ಹಿಂದುಳಿದ ವರ್ಗಗಳ ಮಾಧ್ಯಮ ಮಾನ್ಯತೆ ಹೊಂದಿದ ಪತ್ರಕರ್ತರಿಗೆ ಮೀಡಿಯಾ ಕಿಟ್‌ಗೆ ಅರ್ಜಿ ಆಹ್ವಾನ

ಹಿಂದುಳಿದ ವರ್ಗಗಳ ಮಾಧ್ಯಮ ಮಾನ್ಯತೆ ಹೊಂದಿದ ಪತ್ರಕರ್ತರಿಗೆ ಮೀಡಿಯಾ ಕಿಟ್‌ಗೆ ಅರ್ಜಿ ಆಹ್ವಾನ Applications invited for media kit for journalists from backward classes with media credentials

ಕೊಪ್ಪಳ 13: ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಸಮುದಾಯಕ್ಕೆ ಸೇರಿರುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ಸಲುವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ 2025-26ನೇ ಸಾಲಿಗೆ ಮಾಧ್ಯಮ ಮಾನ್ಯತೆ ಹೊಂದಿರುವ ಪತ್ರಕರ್ತರಿಗೆ “ಮೀಡಿಯಾ ಕಿಟ್‌” ವಿತರಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. 

ಹಿಂದುಳಿದ ವರ್ಗಗಳ ಮಾನ್ಯತೆ ಪಡೆದ ಪತ್ರಕರ್ತರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸುದ್ದಿ ಮತ್ತು ಪತ್ರಿಕಾ ವಿಭಾಗದಿಂದ ಅಥವಾ ಅಯಾ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಗಳಿಂದ ಅರ್ಜಿ ನಮೂನೆಯನ್ನು ಪಡೆದುಕೊಳ್ಳುವುದು. ಇಲಾಖೆಯ ಮಾನ್ಯತಾ ಕಾರ್ಡು (ಂಛಿಛಿಡಿಜಣಚಿಣಠ ಅಚಿಡಿಜ) ಹೊಂದಿದ ಪತ್ರಕರ್ತರು ತಮ್ಮ ಹೆಸರು, ಜನ್ಮ ದಿನಾಂಕ, ಖಾಯಂ ವಿಳಾಸ, ವಿದ್ಯಾರ್ಹತೆ, ಜಾತಿ (ಉಪಜಾತಿ), ಪತ್ರಿಕಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸೇವಾನುಭವ, ವೇತನ ವಿವರಗಳನ್ನೊಳಗೊಂಡ ಮಾಹಿತಿಯನ್ನು ಭರ್ತಿ ಮಾಡಿ ಸ್ವ-ವಿಳಾಸವಿರುವ ಲಕೋಟೆಯೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು.  

