ಸುಳ್ಳು ದಾಖಲೆ ಸೃಷ್ಟಿಸಿ ನಿವಾಸಿಗಳಿಗೆ ತೊಂದರೆ ನೀಡುತ್ತಿರುವವರ ಬಗ್ಗೆ ಸೂಕ್ತ ಕಾನೂನು ಕೈಗೊಳ್ಳಬೇಕು : ರವಿ ಗುಂಜೀಕರ
Appropriate law should be enacted against those who create false documents and cause trouble to resi
ಗದಗ 21: ನಕಲಿದಾಖಲೆ ಸೃಷ್ಟಿಸಿ ರಾಚೀಟೆಶ್ವರ ನಗರದ ನಿವಾಸಿಗಳಿಗೆ ತೊಂದರೆ ನೀಡುತ್ತ ಸರಕಾರಿ ಕಾಮಗಾರಿಗಳಿಗೆ ವಿನಾ ಕಾರಣ ಅಡೆತಡೆ ಮಾಡುತ್ತಿರುವವರು ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ರಾಚೋಟೇಶ್ವರ ನಗರದ ನಿವಾಸಿಗಳು ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದರು. ಈ ಸಂದರ್ಭದಲ್ಲಿ ರಾಚೋಟೇಶ್ವರ ನಗರ ಕ್ಷೇಮಾಭಿವೃದ್ದಿ ಟ್ರಸ್ಟ್‌ನ ಅಧ್ಯಕ್ಷರಾದ ರವಿ ಗುಂಜೀಕರ ಅವರು ಮಾತನಾಡಿ, ನಗರದ ವಾರ್ಡ ನಂ.22ರ ರಾಚೋಟೇಶ್ವರ ನಗರದಲ್ಲಿ ಸುಮಾರು 40ಕ್ಕೂ ಹೆಚ್ಚು ವರ್ಷಗಳಿಂದ ಪಾರ್ಕ ಸಮೇತ ಮಂಜೂರಾಗಿರುವ ಲೇಓಟ್‌ದಲ್ಲಿ ಉದ್ಯಾನವನ ಇರುವುದರಿಂದ ಇಲ್ಲಿನ ಸಾರ್ವಜನಿಕರು ಹೆಚ್ಚಿನ ಬೇಡಿಕೆಯೊಂದಿಗೆ ನಿವೇಶನಗಳನ್ನು ಖರೀದಿಸಿ ಮನೆ ಕಟ್ಟಿಕೊಂಡು ವಾಸವಾಗಿರುತ್ತಾರೆ. ಈ ಉದ್ಯಾನವನಕ್ಕೆ 40 ವರ್ಷಗಳಿಂದ ಪೂರ್ಣ ಕಂಪೌಂಡ್ ಚೈನ್‌ಲಿಂಕ್ ಫೆನ್ಸಿಂಗ್ ಒದಗಿಸಿ ಭದ್ರಪಡಿಸಲಾಗಿದೆ. 30 ವರ್ಷಗಳ ಹಿಂದೆ ಅರಣ್ಯ ಇಲಾಖೆಯವರೇ ಈ ಉದ್ಯಾನವನದಲ್ಲಿ ಗಿಡಗಳನ್ನು ಹಚ್ಚಿ ಬೆಳೆಸಿದ್ದು, ಈಗ ಅವು ಹೆಮ್ಮರಗಳಾಗಿದ್ದು, ಜೀವಂತ ಸಾಕ್ಷಿಯಾಗಿವೆ.
