ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕೃಷಿ ಪ್ರಶಸ್ತಿಗೆ ಅರ್ಜಿ ಆಹ್ವಾನ Application invited for Agriculture Award

ಗದಗ  5: ರಾಜ್ಯದ ಕೃಷಿ ಉತ್ಪಾದನೆ ಗಣನೀಯ ಪ್ರಮಾಣದಲ್ಲಿ ಹೆಚ್ಚಳವಾಗಲು ರೈತರ ಶ್ರಮ ಮತ್ತು ಕೃಷಿಯಲ್ಲಿ ಸಕ್ರಿಯ ಪಾಲುಗಾರಿಕೆ ಪ್ರಮುಖ ಕಾರಣವಾಗಿರುತ್ತದೆ. ಅಂತಹ ರೈತರನ್ನು ಗುರುತಿಸಲು ರಾಜ್ಯ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟಗಳಲ್ಲಿ ಕೃಷಿ ಪ್ರಶಸ್ತಿ ಬಹುಮಾನಗಳನ್ನು ನೀಡಲಾಗುತ್ತಿದೆ. ಈ ಯೋಜನೆಯಡಿಯಲ್ಲಿ ವಿವಿಧ ಹಂತಗಳಲ್ಲಿ ಆಯ್ಕೆ ಮಾಡಲಾದ ಬೆಳೆಗಳಲ್ಲಿ ಬೆಳೆ ಸ್ಪರ್ಧೆ ನಡೆಸಿ ಪ್ರತಿ ಬೆಳೆಗೂ ಮೂರು ಬಹುಮಾನಗಳನ್ನು ನೀಡಲಾಗುತ್ತಿದೆ. ಕೃಷಿ ಕ್ಷೇತ್ರದಲ್ಲಿ ಉತ್ಪಾದನೆ ಹಾಗೂ ಉತ್ಪಾದಕತೆ ಹೆಚ್ಚಿಸಲು ರೈತರಲ್ಲಿ ಒಂದು ಆರೋಗ್ಯಕರ ಸ್ಪರ್ಧಾತ್ಮಕ ಮನೋಭಾವನೆಯನ್ನು ಬೆಳೆಸುವುದೇ ಈ ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ.  

ಪ್ರಸಕ್ತ ವರ್ಷದಲ್ಲಿ ಕೃಷಿ ಪ್ರಶಸ್ತಿಗಾಗಿ ಅರ್ಜಿಗಳನ್ನು ಆನ್‌ಲೈನ್‌ನಲ್ಲಿ ನೋಂದಾಯಿಸಬೇಕಿದೆ. ಇದಕ್ಕಾಗಿ ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್‌ನಲ್ಲಿ ನೂತನವಾಗಿ ಕೃಷಿ ಪ್ರಶಸ್ತಿಗೆ ಅರ್ಜಿ ನಮೂನೆಯನ್ನು ಅಳವಡಿಸಲಾಗಿರುತ್ತದೆ. ಸಿಟಿಜನ್ ಲಾಗಿನ್ ಅಥವಾ ರೈತ ಸಂಪರ್ಕ ಕೇಂದ್ರದ ಲಾಗಿನ್ ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ/ಸೇವಾ ಕೇಂದ್ರ/ಸ್ವತಃ, ಆಸಕ್ತ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ ಸದರಿ ಕೆ-ಕಿಸಾನ್ ಪೋರ್ಟಲ್‌ನಡಿ ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ಎಫ್‌.ಐ.ಡಿ.(ಫ್ರೂಟ್ಸ್‌ ಐಡೆಂಟಿಫಿಕೇಶನ್)ಯನ್ನು ಬಳಸಿಕೊಂಡು ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. 

2025-26ನೇ ಸಾಲಿಗೆ ಗದಗ ಜಿಲ್ಲೆಯಲ್ಲಿ ಕೃಷಿ ಪ್ರಶಸ್ತಿ ಯೋಜನೆಯಡಿ ಬೆಳೆ ಸ್ಪರ್ಧೆಗಾಗಿ ಹಿಂಗಾರು ಹಂಗಾಮಿನಲ್ಲಿ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ನೋಂದಾಯಿಸಬಹುದಾದ ಬೆಳೆ  ಕಡಲೆಯಾಗಿರುತ್ತದೆ. 

ರೈತ ಬಾಂಧವರು ಬೆಳೆ ಸ್ಪರ್ಧೆಗೆ ನೋಂದಾಯಿಸಲು ಈ ಕೆಳಕಂಡ ದಾಖಲೆಗಳನ್ನು ಸಲ್ಲಿಸಬೇಕಿರುತ್ತದೆ.:  

ಪಹಣಿ ಪತ್ರಿಕೆ, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ರೈತರಾದಲ್ಲಿ ಜಾತಿ ಪ್ರಮಾಣ ಪತ್ರ.ರೈತರ ಛಾಯಾಚಿತ್ರ, ಗುರುತಿನ ಚೀಟಿ, ಬ್ಯಾಂಕ್ ಪುಸ್ತಕದ ಪ್ರತಿ___ಇತ್ಯಾದಿ 

ಕೃಷಿ ಪ್ರಶಸ್ತಿಯಡಿ ಬೆಳೆ ಸ್ಪರ್ಧೆಗೆ ಅರ್ಜಿ ಶುಲ್ಕವನ್ನು ರದ್ದುಪಡಿಸಲಾಗಿರುತ್ತದೆ.2025-26ನೇ ಸಾಲಿಗೆ ಹಿಂಗಾರಿನಲ್ಲಿ ಬೆಳೆ ಸ್ಪರ್ಧೆಗೆೆ ಅರ್ಜಿ ಸಲ್ಲಿಸಲು 29ನೇ ನವೆಂಬರ್ 2025  ಕೊನೆಯ ದಿನಾಂಕವಾಗಿದೆ.  ಸದರಿ ಬೆಳೆ ಬೆಳೆದ ಆಸಕ್ತ ರೈತರು ಬೆಳೆ ಸ್ಪರ್ಧೆ ಯೋಜನೆಯಡಿ ಶುಲ್ಕರಹಿತವಾಗಿ ದಿ:29.11.2025 ರೊಳಗಾಗಿ ತಮಗೆ ಸಂಬಂಧಿಸಿದ ರೈತ ಸಂಪರ್ಕ ಕೇಂದ್ರಗಳ ಮೂಲಕ ಅಥವಾ ಸ್ವತಃ ಆನ್‌ಲೈನ್ ಮೂಲಕ(ಞಞಚಿಟಿ.ಞಚಿಡಿಟಿಚಿಣಚಿಞಚಿ.ರಠ.ಟಿ) ಲಿಂಕ್ ಬಳಸಿ ನೋಂದಾಯಿಸಿಕೊಳ್ಳಲು ಜಂಟಿ ಕೃಷಿ ನಿರ್ದೇಶಕರು, ಗದಗ ಜಿಲ್ಲೆಯ ರೈತ ಬಾಂಧವರಲ್ಲಿ ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕಾ ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಭೇಟಿ ನೀಡಲು ಜಂಟಿ ಕೃಷಿ ನಿರ್ದೇಶಕರು ಪ್ರಟಣೆಯಲ್ಲಿ ತಿಳಿಸಿದ್ದಾರೆ.