೀರಿನ ಸಮರ್ಕ ವ್ಯವಸ್ಥೆ ಕಲ್ಪಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಇದೇ ವೇಳೆ ರಾಷ್ಟ್ರೀಕೃತ, ಸಹಕಾರಿ ಹಾಗೂ ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳಿಂದ ರೈತರು ಪಡೆದಿರುವ ಕೃಷಿ ಹಾಗೂ ದೀರ್ಘಾವಧಿ ಸಾಲಗಳನ್ನು ಸಂಪೂರ್ಣ ಮನ್ನಾ ಮಾಡಬೇಕು ಎಂದು ಸಂಘಟನೆ ಒತ್ತಾಯಿಸಿದೆ.
ಜುಲೈ 21ರಂದು ಆಚರಿಸಲಾದ 46ನೇ ರೈತ ಹುತಾತ್ಮ ದಿನಾಚರಣೆ ಅಂಗವಾಗಿ, ್ಘೂಷ್ದದಿಹಿ್ಝ್ಚೂಷ್ದದಿ ರೈತ ಹೋರಾಟದಲ್ಲಿ ಹುತಾತ್ಮರಾದ ರೈತರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ರೈತರ ಹಕ್ಕುಗಳಿಗಾಗಿ ನಡೆದ ಐತಿಹಾಸಿಕ ಹೋರಾಟವನ್ನು ಸ್ಮರಿಸಿ, ರೈತ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಸಂಘಟನೆ ಮನವಿ ಮಾಡಿದೆ.
ಅದ್ದೂರಿಯಿಂದ ಜರುಗಿದ ಕೋಣ ಬಿಡುವ ಸಂಪ್ರದಾಯ ಕಾರ್ಯಕ್ರಮ : ಸಂಕೇಶ್ವರ ಮಹಾಲಕ್ಷ್ಮೀ ಜಾತ್ರೆಯ ಚೊಚ್ವಲು ಕಾರ್ಯಕ್ಕೆ ಚಾಲನೆ
ನಂದು ಮುಡಶಿ ಬೆವರು ಸುರಿಸಿ ಸ್ವಂತ ಜಮೀನಿನಲ್ಲಿ ಬೆಳೆದ ಅಕ್ಕಿ, ಜೋಳ ತಂದು ಕೊಟ್ಟಿಲ್ಲ. ಎಲ್ಲಿಂದ ಬಂದಿವೆ, ಆತನ ಸಾತಭಾರ ನನಗೆ ಗೊತ್ತಿದೆ : ಬಸನಗೌಡಾ
ಮಾಹಾಲಕ್ಷ್ಮೀ ಜಾತ್ರೆ ಲೆಕ್ಕ ಸಭೆಯಲ್ಲಿ ರಾಜಕೀಯ ಹಗ್ಗ ಜಗ್ಗಾಟದಿಂದ ಗಲಾಟೆ, ಆನೆ, ಪ್ರಮಾಣದಿಂದ ಜನರ ಛೀಮಾರಿ
ಸ್ಕೈರೂಟ್ ಏರೋಸ್ಪೇಸ್ನ ವಿಕ್ರಮ್-1 ಉಡಾವಣೆ ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರಕ್ಕೆ ಮಹತ್ವದ ಮೈಲುಗಲ್ಲು: ಪ್ರಧಾನಿ ಮೋದಿ
ಜೊಡಿ ಹತ್ಯೆಗೆ ತಿರುವು: ಆಸ್ತಿಗಾಗಿ ಇಬ್ಬರು ಮೈದುನರ ಹತ್ಯೆ ಮಾಡಿಸಿದ ಅತ್ತಿಗೆ : ಪೊಲೀಸ ತನಿಖೆಯಲ್ಲಿ ಬಹಿರಂಗ
ಬೆಳಗಾವಿಯ ಹೃದಯಭಾಗದಲ್ಲಿ ಚಿನ್ನಾಭರಣ ಅಂಗಡಿ ಲೂಟಿ : ಸ್ಥಳಕ್ಕೆ ಪೊಲೀಸರ ದೌಡು 