ಅಲ್ಲದೇ, 2017-18 ನೇ ಸಾಲಿನಲ್ಲಿ ಕೇಂದ್ರ ಸರ್ಕಾರದ ಅಮೃತ ಸಿಟಿ ಯೋಜನೆಯ ಅಡಿಯಲ್ಲಿ ಒಟ್ಟು 42.09 ಲಕ್ಷ ರೂ. ವೆಚ್ಚದಲ್ಲಿ ಆಗಿನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎಲ್.ಜಿ. ಪತ್ತಾರ ಹಾಗೂ ಅಂದಿನ ಪೌರಾಯುಕ್ತರಾದ ಮನ್ಸೂರಅಲಿ ಇವರ ಮೇಲ್ವಿಚಾರಣೆಯಲ್ಲಿ ಉದ್ಯಾನವನ ನಿರ್ಮಾಣ ಮಾಡಿ ಸಂಪೂರ್ಣ ಅಭಿವೃದ್ಧಿಪಡಿಸಲಾಗಿದೆ. ಸುಸಜ್ಜಿತವಾಗಿ ಪೂರ್ಣಗೊಂಡ ಈ ಉದ್ಯಾನವನವನ್ನು ಈ ಹಿಂದೆ ಶಾಸಕರಾಗಿದ್ದ ಎಚ್.ಕೆ.ಪಾಟೀಲ ಹಾಗೂ ಲೋಕಸಭಾ ಸದಸ್ಯರಾಗಿದ್ದ ಶಿವಕುಮಾರ ಉದಾಸಿಯವರು ಉದ್ಯಾನವನದ ಉದ್ಘಾಟನೆ ಮಾಡಿರುತ್ತಾರೆ. ನಂತರ 2017-18ರಲ್ಲಿ ರಾಚೋಟೇಶ್ವರ ನಗರ ಕ್ಷೇಮಾಭಿವೃದ್ಧಿ ಟ್ರಸ್ಟನ್ನು ರಚನೆ ಮಾಡಲಾಗಿದ್ದು, ಟ್ರಸ್ಟ ಉದ್ಯಾನವನ ಅಭಿವೃದ್ದಿ ಕೆಲಸಗಳನ್ನು ಹಾಗೂ ನಿರ್ವಹಣೆಯ ಕೆಲಸಗಳನ್ನು ಮಾಡುತ್ತಿದೆ. ಈ ಉದ್ಯಾನವನದಲ್ಲಿ ಸಾರ್ವಜನಿಕರ ಮಹತ್ವದ ಬೇಡಿಕೆಯ ಅನ್ವಯ (ಪಾರ್ಕನ ಹೊರಭಾಗಕ್ಕೆ ಹೊಂದಿಕೊಂಡು) ಒಂದು ಶುದ್ಧ ನೀರಿನ ಘಟಕ ನಿರ್ಮಾಣ ಮಾಡಲು ಸರ್ಕಾರದಿಂದ ಮಂಜೂರಾತಿ ನೀಡಲಾಗಿದ್ದು, ಅದರಂತೆ ಈ ಉದ್ಯಾನವನದಲ್ಲಿ ಪ್ರಸ್ತುತ ನಗರಸಭೆ ಸದಸ್ಯರು ಸ್ಥಳೀಯ ಗಣ್ಯವ್ಯಕ್ತಿಗಳು, ಸಂಬಂಧಪಟ್ಟ ಅಧಿಕಾರಿಗಳು, ಕಾರ್ಯನಿರ್ವಾಹಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ, ಹಾಗೂ ಗುತ್ತಿಗೆದಾರರೊಂದಿಗೆ ಬಂದು ಭೂಮಿ ಪೂಜೆಯನ್ನು ಮಾಡಿ ಕೆಲಸ ಪ್ರಾರಂಭಮಾಡಿ ಸುಮಾರು 1 ತಿಂಗಳು ಆಗಿದ್ದು ಶೇ. 50 ರಷ್ಟು ಕಾಮಗಾರಿ ಪೂರ್ಣಗೊಂಡಿರುತ್ತದೆ.
ವಸ್ತು ಸ್ಥಿತಿ ಹೀಗಿರುವಾಗ, ಇದೀಗ ಲೇಓಟ್ ಮಾಲಿಕರು ಎಂದು ಹೇಳಿಕೊಂಡು ಒಟ್ಟು ಮೊಕ್ತಿಯಾರ್ ಪತ್ರ ಹೊಂದಿದ್ದೇವೆ ಎಂದು ಅಬ್ರಾರಮಹ್ಮದಅಲಿ ಬಿಜಾಪೂರ, ಶಾರುಖಫರಹಾದ ಬಿಜಾಪೂರ, ಸುಹೇಲ ಇಮಾಮಸಾಬ ಬಿಜಾಪೂರ ಹಾಗೂ ಉಮರಫಾರುಖ ಸಿರಾಜಅಹ್ಮದ ಬಿಜಾಪೂರ ಎನ್ನುವ ವ್ಯಕ್ತಿಗಳು ಪದೇ ಪದೇ ಉದ್ಯಾನವನಕ್ಕೆ ಬಂದು ಈ ಉದ್ಯಾನವನದ ಸ್ಥಳದಲ್ಲಿ ತಮ್ಮ ನಿವೇಶನಗಳು ಇವೆ ಎಂದು ಸುಳ್ಳು ಹೇಳಿ ಶುದ್ಧ ನೀರಿನ ಘಟಕದ ಸರ್ಕಾರಿ ಕಾಮಗಾರಿ ನಡೆಸಲು ತೊಂದರೆ ಕೊಡುತ್ತಿದ್ದಾರೆ. ಗುತ್ತಿಗೆದಾರರಿಗೆ, ಕಾರ್ಮಿಕರಿಗೆ ಧಮ್ಮಿ ನೀಡಿ ಸಾರ್ವಜನಿಕರಿಗೆ ಅವಾಚ್ಯ ಶಬ್ದಗಳಿಂದ ಮಾತನಾಡಿ ಗೂಂಡಾ ವರ್ತನೆ ಮಾಡುತ್ತಿದ್ದಾರೆ. ಅಲ್ಲದೇ ಈ ಲೇಓಟ್‌ನಲ್ಲಿ ಮಂಜೂರಾದ ಪ್ರಕಾರ ಕೇವಲ 48 ಪ್ಲಾಟಗಳು ಇರುತ್ತವೆ. ಆದರೆ ಈಗ ಈ ವ್ಯಕ್ತಿಗಳು ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಪಾರ್ಕನ ಪ್ಲಾಟ ನಂ.48ರಲ್ಲಿ ವಿಭಜನೆ ತೋರಿಸಿ ಕ್ರ.ಸಂ.49,50,51 ಹಾಗೂ 52ನೇ ನಿವೇಶನಗಳು ತಮ್ಮವು ಇವೆ ಎಂದು ಹೇಳಿ ಧಮ್ಮಿ ಕೊಡುತ್ತಿದ್ದಾರೆ. ಇದರಲ್ಲಿ ಸರ್ಕಾರಿ ಅಧಿಕಾರಿಗಳು ಸಹ ಶಾಮೀಲು ಇದ್ದಾರೆಂದು ತಿಳಿದುಬರುವುದು.
