ಸರ್ಕಾರಿ ಐಟಿಐ ಪ್ರವೇಶಕ್ಕೆ ಅರ್ಜಿ ಆಹ್ವಾನ.

ದೇವರಹಿಪ್ಪರಗಿ: ಪಟ್ಟಣದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಎನ್ ಸಿ ವಿ ಟಿ ಸಂಯೋಜನೆ ಹೊಂದಿರುವ ವೃತ್ತಿಗಳಾದ ವಿದ್ಯುತ್ ಶಿಲ್ಪಿ ಹಾಗೂ ಜೋಡಣೆಗಾರ ಎರಡು ವರ್ಷಗಳ ವೃತ್ತಿಗಳಿಗೆ ಆಗಸ್ಟ್ 2023ನೇ ಶೈಕ್ಷಣಿಕ ಸಾಲಿನ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ಮೇ . 24 ರಿಂದ ಜೂ .07 ರ ವರೆಗೆ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ. 10ನೇ ತರಗತಿ ಪಾಸಾದ ಆಸಕ್ತ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಸಂಸ್ಥೆಯ ಪ್ರಾಚಾರ್ಯರಾದ ಶ್ರೀಮತಿ ಎಸ್ ಜಿ ಮಲ್ನಾಡ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.