ಅರ್ಜಿ ಸಲ್ಲಿಸಬಯಸುವವರು ಅರ್ಜಿಯೊಂದಿಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ 2025-26ನೇ ಸಾಲಿನಲ್ಲಿ ವಿತರಿಸಲಾಗಿರುವ ಮಾಧ್ಯಮ ಮಾನ್ಯತಾ ಕಾರ್ಡು ಹೊಂದಿರುವ ಬಗ್ಗೆ ದೃಢೀಕೃತ ಜೆರಾಕ್ಸ್‌ ಪ್ರತಿ, ಜಾತಿ ದೃಢೀಕರಣಕ್ಕಾಗಿ ಚಾಲ್ತಿಯಲ್ಲಿರುವ ಜಾತಿ ಪ್ರಮಾಣ ಪತ್ರದ ದೃಢೀಕೃತ ಜೆರಾಕ್ಸ್‌ ಪ್ರತಿಯನ್ನು ಕಡ್ಡಾಯವಾಗಿ ಲಗತ್ತಿಸಬೇಕು. ಹಾಗೂ ಅರ್ಜಿಯಲ್ಲಿ ನಮೂದಿಸಲಾಗಿರುವ ಎಲ್ಲಾ ಮಾಹಿತಿಗಳಿಗೆ ಅಧಿಕೃತ ಪೂರಕ ದಾಖಲೆಗಳ ದೃಢೀಕೃತ ಪ್ರತಿಗಳನ್ನು ಲಗತ್ತಿಸಿ ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ದಿನಾಂಕದೊಳಗಾಗಿ ಸಲ್ಲಿಸಬೇಕು. ನಿಗದಿತ ದಿನಾಂಕದ ನಂತರ ಸಲ್ಲಿಸಲಾಗುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಸರ್ಕಾರದ ವ್ಯಾಪ್ತಿಗೆ ಒಳಪಡುವ ನಿಗಮ, ಮಂಡಳಿಗಳಿಂದ ಹಾಗೂ ಸರ್ಕಾರದ ಯಾವುದೇ ಇಲಾಖೆಗಳಿಂದ ಈ ಯೋಜನೆಯಡಿ ಮಾಧ್ಯಮ ಕಿಟ್‌ಗಳನ್ನು ಪಡೆದಿರುವುದಿಲ್ಲ ಎಂದು ರೂ. 200 ರ ಬಾಂಡ್‌ನಲ್ಲಿ ಮುಚ್ಚಳಿಕೆ ಪತ್ರವನ್ನು ಸಲ್ಲಿಸಬೇಕು.ಮಾಧ್ಯಮ ಕಿಟ್ ಒದಗಿಸಲು ಪತ್ರಕರ್ತರ ಸೇವಾ ಹಿರಿತನ, ವಯೋಮಿತಿ ಹಾಗೂ ಸೇವಾನುಭವದ ಗರಿಷ್ಠತೆಯನ್ನು ಪರಿಗಣಿಸಲಾಗುವುದು. ಅರ್ಜಿಯೊಂದಿಗೆ ಕರ್ತವ್ಯ ನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಯ ವಿವರ, ಪ್ರಸಾರ ಸಂಖ್ಯೆ, ಪತ್ರಿಕೆಯ ಮಾಧ್ಯಮ ಪಟ್ಟಿಯ ವಿವರ, ಜಾತಿ ಪ್ರಮಾಣ ಪತ್ರ, ವಿಳಾಸ ಹಾಗೂ ವಯಸ್ಸನ್ನು ದೃಢೀಕರಿಸುವ ದಾಖಲೆಗಳ ಪ್ರತಿಯನ್ನು ಲಗತ್ತಿಸಿ 2025ನೇ ಆಗಸ್ಟ್‌ 22ರ ಸಂಜೆ 5 ಗಂಟೆಯೊಳಗೆ ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ನಂ.17, ವಾರ್ತಾ ಸೌಧ, ಭಗವಾನ್ ಮಹಾವೀರ ರಸ್ತೆ (ಇನ್‌ಫೆಂಟ್ರಿ ರಸ್ತೆ), ಬೆಂಗಳೂರು-560001 ಇವರಿಗೆ ಸಲ್ಲಿಸಬೇಕು. ಲಕೋಟೆಯ ಮೇಲ್ಬಾಗದಲ್ಲಿ “ನೋಂದಾಯಿತ ಪತ್ರಕರ್ತರಿಗೆ ಮೀಡಿಯಾ ಕಿಟ್‌ಗಾಗಿ ಅರ್ಜಿ” ಎಂದು ನಮೂದಿಸಿರಬೇಕು.ಹೆಚ್ಚಿನ ಮಾಹಿತಿಗಾಗಿ ಆಯಾ ಜಿಲ್ಲೆಗಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಚೇರಿಯನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಬೆಂಗಳೂರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ. ಲಿಂಬಾಳ್ಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಆ. 19 ರಂದು ಕೊಪ್ಪಳದಲ್ಲಿ ವಾಕ್ ಇನ್ ಇಂಟರ್‌ವ್ಯೂವ್‌ಕೊಪ್ಪಳ 13 : ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ವಾಕ್ ಇನ್ ಇಂಟರ್‌ವ್ಯೂವ್ ಅನ್ನು ಆಗಸ್ಟ್‌ 19 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರ ವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ. 

