ಅಪಘಾತದ ಕಪ್ಪು ಸ್ಥಳಗಳಲ್ಲಿ ಸೂಕ್ತ ಸುರಕ್ಷತಾ ಕ್ರಮ: ಸಚಿವ ಜಾರಕಿಹೊಳಿ
Appropriate safety measures at accident black spots: Minister Jarkiholi
ಕಾರವಾರ 21: ಹುಬ್ಬಳ್ಳಿ ವಾಕರಸಾ ಸಂಸ್ಥೆಯ ವ್ಯಾಪ್ತಿಯ ಎಲ್ಲಾ ಜಿಲ್ಲಾ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆಯನ್ನು ಕರೆದು ಅಪಘಾತ ಕಪ್ಪು ಸ್ಥಳಗಳಲ್ಲಿ ಸೂಕ್ತ ಸುರಕ್ಷತಾ ಕ್ರಮಗಳನ್ನು ಮತ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಅವರು ಬುಧವಾರ, ಹುಬ್ಬಳ್ಳಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಕೇಂದ್ರ ಕಚೇರಿಗೆ ಭೇಟಿ ಮಾತನಾಡಿದರು.
ವಾಕರಸಾ ಸಂಸ್ಥೆಯ ಭದ್ರತಾ ಮತ್ತು ಜಾಗೃತ ಇಲಾಖೆಯಿಂದ ಸರ್ವೆ ಮಾಡಿ ಗುರುತಿಸಲಾಗಿರುವ ಅಪಘಾತ ಕಪ್ಪು ಸ್ಥಳ (ಂಛಿಛಿಜಜಟಿಣ ಃಟಚಿಛಿಞ ಖಠಿಠ) ಕುರಿತು ಅಗತ್ಯ ಸುರಕ್ಷತಾ ಕ್ರಮ ಮತ್ತು ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದರು.
ವಾಕರಸಾ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಸಂಸ್ಥೆಯಿಂದ ಸರ್ವೆ ಮಾಡಿ ಗುರುತಿಸಲಾದ ಅಪಘಾತ ಕಪ್ಪು ಸ್ಥಳಗಳ ಕುರಿತು ಸಚಿತ್ರವಾಗಿರುವ ಸರ್ವೆ ದಾಖಲಾತಿಗಳನ್ನು ವಿವರಿಸಿ ವಿಷಯವನ್ನು ಸಚಿವರ ಗಮನಕ್ಕೆ ತಂದರು. ಈ ಸಂದರ್ಭದಲ್ಲಿ ಸಂಸ್ಥೆಯ ಉಪಾಧ್ಯಕ್ಷ ಸುನಿಲ್ ಹನುಮನ್ನವರ ಹಾಗೂ ಸಂಸ್ಥೆಯ ಮುಖ್ಯ ಭದ್ರತಾ ಮತ್ತು ಜಾಗೃತಾಧಿಕಾರಿ ಗಣೇಶ ರಾಠೋಡ ಉಪಸ್ಥಿತರಿದ್ದರು.
ಬೆಳಗಾವಿಯಲ್ಲಿ ನ್ಯಾಯವಾದಿ ಮನೆ ಮೇಲೆ ಗುಂಡಿನ ದಾಳಿ, ಹತ್ಯೆಗೆ ಯತ್ನ : ಅತಂಕದಲ್ಲಿ ಜನ
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ? 