ಬೇಸಿಗೆ ಹಿನ್ನಲೆ ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಅಭಾವ ವಾಗದಂತೆ ಸೂಕ್ತ ಕ್ರಮ : ಶಾಸಕ ಜೆ.ಎನ್.ಗಣೇಶ
Appropriate measures to prevent shortage of drinking water in rural areas due to summer: MLA J.N. Ga
ಲೋಕದರ್ಶನ ವರದಿ
ಕಂಪ್ಲಿ 09 : ಬೇಸಿಗೆ ಹಿನ್ನಲೆ ಜನಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವವಾಗದಂತೆ ಸೂಕ್ತಕ್ರಮವಹಿಸಸಲು ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರುತಾಲೂಕಿನ ನಂ.10 ಮುದ್ದಾಪುರ ಗ್ರಾಪಂಯ ಬೆಳಗೋಡಹಾಳ್ ಗ್ರಾಮದಲ್ಲಿ 2025-26ನೇ ಸಾಲಿನ ಕೆಕೆಆರ್ಡಿಬಿಯ ಮೈಕ್ರೋ ಯೋಜನೆಯಡಿ ಸುಮಾರು 3 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶುಕ್ರವಾರದಂದು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ತುಂಗಭದ್ರ ಜಲಾಶಯದ ಹೊಸ ಕ್ರಸ್ಡ್ ಗೇಟ್ ಅಳವಡಿಕೆ ಹಿನ್ನಲೆ ಎರಡನೇ ಬೆಳೆಗೆ ನೀರಿಲ್ಲ. ಆದರೆ, ಜನಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಇಲ್ಲ.
ಗ್ರಾಮಗಳಲ್ಲಿ ಕುಡಿಯುವ ನೀರು, ರಸ್ತೆ, ಬೀದಿ ದೀಪ ಸೇರಿದಂತೆ ನಾನಾ ಅಭಿವೃದ್ಧಿ ಕಾರ್ಯದೊಂದಿಗೆ ಸಕಲ ಸೌಲಭ್ಯಗಳಿಗೆ ಜನತೆಗೆ ಕಲ್ಪಿಸಲಾಗುತ್ತಿದೆ. ಈಗಾಗಲೇ ಪಟ್ಟಣ ಮತ್ತು ಗ್ರಾಮೀಣ ಭಾಗದಲ್ಲಿ ಸಾಕಷ್ಟು ಅನುದಾನದಲ್ಲಿ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಇನ್ನಷ್ಟು ಅಭಿವೃದ್ಧಿ ಕಾರ್ಯಗಳ ಮೂಲಕ ಮಾದರಿ ಕ್ಷೇತ್ರವನ್ನಾಗಿ ಮಾಡಲಾಗುವುದು ಎಂದರು.ಈ ಸಂದರ್ಭದಲ್ಲಿ ಮುಖಂಡರಾದ ಜೀರ್ ಅಯ್ಯಪ್ಪ, ಎಸ್.ಚಂದ್ರಶೇಖರಗೌಡ, ಶರಣಗೌಡ ಕೆ ಬಸಪ್ಪ ವಾಸು, ಓಂಕಾರಗೌಡ, ಮೌಲ್ಯ ಜಿ ರುದ್ರ ಉಡುಚಪ್ಪ ಜೀರ್ ಅಯ್ಯಪ್ಪ, ರಾಜ, ಬಸವರಾಜ ನಬೀಸಾಬ್ ಸೇರಿದಂತೆ ಅನೇಕರಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 