2.75 ಲಕ್ಷ ಖಾಲಿಯಿರುವ ಹುದ್ದೆಗಳಿಗೆ ಶೀಘ್ರವೇ ನೇಮಕ ಮಾಡಿಕೊಳ್ಳಿ : ಅಶೋಕ ಇಳಕಲ್
Appoint soon for 2.75 lakh vacant posts: Ashok Ilakal
ನಿರುದ್ಯೋಗಿ ಯುವ ವಿದ್ಯಾವಂತ ಜನತೆಗೆ ಉದ್ಯೋಗ ಒದಗಿಸಿ
ವಿಜಯಪುರ 23: ಅಖಿಲ ಭಾರತರಾಜ್ಯ ಸರ್ಕಾರಿ ನೌಕರರ ಒಕ್ಕೂಟವು ಷೇರುಪೇಟೆ ಆಧಾರಿತ ್ಘ ಓಕಖ ಪಿಂಚಣಿ ಪದ್ದತಿ/ ಗಕಖ ಪದ್ದತಿ/ ಕಈಖಆಂ ಕಾಯಿದೆಯನ್ನು ರದ್ದುಗೊಳಿಸಿ ನಿಶ್ಚಿತ ಪಿಂಚಣಿ ಪದ್ದತಿಯನ್ನು (ಓಕಖ) ಮರುಸ್ಥಾಪಿಸುವಂತೆ ಆಗ್ರಹಿಸಿ, ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಹುದ್ದೆ ಭರ್ತಿ ಮಾಡುವುದು, ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಮೂಲಕ ಮತ್ತು ಶಾಲೆಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಿ ಸರ್ಕಾರಿ ಶಾಲೆ ಉಳಿಸುವುದು, ಸರ್ಕಾರಿ ಉದ್ದಿಮೆಗಳ ಖಾಸಗೀಕರಣ ಕೈಬಿಡುವುದು ಸೇರಿದಂತೆ ಸರ್ಕಾರಿ ನೌಕರರ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ವತಿಯಿಂದ ವಿಜಯಪುರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ವಿಜಯಪುರ ಜಿಲ್ಲಾ ಸಮಿತಿ ಜಿಲ್ಲಾಧ್ಯಕ್ಷ ಅಶೋಕ ಇಳಕಲ್ ಮಾತನಾಡಿ, ರಾಜ್ಯದ 7 ಕೋಟಿ ಜನತೆಗೆ ಜಾರಿಯಾಗುವ ವಿವಿಧ ಯೋಜನೆಗಳನ್ನು ಜಾರಿಗೊಳಿಸಲು 7.75 ಲಕ್ಷ ಮಂಜೂರಾದ ಹುದ್ದೆಗಳ ಪೈಕಿ ಕಾರ್ಯನಿರ್ವಹಿಸುತ್ತಿರುವವರ ಸಂಖ್ಯೆ ಕೇವಲ 5 ಲಕ್ಷ. ಭರ್ತಿಯಾಗದೇ ಖಾಲಿಯಿರುವ ಹುದ್ದೆಗಳು 2.75 ಲಕ್ಷದಷ್ಟಿದೆ. ವೇತನ ಸೌಲಭ್ಯಗಳ ನಷ್ಟ ಮತ್ತು ಖಾಲಿ ಹುದ್ದೆಗಳ ಹೊರೆ ಹಾಲಿ ನೌಕರರ ಮೇಲೆ ಬಿದ್ದಿದೆ. ರಾಜ್ಯದ ವಿದ್ಯಾವಂತ ಯುವ ಜನತೆ ಉದ್ಯೋಗಕ್ಕಾಗಿ ಪರಿಪಾಟಲು ಪಡುತ್ತಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರ ಹುದ್ದೆಗಳು ಸೇರಿದಂತೆ ಶಿಕ್ಷಣ ಇಲಾಖೆಯಲ್ಲಿ ಒಟ್ಟಾರೆ 60,000 ಹುದ್ದೆಗಳು ಖಾಲಿಯಿವೆ. ಆರೋಗ್ಯಇಲಾಖೆಯಲ್ಲೂ ಹುದ್ದೆಗಳು ಖಾಲಿಯಿರುವುದರಿಂದ ಸರ್ಕಾರಿ ಆಸ್ಪತ್ರೆಗಳಲ್ಲಿ ಜನಸಾಮಾನ್ಯರು ಪರಿತಪಿಸುತ್ತಿದ್ದಾರೆ. ಆಡಳಿತ ಸುಧಾರಣೆ ಆಯೋಗ-2 ರ ನೌಕರ ವಿರೋಧಿ ಶಿಫಾರಸ್ಸುಗಳನ್ನು ಹಿಂಪಡೆಯುವುದು ಮತ್ತುಸಾರ್ವಜನಿಕ ಉದ್ದಿಮೆಗಳನ್ನು ಖಾಸಗೀಕರಣಗೊಳಿಸುವುದನ್ನು ನಿಲ್ಲಿಸುವುದು. ಪ್ರಸ್ತುತರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಗುತ್ತಿಗೆ / ಹೊರಗುತ್ತಿಗೆ / ಅತಿಥಿ ನೌಕರರಿಗೆ ಸೇವಾ ಭದ್ರತೆಯನ್ನು