ಆದ್ದರಿಂದ ಜಿಲ್ಲಾಧಿಕಾರಿ ಅವರು ಈ ವಿಷಯವನ್ನು ಗಂಭೀರವಾಗಿ ತೆಗೆದುಕೊಂಡು ಸುಳ್ಳು ದಾಖಲೆಗಳನ್ನು ಸೃಷ್ಟಿಸಿದ ಅಧಿಕಾರಿಗಳ ಮೇಲೆ ಹಾಗೂ ಕಾನೂನುಬಾಹೀರವಾಗಿ ವರ್ತಿಸಿದ ಎಲ್ಲರ ಮೇಲೆ ಕ್ರಮ ಕೈಗೊಂಡು ಅಲ್ಲಿ ಸಾರ್ವಜನಿಕರಿಗೆ ಜರೂರಾಗಿ ಬೇಕಾಗಿರುವ ಶುದ್ಧ ನೀರಿನ ಘಟಕದ ಕಾಮಗಾರಿಯನ್ನು ತಕ್ಷಣವಾಗಿ ಪ್ರಾರಂಭಿಸಿ ಇಲ್ಲಿನ ಮಾಡಿಕೊಡಬೇಕೆಂದು ಹೇಳಿದರು. ಗದಗ-ಬೆಟಗೇರಿ ಅವಳಿ ನಗರದಲ್ಲಿ ಇಂತಹ 100ಕ್ಕೂ ಹೆಚ್ಚು ಉದ್ಯಾನವನಗಳಿದ್ದು, ಇಂತಹ ಭ್ರಷ್ಟ ಅಧಿಕಾರಿಗಳು ಹಾಗೂ ವ್ಯಕ್ತಿಗಳು ಮಾಡುವ ಕೆಟ್ಟ ಕೆಲಸಗಳಿಂದ ಇಡೀ ಗದಗ ನಗರಕ್ಕೆ ಕೆಟ್ಟ ಹೆಸರು ಬರುವುದಲ್ಲದೇ ಸಾರ್ವಜನಿಕರಿಗೆ ತೊಂದರೆ ಆಗುತ್ತದೆ. ಇದರಲ್ಲಿ ಕೋಮು ಗಲಭೆಗಳು ಸಂಭವಿಸಬಹುದಾಗಿದೆ. ಆದ ಕಾರಣ ತಾವುಗಳು ಇದರ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲು ವಿನಂತಿಸುತ್ತೇವೆ. ಇಲ್ಲವಾದಲ್ಲಿ ಸಾರ್ವಜನಿಕರು ಈ ವ್ಯವಸ್ಥೆಯ ವಿರುದ್ಧ ಉಗ್ರ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ರಾಚೋಟೇಶ್ವರ ನಗರ ಕ್ಷೇಮಾಭಿವೃದ್ಧಿ ಟ್ರಸ್ಟನ ಗೌರವಧ್ಯಕ್ಷರಾದ ಸುಧೀರಸಿಂಹ ಘೋರೆ್ಡ, ಉಪಾಧ್ಯಕ್ಷರಾದ ಡಾ. ಎಸ್. ಆರ್. ಹಿರೇಮಠ, ಸದಸ್ಯರಾದ ಬಸವರಾಜ ಹಡಪದ, ಅಂಬರೀಶ ಇಟಗಿ, ಎಸ್.ಪಿ. ಪಾವನ, ನಂದಾ ಶಾಸ್ತ್ರಿ, ಈರಣ್ಣ ನವಲಿ, ನೀಲಮ್ಮ ಬೋಳನವರ, ಶರಣಪ್ಪ ಬೋಳನವರ, ಎಂ.ಬಿ.ತುಪ್ಪದ, ಮಂಜುನಾಥ ಮಾನೆ, ತೋಟಪ್ಪ ಕರಮುಡಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 