ಈ ವಾಕ್ ಇನ್ ಇಂಟರ್‌ವ್ಯೂವ್‌ನಲ್ಲಿ ಖಾಸಗಿ ಸಂಸ್ಥೆಗಳು ಆಗಮಿಸಿ, ತಮ್ಮಲಿರುವ ಖಾಲಿ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿದ್ದಾರೆ. ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ ಎಲ್ಲರಿಗೂ ಉಚಿತ ಪ್ರವೇಶವಿರುತ್ತದೆ.  

ಪಿ.ಯು.ಸಿ ಅಥವಾ ಪದವಿ ಅಥವಾ ಸ್ನಾತಕೋತ್ತರ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಮೂಲಕ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ವಾಕ್ ಇನ್ ಇಂಟರ್‌ವ್ಯೂವ್‌ನಲ್ಲಿ ಭಾಗವಹಿಸಲಿಚ್ಛೀಸುವ 18 ರಿಂದ 30 ವರ್ಷ ಅರ್ಹ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಯುವಕ ಮತ್ತು ಯುವತಿಯರು ದೃಢೀಕರಿಸಲಾದ ತಮ್ಮ ವಿದ್ಯಾರ್ಹತೆಯ ಎಲ್ಲ ಪ್ರಮಾಣ ಪತ್ರಗಳು 3 ಪ್ರತಿಗಳೊಂದಿಗೆ ಮತ್ತು ಆಧಾರ ಕಾರ್ಡಿನ ಪ್ರತಿ, ಬಯೋಡಾಟಾ ಹಾಗೂ ಪಾಸ್ ಪೋರ್ಟ್‌ ಅಳತೆಯ 2 ಭಾವಚಿತ್ರಗಳೊಂದಿಗೆ ಈ ವಾಕ್ ಇನ್ ಇಂಟರ್‌ವ್ಯೂವನಲ್ಲಿ ಭಾಗವಹಿಸಿ, ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.  

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳಿತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸುವಂತೆ ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಕೊಪ್ಪಳ: ಕೃಷಿ ಸಿಂಚಾಯ ಯೋಜನೆಯಡಿ ತುಂತುರು ನೀರಾವರಿ ಘಟಕಗಳಿಗೆ ಅರ್ಜಿ ಆಹ್ವಾನಕೊಪ್ಪಳ 13  : ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರ ಕಛೇರಿ ವತಿಯಿಂದ 2025-26ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಕೃಷಿ ಸಿಂಚಾಯ ಯೋಜನೆಯಡಿಯಲ್ಲಿ ತುಂತುರು ನೀರಾವರಿ ಘಟಕಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.  

ಕೊಪ್ಪಳ ತಾಲೂಕಿನ ರೈತ ಭಾಂದವರು ಸಂಬಂಧಿಸಿದ ರೈತ ಸಂಪರ್ಕ ಕೇಂದ್ರಗಳಿಗೆ ತೆರಳಿ ಅರ್ಜಿ ನಮೂನೆ, ಆಧಾರ ಕಾರ್ಡ, ನೀರಾವರಿ ಪ್ರಮಾಣ ಪತ್ರ, ಪಹಣಿ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಇದ್ದಲ್ಲಿ ಪ್ರಮಾಣ ಪತ್ರ, ನೋಟ್ರಿಯೊಂದಿಗೆ ರೂ. 20 ಛಾಪಕಾಖದ (ಬಾಂಡ್), ಬ್ಯಾಂಕ ಪಾಸ್ ಬುಕ್ ಹಾಗೂ ಆರ್‌.ಟಿ.ಜಿ.ಎಸ್‌. ಪತ್ರದೊಂದಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ, ಪ್ರಧಾನ ಮಂತ್ರಿ ಕೃಷಿ ಸಿಂಚಾಯ ಯೋಜನೆಯ ಸದಪಯೋಗ ಪಡೆದುಕೊಳ್ಳಬೇಕು.ರೈತರು ಕಡ್ಡಾಯವಾಗಿ ಎಫ್‌ಐಡಿ ಯನ್ನು ಹೊಂದಿರಬೇಕಾಗಿದ್ದು, ರೈತರು ಈಗಾಗಲೇ ಎಫ್‌ಐಡಿ ಯನ್ನು ಹೊಂದಿದ್ದಲ್ಲಿ ಅಥವಾ ಹೊಂದಿರದೆ ಇದ್ದಲ್ಲಿ ತಮ್ಮ ಎಲ್ಲಾ ಪಹಣಿಗಳನ್ನು ಎಫ್‌ಐಡಿ.ಗೆ ಜೋಡಣೆ ಮಾಡಿಕೊಳ್ಳಬೇಕು ಎಂದು ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  

