ಯುವನಿಧಿ ಯೋಜನೆಯಡಿ ನೋಂದಾಯಿಸಿಕೊಳ್ಳಲು ಮನವಿ
Application for registration under Yuva Nidhi Scheme
ಬಳ್ಳಾರಿ 04: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗ್ಯಾರಂಟಿ ಯೋಜನೆಗಳಲ್ಲೊಂದಾದ ಯುವನಿಧಿ ಯೋಜನೆಯಡಿ ಸಹಾಯಧನ ಪಡೆಯಲು ಅರ್ಹ ಪದವೀಧರರು, ಸ್ನಾತಕೋತ್ತರ ಪದವೀಧರರು ಮತ್ತು ಡಿಪ್ಲೋಮಾ ಪದವೀಧರರು ನೋಂದಾಯಿಸಿಕೊಳ್ಳುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ತಿಳಿಸಿದ್ದಾರೆ.
ಈ ಯೋಜನೆಯಡಿ ಪದವೀಧರರಿಗೆ ರೂ.3000 ಮತ್ತು ಡಿಪ್ಲೋಮಾ ಪದವೀಧರರಿಗೆ ರೂ.1500 ನೀಡಲಾಗುತ್ತದೆ. 2023-24 ಮತ್ತು 2024-25 ನೇ ಸಾಲಿನಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ಉತ್ತೀರ್ಣರಾದ ಅಭ್ಯರ್ಥಿಗಳು ಆನ್‌ಲೈನ್ ಸೇವಾ ಸಿಂಧು ಪೋರ್ಟಲ್, ಅಟಲ್ ಜೀ ಕೇಂದ್ರ, ಕರ್ನಾಟಕ-1, ಬಳ್ಳಾರಿ-1 ಮತ್ತು ಇತರೆ ಸೇವಾ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಿ ನೋಂದಣಿ ಮಾಡಿಕೊಳ್ಳಬಹುದು.
*ಅರ್ಹತೆ:*
ಪದವಿ, ಡಿಪ್ಲೋಮಾ ನಂತರ ಕನಿಷ್ಠ 6 ತಿಂಗಳ/180 ದಿನಗಳ ಅವಧಿಯವರೆಗೆ ಸರ್ಕಾರಿ, ಖಾಸಗಿ ಉದ್ಯೋಗ ಅಥವಾ ಸ್ವಯಂ ಉದ್ಯೋಗ ಹೊಂದಿಲ್ಲದವರಾಗಿರಬೇಕು.
ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವವರು ಅರ್ಹರು. ಕರ್ನಾಟಕದಲ್ಲಿ ವಾಸವಿರುವವರು (ಕನಿಷ್ಠ 6 ವರ್ಷಗಳವರೆಗೆ ಪದವಿ, ಡಿಪ್ಲೋಮಾ ಅಧ್ಯಯನ ಮಾಡಿದವರು).
*ಬೇಕಾದ ದಾಖಲೆ:*
ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ ಅಥವಾ ಡಿಪ್ಲೋಮಾ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಆಧಾರ್ ಸೀಡೆಡ್ ಬ್ಯಾಂಕ್ ಖಾತೆ ಸಂಖ್ಯೆ, ಆಧಾರ್ ಜೋಡಣೆಗೊಂಡ ಮೊಬೈಲ್ ಸಂಖ್ಯೆ.
ಪ್ರತಿ ತಿಂಗಳು 25 ರೊಳಗಾಗಿ ಸ್ವಯಂ ದೃಢೀಕೃತ ನಿರುದ್ಯೋಗಿ ಪ್ರಮಾಣ ಪತ್ರವನ್ನು ಸೇವಾಸಿಂಧು ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡುವುದು ಕಡ್ಡಾಯವಾಗಿದೆ. ನೋಂದಾಯಿಸಿಕೊಳ್ಳಲು ಸೇವಾ ಸಿಂಧು ವೆಬ್ ಪೋರ್ಟಲ್ ವಿಳಾಸ: ಣಣಠಿ:/ಜತಛಿಟಿಜಣ.ಞಚಿಡಿಟಿಚಿಣಚಿಞಚಿ.ರಠ.ಟಿ ಗೆ ಭೇಟಿ ನೀಡಬೇಕು.
ಹೆಚ್ಚಿನ ಮಾಹಿತಿಗಾಗಿ ನಗರದ ಹಳೆಯ ತಾಲ್ಲೂಕು ಕಚೇರಿ ಹಿಂಭಾಗದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.9742718891, 8277000619, 9900827768, 6360408094, 8861866752 ಹಾಗೂ ಸಂಬಂಧಿಸಿದ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 