ಆತ್ಮ ಯೋಜನೆಯಡಿ ಸಿಬ್ಬಂದಿ ನೇಮಕಾತಿಗೆ ಅರ್ಜಿ ಆಹ್ವಾನ.
Applications are invited for the recruitment of staff under the Atma scheme.
ಕಾರವಾರ, ಆ.16 :- ಉತ್ತರ ಕನ್ನಡ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಪ್ರಸಕ್ತ ಸಾಲಿನ ಆತ್ಮ ಯೋಜನೆಯಡಿ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ತಾಲೂಕ ತಾಂತ್ರಿಕ ವ್ಯವಸ್ಥಾಪಕ ಹಾಗೂ ಸಹಾಯಕ ತಾಂತ್ರಿಕ ವ್ಯವಸ್ಥಾಪಕ ಹುದ್ದೆಗೆ ಆರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಸೂಕ್ತ ವಿದ್ಯಾರ್ಹತೆ ಹಾಗೂ ಅನುಭವವುಳ್ಳ ಅಭ್ಯರ್ಥಿಗಳು ತಮ್ಮ ಸ್ವ-ವಿವರದೊಂದಿಗೆ ಅರ್ಜಿಯನ್ನು ಆ.30 ರೊಳಗೆ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕಾರವಾರ ಇಲ್ಲಿಗೆ ಸಲ್ಲಿಸಬಹುದು.
ತಾಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ , ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮತ್ತು ಕಂಪ್ಯೂಟರ್ ಜ್ಞಾನ, ಕೃಷಿ ಪದವಿಯೊಂದಿಗೆ 5 ವರ್ಷ ಸಹಾಯಕ ತಾಂತ್ರಿಕ ವ್ಯವಸ್ಥಾಪಕರಾಗಿ ಕಾರ್ಯನಿರ್ವಹಿಸಿದ ಅನುಭವ ಹಾಗೂ 2 ವರ್ಷ ಕೃಷಿ ಸಂಬಂಧಿತ ಚಟುವಟಿಕೆಯಲ್ಲಿ ಅನುಭವವುಳ್ಳವರಾಗಿರಬೇಕು.
ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ , ಕೃಷಿ ಅಥವಾ ಕೃಷಿ ಸಂಬಂಧಿತ ವಿಷಯದಲ್ಲಿ ಪದವಿ/ಸ್ನಾತಕೋತ್ತರ ಪದವಿ ಹಾಗೂ 1 ವರ್ಷ ಕೃಷಿ ಸಂಬಂಧಿತ ಚಟುವಟಿಕೆಯಲ್ಲಿ ಅನುಭವವುಳ್ಳವರಾಗಿರಬೇಕು.
ಈ ಹುದ್ದೆಗಳು ಕೃಷಿ ಇಲಾಖಾ ಮಾರ್ಗಸೂಚಿ ಹಾಗೂ ಆತ್ಮ ಯೋಜನೆಯ ಎಲ್ಲಾ ನಿಬಂಧನೆಗಳು ಮತ್ತು ಷರತ್ತುಗಳಿಗೆ ಒಳಪಟ್ಟಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕಾರವಾರ ದೂ.ಸಂ: 8884023050 ಅಥವಾ ಇ ಮೇಲ್ ವಿಳಾಸ: ರಿಜಚಿಣಣಣಚಿಡಿಞಚಿಟಿಟಿಚಿಜಚಿ1ಅರಟಚಿಟ.ಛಿಠ ನ್ನು ಸಂಪರ್ಕಿಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 