ಆರ್ಯ ವೈಶ್ಯ ಸಮುದಾಯದವರಿಗೆ ಅರಿವು ಶೈಕ್ಷಣಿಕ ಸಾಲ ಯೋಜನೆ: ಅರ್ಜಿ ಆಹ್ವಾನಕೊಪ್ಪಳ 13 : ಕರ್ನಾಟಕ ಆರ್ಯ ವೈಶ್ಯ ಸಮುದಾಯಗಳ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನ ‘ಅರಿವು’ ಶೈಕ್ಷಣಿಕ ಸಾಲ ಯೋಜನೆಯಡಿ ಆರ್ಯ ವೈಶ್ಯ ಸಮುದಾಯದ ಅರ್ಹ ಫಲಾನುಭವಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. 

ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಿ.ಇ.ಟಿ., ಎನ್‌.ಇ.ಇ.ಟಿ. ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಎಮ್‌.ಬಿ.ಬಿ.ಎಸ್‌., ಬಿ.ಇ., ಬಿ.ಟೆಕ್‌., ಇತ್ಯಾದಿ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ಸಮುದಾಯದ ವಿದ್ಯಾರ್ಥಿಗಳಿಗೆ ವರ್ಷಕ್ಕೆ ರೂ. 1 ಲಕ್ಷಗಳ ಶೈಕ್ಷಣಿಕ ಸಾಲವನ್ನು ಶೇಕಡಾ 2ರ ಬಡ್ಡಿದರದಲ್ಲಿ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 4 ತಿಂಗಳ ವಿರಾಮಾವಧಿ ನೀಡಿ, ನಂತರ 36 ತಿಂಗಳ ಮಾಸಿಕ ಕಂತುಗಳಲ್ಲಿ ಈ ಸಾಲವನ್ನು ಮರುಪಾವತಿ ಮಾಡಬೇಕಾಗುತ್ತದೆ.ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಆರ್ಯವೈಶ್ಯ ಸಮುದಾಯದವರಾಗಿರಬೇಕು. ವಯಸ್ಸು 18 ರಿಂದ 35 ವರ್ಷಗಳೊಳಗಿರಬೇಕು. ಗ್ರಾಮ ಹಾಗೂ ನಗರ ಪ್ರದೇಶ ಸೇರಿದಂತೆ ಕುಟುಂಬದ ವಾರ್ಷಿಕ ಆದಾಯವು ರೂ. 6 ಲಕ್ಷದ ಮಿತಿಯೊಳಗಿರಬೇಕು. ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು. ಜಾತಿ ಹಾಗೂ ಆದಾಯ ಪ್ರಮಾಣಪತ್ರ (ನಮೂನೆ-ಜೆ) ಮಾನ್ಯವಾಗಿರಬೇಕು. ಆಧಾರ್ ಸಂಖ್ಯೆ ಮೊಬೈಲ್ ಹಾಗೂ ಬ್ಯಾಂಕ್ ಖಾತೆಗೆ ಲಿಂಕ್ ಆಗಿರಬೇಕು. ಮಹಿಳೆಯರಿಗೆ ಶೇ.33ರಷ್ಟು ಹಾಗೂ ವಿಕಲಚೇತನರಿಗೆ ಶೇ.5ರಷ್ಟು ಮೀಸಲಾತಿ ಇರಿಸಲಾಗಿದೆ. ಈ ಯೋಜನೆಯಡಿ ಒಂದು ಕುಟುಂಬದಿಂದ ಗರಿಷ್ಠ ಇಬ್ಬರಿಗೆ ಮಾತ್ರ ಸೌಲಭ್ಯ ನೀಡಲಾಗುವುದು.ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಆರ್ಯವೈಶ್ಯ ಸಮುದಾಯಗಳ ಅಭಿವೃದ್ಧಿ ನಿಗಮದ ಸಹಾಯವಾಣಿ 9448451111 ಗೆ ಬೆಳಿಗ್ಗೆ 10 ರಿಂದ ಸಂಜೆ 5.30 ರೊಳಗೆ ಸಂಪರ್ಕಿಸಬಹುದು. ಅರ್ಜಿ ಸಲ್ಲಿಸುವ ಕುರಿತಂತೆ ಮಾರ್ಗಸೂಚಿ ಹಾಗೂ ವಿವರಗಳನ್ನು ನಿಗಮದ ವೆಬ್‌ಸೈಟ್ ಣಣಠಿ://ಞಚಿಛಿಜಛಿ.ಞಚಿಡಿಟಿಚಿಣಚಿಞಚಿ.ರಠ.ಟಿ/ ಮೂಲಕ ಪಡೆಯಬಹುದಾಗಿದೆ ಎಂದು ಕರ್ನಾಟಕ ಆರ್ಯವೈಶ್ಯ ಸಮುದಾಯಗಳ ಅಭಿವೃದ್ಧಿ ನಿಗಮದ ಕೊಪ್ಪಳ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೆಚ್‌.ಐ.ವಿ. ಏಡ್ಸ್‌ ಜಾಗೃತಿ ಮಾಸಾಚರಣೆಕನಕಗಿರಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯುವ ದಿನಾಚರಣೆಕೊಪ್ಪಳ 13  :  ಕನಕಗಿರಿಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಅಂತರಾಷ್ಟ್ರೀಯ ಯುವ ದಿನಾಚರಣೆ ಹಾಗೂ ಹೆಚ್‌.ಐ.ವಿ. ಏಡ್ಸ್‌ ಜಾಗೃತಿ ಅರಿವಿನ ಮಾಸಾಚರಣೆ-2025ರ ಕಾರ್ಯಕ್ರಮವನ್ನು ಮಂಗಳವಾರ ಆಚರಿಸಲಾಯಿತು.  

ಕೊಪ್ಪಳ ಜಿಲ್ಲಾ ಏಡ್ಸ್‌ ನಿಯಂತ್ರಣ ಅಧಿಕಾರಿ ಡಾ. ಎ.ಶಶಿಧರ ಅವರು ಕಾರ್ಯಕ್ರಮ ಕುರಿತು ಮಾತನಾಡಿ, ಆಗಸ್ಟ್‌ ರಿಂದ ಸೆಪ್ಟಂಬರ್ ವರೆಗೆ ಜಿಲ್ಲೆಯಲ್ಲಿ ಗ್ರಾಮ ಸಭೆ, ಭಿತ್ತಿ ಚಿತ್ರ ಸ್ಪರ್ಧೆ, ಫ್ಲ್ಯಾಶ್‌ಮಾಬ್, ಬೈಕ್ ರಾ​‍್ಯಲಿ, ರಸಪ್ರಶ್ನೆ ಕಾರ್ಯಕ್ರಮ, ಜಾನಪದ ಕಲಾ ತಂಡಗಳಿಂದ ಬೀದಿ ನಾಟಕ, ಆರ್‌.ಆರ್‌.ಸಿ ಕಾಲೇಜುಗಳ ಮೂಲಕ ದತ್ತು ಗ್ರಾಮ ಕಾರ್ಯಕ್ರಮಗಳ ಮೂಲಕ ಜಿಲ್ಲೆಯಲ್ಲಿ ಹೆಚ್‌.ಐ.ವಿ., ಏಡ್ಸ್‌ ಕುರಿತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದರು. 

