ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಪದಾಧಿಕಾರಿಗಳ ನೇಮಕ
Appointment of office bearers for the Working Journalists' Association
ಕಲಕೇರಿ 10: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕು ನೂತನ ಪದಾಧಿಕಾರಗಳ ನೇಮಕ ಮಾಡಲಾಯಿತು. ತಾಳಿಕೋಟಿ ಪ್ರವಾಸಿ ಮಂದಿರದಲ್ಲಿ ನಡೆದ ತಾಳಿಕೋಟಿ ತಾಲೂಕಿನ 2025-28ರ ಸಾಲಿನ ಪದಾಧಿಕಾರಿಗಳ ಆಯ್ಕೆಯ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಜಿಲ್ಲಾ ಚುನಾವಣಾಧಿಕಾರಿಗಳಾದ ಟಿ.ಕೆ.ಮಲಗೊಂಡ ಅವರ ನಿರ್ಧೇಶನದಂತೆ ಚುನಾವಣಾ ಉಸ್ತುವಾರಿಗಳಾಗಿ ಆಗಮಿಸಿದ ಕಾನಿಪ ಪ್ರಧಾನ ಕಾರ್ಯದರ್ಶಿಗಳಾದ ಇಂದುಶೇಖರ ಮಣೂರ ಮತ್ತು ಖಜಾಂಚಿಗಳಾದ ರಾಹುಲ ಆಪ್ಟೆ ಅವರ ನೇತೃತ್ವದಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ತಾಳಿಕೋಟಿ ತಾಲೂಕಿನ ಅಧ್ಯಕ್ಷರನ್ನಾಗಿ ಉದಯವಾಣಿ ವರದಿಗಾರರಾದ ಮೈಬೂಬಸುಬಾನಿ ಸಿರಸಗಿ, ಪ್ರಧಾನ ಕಾರ್ಯದರ್ಶಿಯಾಗಿ ವಿಜಯ ಕರ್ನಾಟಕ ಪತ್ರಿಕೆ ವರದಿಗಾರರಾದ ಶಿವಾನಂದ ಎಮ್. ಸಜ್ಜನ ಮತ್ತು ಉಪಾಧ್ಯಕ್ಷರಾಗಿ ಸಂಜಯಸಿಂಗ್ ರಜಪೂತ, ಕಾರ್ಯದರ್ಶಿಯಾಗಿ ಯಲಗೂರ್ಪ ವಡವಡಗಿ ಹಾಗೂ ಖಜಾಂಚಿಯಾಗಿ ಸಂತೋಷ ಶಹಾಪೂರ ಅವರನ್ನು ಎಲ್ಲ ಕಾನಿಪ ಸದಸ್ಯರ ಸಹಮತದೊಂದಿಗೆ ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಈ ವೇಳೆ ಆಯ್ಕೆಯಾದ ಎಲ್ಲ ಪದಾಧಿಕಾರಿಗಳಿಗೆ ಘೋಷಣಾ ಪತ್ರವನ್ನು ನೀಡಿ ಮಾತನಾಡಿದ ಕಾನಿಪ ಪ್ರಧಾನ ಕಾರ್ಯದರ್ಶಿಗಳಾದ ಇಂದುಶೇಖರ ಮಣೂರ ಅವರು ಪದಾಧಿಕಾರಿಗಳು ನಿರ್ವಹಿಸಬೇಕಾದ ಕರ್ತವ್ಯಗಳು ಮತ್ತು ಕಾರ್ಯಗಳ ಕುರಿತು ವಿವರಣೆ ಮತ್ತು ಮಾರ್ಗದರ್ಶನವನ್ನು ನೀಡಿ ಪದಾಧಿಕಾರಿಗಳು ನಿರಂತರವಾಗಿ ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳೊಡನೆ ಸಂಪರ್ಕದಲ್ಲಿದ್ದು, ಸಂಘದ ಕಾರ್ಯ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ಸಕ್ರೀಯವಾಗಿ ತೊಡಗಿಸಿಕೊಳ್ಳುವ ಮೂಲಕ ಸಂಘದ ಬೆಳವಣಿಗೆಯ ಜೊತೆಗೆ ಪತ್ರಿಕಾ ವೃತ್ತಿ ಗೌರವವನ್ನು ಹೆಚ್ಚಿಸಲು ಶ್ರಮಿಸೋಣ ಎಂದು ಕಿವಿಮಾತು ಹೇಳಿದರು. ಈ ವೇಳೆ ಕಾನಿಪ ಸದಸ್ಯರಾದ ಶ್ರೀಶೈಲ ಬಿರಾದಾರ, ಈರಣ್ಣ ಝಳಕಿ, ಸುನೀಲ ತಳವಾರ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 