ಬೆಳಗಾವಿ 18: ನಾಗನೂರು ರುದ್ರಾಕ್ಷಿ ಮಠದ ವತಿಯಿಂದ ಬೆಳಗಾವಿಯ ಶಿವಬಸವ ನಗರದಲ್ಲಿ ನಾಡಿನ ಬಡ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗಾಗಿ ನಡೆಸಲಾಗುವ ಉಚಿತ ವಿದ್ಯಾರ್ಥಿ ಪ್ರಸಾದ ನಿಲಯಕ್ಕೆ 8 ನೇ ವರ್ಗದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ ಮೇ 4 ರಂದು ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಆಯ್ಕೆ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯಲ್ಲಿ ಆಯ್ಕೆಗೊಳ್ಳುವ ವಿದ್ಯಾರ್ಥಿಗಳಿಗೆ ವಸತಿ ಸಹಿತ ಉಚಿತ ಶಿಕ್ಷಣ ನೀಡಲಾಗುವುದು. ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ಶರಣ ಸಂಸ್ಕೃತಿಯೊಂದಿಗೆ ಪಠ್ಯಕ್ರಮ ಅಧ್ಯಯನ ಕೈಗೊಳ್ಳಲು ಅವಕಾಶ ದೊರೆಯಲಿದ್ದು, ಶ್ರೀಮಠದ ಪ್ರಶಾಂತ ವಾತಾವರಣದಲ್ಲಿ ಉಚಿತ ವಿದ್ಯಾಭ್ಯಾಸ ಕೈಗೊಳ್ಳಬಹುದಾಗಿದೆ. ಆಸಕ್ತ ವಿದ್ಯಾರ್ಥಿಗಳು ಮೊ. 9008442557, 9036391512, 9844947387 ಈ ನಂಬರ್ ಗಳಿಗೆ ಕರೆ ಮಾಡಿ ಎಪ್ರಿಲ್ 27 ರೊಳಗಾಗಿ ನೋಂದಣಿ ಮಾಡಿಕೊಳ್ಳಬಹುದು ಎಂದು ಶ್ರೀಗಳು ತಿಳಿಸಿದ್ದಾರೆ.