ಬೆಂಗಳೂರು, ಮೇ 5,ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಜನವರಿ 2019ರಿಂದ ಡಿಸೆಂಬರ್ 2019ರ ಅವಧಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ ಬಹುಮಾನಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಕೋವಿಡ್ 19 ಪರಿಸ್ಥಿತಿ ಹಿನ್ನೆಲೆಯಲ್ಲಿ ಪುಸ್ತಕ ಕಳಿಸುವ ಕೊನೆ ದಿನಾಂಕವನ್ನು ಮೇ 30, 2020ರವರೆಗೆ ವಿಸ್ತರಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಆಸಕ್ತ ಪ್ರಕಾಶಕರು, ಮುದ್ರಕರು, ಕಲಾವಿದರು, ಲೇಖಕರು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ. ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು, ಚಿತ್ರ ಕಲಾವಿದರ ಪೂರ್ಣ ವಿಳಾಸ ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು 2020, ಮೇ 30ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ ಬೆಂಗಳೂರು 560002 ಈ ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ. ಸಲ್ಲಿಸಲಾಗುವ ಪುಸ್ತಕಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ ಎಂದು ತಿಳಿಸಲಾಗಿದೆ.ಹೆಚ್ಚಿನ ಮಾಹಿತಿಗಾಗಿ: ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೆ ಮಹಡಿ, ಜೆ.ಸಿ.ರಸ್ತೆ, ಬೆಂಗಳೂರು-560002 -ವೆಬ್ www.kannadapusthakapradhikara.com ದೂರವಣಿ ಸಂಖ್ಯೆ 080-22484516/22107704 ಇಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.