ಹೆಚ್‌.ಐ.ವಿ., ಏಡ್ಸ್‌ ಹರಡುವಿಕೆ ಚಿಕಿತ್ಸೆ ಮುಂಜಾಗ್ರತೆ ಕುರಿತು ತಿಳಿಸುತ್ತಾ, ಯುವಜನತೆ ಸಾಮಾಜಿಕ ಮಾಧ್ಯಮದ ಪ್ರಭಾವದಿಂದಾಗಿ ದುಶ್ಚಟಗಳಿಗೆ ಬಲಿಯಾಗಬಾರದು ಜಾಗೃತರಾಗಿ ವರ್ತಿಸಬೇಕು ಹಾಗೂ ಒಳ್ಳೆಯ ನಡವಳಿಕೆ ರೂಡಿಸಿಕೊಂಡು ಹೆಚ್‌.ಐ.ವಿ., ಏಡ್ಸ್‌ ನಂತಹ ಕಾಯಿಲೆಗಳಿಗೆ ಒಳಗಾಗದೆ ಉತ್ತಮ ಆರೋಗ್ಯ ಕಾಪಾಡಿಕೊಂಡು ದೇಶ ನಿರ್ಮಾಣದ ಮಹತ್ತರ ಪಾತ್ರ ನಿರ್ವಹಿಸಬೇಕು ಎಂದು ಕರೆ ನೀಡಿದರು. 

ಕನಕಗಿರಿಯ ಯುವ ಸಬಲೀಕರಣ ಕ್ರೀಡಾ ಇಲಾಖೆಯ ದೈಹಿಕ ಶಿಕ್ಷಕ ಆರ್‌.ತಿಪ್ಪಣ್ಣ ಅವರು ಮಾತನಾಡಿ, ಜಿಲ್ಲಾಮಟ್ಟದ ಕಾರ್ಯಕ್ರಮವನ್ನು ನಮ್ಮ ಕನಕಗಿರಿಯಲ್ಲಿ ಹಮ್ಮಿಕೊಂಡಿರುವದು ತುಂಬಾ ಸಂತೋಷದ ವಿಷಯ. ಯುವಜನತೆ ದುಶ್ಚಟ, ವಸನಗಳು ್ಘ ದೃಶ್ಯ ಮಾಧ್ಯಮದ ಪ್ರಭಾವದಿಂದ ಹಾಳಾಗುತ್ತಿದ್ದು, ಈ ಎಲ್ಲಾ ಸವಾಲುಗಳನ್ನು ಧೈರ್ಯದಿಂದ ಎದುರಿಸಿ, ಅವುಗಳಿಗೆ ಬಲಿಯಾಗದೇ ಉತ್ತಮ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.  

ಕನಕಗಿರಿ ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ಲಕ್ಷ್ಮಣ ಕಟ್ಟಿಮನಿ ಅವರು ಮಾತನಾಡಿ, ಯುವಕರು ತಮ್ಮನ್ನು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಯಾವುದೇ ರೀತಿಯ ದುಶ್ಚಟಗಳಿಗೆ ಬಲಿಯಾಗದೆ ಸಮಾಜವನ್ನು ಸಹ ದುಶ್ಷಟಗಳಿಂದ ಕಾಪಾಡುವ ಕೆಲಸ ಮಾಡಬೇಕು ಎಂದು ಕರೆ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕನಕಗಿರಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಅಮರೇಶ್ ದೇವರಾಳ ಅವರು ಮಾತನಾಡಿ, ಯುವಕರು ಜಾಗೃತೆಯಿಂದ ಇರಬೇಕು. ಜೊತೆಗೆ ಉತ್ತಮ ಕೌಶಲ್ಯಗಳನ್ನು ಬೆಳೆಸಿಕೊಂಡು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ತಮ್ಮನ್ನು ಗುರುತಿಸಿಕೊಳ್ಳುವ ಮೂಲಕ ದೇಶಕ್ಕೆ ಗೌರವ ತರಬೇಕು ಮತ್ತು ಉತ್ತಮ ಸಮಾಜ ನಿರ್ಮಿಸಬೇಕು ಎಂದರು.  