ಒದಗಿಸುವುದು ಹಾಗೂ ನೇರ ನೇಮಕಾತಿಯಲ್ಲಿ ಇವರುಗಳಿಗೆ ಪ್ರಾತಿನಿಧ್ಯ ಕಲ್ಪಿಸುವುದು. ಬಡ್ತಿ ಮೀಸಲಾತಿ ಕಾಯಿದೆ ಸಂಪೂರ್ಣ ಅನುಷ್ಟಾನಗೊಂಡು ಬ್ಯಾಕ್ ಲಾಗ್ ಹುದ್ದೆ ಭರ್ತಿ ಮಾಡುವುದು. ಮಹಿಳಾ ನೌಕರರ ಮೇಲಿನ ದೌರ್ಜನ್ಯ ತಡೆಗಟ್ಟುವುದು. ಅನುದಾನಿತ ಶಾಲಾ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಬೋಧಕ / ಬೋಧಕೇತರ ಸಿಬ್ಬಂದಿಗೆ ಓಕಖ ಸೌಲಭ್ಯ ಜಾರಿಗೊಳಿಸುವುದು. ಲಾಕ್‌ಡೌನ್ ಸಮಯದಲ್ಲಿ ಮುಟ್ಟುಗೋಲು ಹಾಕಿಕೊಂಡಿರುವ 18 ತಿಂಗಳ ತುಟ್ಟಿ ಭತ್ಯೆಯನ್ನು ಕೂಡಲೇ ಬಿಡುಗಡೆ ಮಾಡುವುದು. ಪಿಂಚಣಿದಾರರಿಗೂ ಕೂಡಲೇ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸುವುದು ಹಾಗೂ ಮಾಸಿಕ ರೂ.500/- ವೈದ್ಯಕೀಯ ಭತ್ಯೆ ನೀಡುವುದು. 2010 ಕ್ಕಿಂತ ಮುಂಚೆ ಸೇವೆಗೆ ಸೇರಿರುವ ಶಿಕ್ಷಕರಿಗೆ ಟಿ.ಇ.ಟಿ ಪರೀಕ್ಷೆ ಕಡ್ಡಾಯಗೊಳಿಸಿರುವ ಸುಪ್ರೀಂಕೋರ್ಟಿನ ತೀರ್ಿನ ವಿರುದ್ದರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಮರುಪರೀಶೀಲನಾ ಅರ್ಜಿಸಲ್ಲಿಸುವುದು ಎಂದರು.
ಈ ಸಂದರ್ಭದಲ್ಲಿ ಗೌರವ ಸಲಹೆಗಾರರಾದ ಸುರೇಶ ಜೀಬಿ ಮಾತನಾಡಿ, ಓಕಖ/ ಗಕಖ/ ಕಈಖಆಂ ಕಾಯ್ದೆಯನ್ನು ರದ್ದುಗೊಳಿಸಿ, ನಿಶ್ಚಿತ ಹಳೆಯ ಪಿಂಚಣಿ (ಓಕಖ) ಅನ್ನು ಮರುಸ್ಥಾಪಿಸುವುದು. ರಾಜ್ಯ ಮತ್ತು ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ವಿಶೇಷವಾಗಿ ಶಿಕ್ಷಣ ಮತ್ತು ಆರೋಗ್ಯ ಇಲಾಖೆಗಳಲ್ಲಿ ತುರ್ತಾಗಿ ಭರ್ತಿ ಮಾಡುವುದು. ಇನ್ನು ಮುಂದೆಗುತ್ತಿಗೆ / ಹೊರಗುತ್ತಿಗೆ ನೇಮಕಾತಿಯನ್ನು ಕೈಬಿಡುವುದು. ಇದುವರೆಗೆ ಸೇವೆ ಸಲ್ಲಿಸಿರುವವರಿಗೆ ನೇರ ನೇಮಕಾತಿಯಲ್ಲಿ ವಿಶೇಷ ಪ್ರಾತಿನಿಧ್ಯ ನೀಡುವುದು. ರಾಜ್ಯ ಸರ್ಕಾರದಎಲ್ಲಾ ಇಲಾಖೆಗಳ ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪರಿಷ್ಕರಿಸಿ, ಪದೋನ್ನತಿ ನೀಡಲುಕ್ರಮ ಕೈಗೊಳ್ಳುವುದು. ಶಿಕ್ಷಕರ ಹುದ್ದೆ ಭರ್ತಿ, ವರ್ಗಾವಣೆ, ಸಮಸ್ಯೆಗಳನ್ನು ಬಗೆಹರಿಸಿ, ಶಾಲೆಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಮೂಲಕ ಸರ್ಕಾರಿ ಶಾಲೆಗಳನ್ನು ಉಳಿಸಬೇಕು ಎಂದರು.
ಈ ಸಂದರ್ಭದಲ್ಲಿ ಮಹಿಳಾ ಸಂಚಾಲಕಿ ನೀಲಮ್ಮ ಹಾರದೊಳ್ಳಿ ಮಾತನಾಡಿದರು.
ಈ ಸಂದರ್ಭದಲ್ಲಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದ ಪದಾಧಿಕಾರಿಗಳು ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 