ಬಹುಮಾನ ಮತ್ತು ಪ್ರಮಾಣ ಪತ್ರ ವಿತರಣೆ: ಆ. 11ರಂದು ಕೊಪ್ಪಳದಲ್ಲಿ ನಡೆದ ಜಿಲ್ಲಾಮಟ್ಟದ ಭಿತ್ತಿಚಿತ್ರ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಪಡೆದ ಶ್ರೀ ಗವಿಸಿದ್ದೇಶ್ವರ ಕಾಲೇಜಿನ ಅಕ್ಷತಾ ನಾಗದೇವಿ ಎ., ದ್ವಿತೀಯ ಬಹುಮಾನ ಪಡೆದ ಗಂಗಾವತಿಯ ಟಿ.ಎಂ.ಎ.ಇ.ಎಸ್‌. ಶಿಕ್ಷಣ ಮಹಾವಿದ್ಯಾಲಯದ ಅಂಜಲಿ ಹಾಗೂ ತೃತೀಯ ಬಹುಮಾನ ಪಡೆದ ಕೊಪ್ಪಳ ಶ್ರೀ ಗವಿಸಿದ್ದೇಶ್ವರ ಕಾಲೇಜಿನ ವೈಭವಿ ಅವರಿಗೆ ಕಾರ್ಯಕ್ರಮದಲ್ಲಿ ಬಹುಮಾನ ಮತ್ತು ಪ್ರಮಾಣ ಪತ್ರ ವಿತರಿಸಲಾಯಿತು. 

ಕಾರ್ಯಕ್ರಮದಲ್ಲಿ ಕನಕಗಿರಿ ಪಟ್ಟಣ ಪಂಚಾಯತಿಯ ಅಧ್ಯಕ್ಷರಾದ ಹುಸೇನಬಿ ಚಳ್ಳಮರದ, ಉಪಾಧ್ಯಕ್ಷರಾದ ಕಂಠೀರಂಗ ನಾಯಕ, ತಾಲೂಕು ಪಂಚಾಯಿತಿಯ ಯೋಜನಾಧಿಕಾರಿ ಹುಲಗಪ್ಪ, ಉಪತಹಶಿಲ್ದಾರ ಅನಿತಾ ಇಂಡಿ, ಎನ್‌.ಎಸ್‌.ಎಸ್ ಅಧಿಕಾರಿ ಶಿವಪುತ್ರ​‍್ಪ ಗಳಪೂಜೆ, ದಂತ ಆರೋಗ್ಯ ಅಧಿಕಾರಿ ಡಾ. ಬಿನಾದೇವಿ, ಜಿಲ್ಲಾ ಮೇಲ್ವಿಚಾರಕ ಮಾಲತೇಶ ಸಜ್ಜನ್, ಸಿಬ್ಬಂದಿಗಳಾದ ರಮೇಶ, ಅಮರೇಶ, ಸಿದ್ದರಾಮಪ್ಪ, ಅಮೀನ್ ಸಾಬ್, ಮೆಹಬೂಬ್, ನಾಗರಾಜ, ಕಾಲೇಜಿನ ಉಪನ್ಯಾಸಕರು, ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.  

ಉಪನ್ಯಾಸಕ ಹನುಮೇಶ ಲಾಯದುಣಸಿ ಸ್ವಾಗತಿಸಿದರು, ಅಮರೇಶ ಅಂಗಡಿ ಭಿತ್ತಚಿತ್ರ ಬಿಡುಗಡೆ ವಿವರಿಸಿದರು, ಪರ್ವಿನ್ ಬೇಗಮ್ ನಿರೂಪಿಸಿದರು ಹಾಗೂ ಸಿದ್ರಾಮಪ್ಪ ವಂದಿಸಿದರು.