ಅಭಿವೃದ್ಧಿ ಕಾಮಗಾರಿಗಳಿಗೆ ಬಿಡುಗಡೆಯಾದಂತಹ ಅನುದಾನ ಸಮರ್ಪಕ ಬಳಕೆ: ಸಚಿವ ಎಚ್.ಕೆ.ಪಾಟೀಲ
Appropriate use of funds released for development works: Minister H.K. Patil
ಗದಗ 16: ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಬಿಡುಗಡೆಯಾದಂತಹ ಅನುದಾನ ಸಮರ್ಕವಾಗಿ ಬಳಕೆ ಆಗಬೇಕು. ಈ ಅನುದಾನಡಿ ಜಿಲ್ಲೆಯಲ್ಲಿ ಕೈಗೊಳ್ಳಲಾಗುವ ಅಭಿವೃದ್ಧಿ ಕಾಮಗಾರಿಗಳು ಉತ್ತಮ ಗುಣಮಟ್ಟದಿಂದ ಕೂಡಿರುವಂತೆ ನಿಗಾವಹಿಸಲು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಮತ್ತು ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ.ಪಾಟೀಲ ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ (ಫೆ.16) ಜರುಗಿದ ಮುಖ್ಯಂಮತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಬಿಡುಗಡೆಯಾದ ಅನುದಾನದ ಕಾಮಗಾರಿಗಳ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿಗಳ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಬಿಡುಗಡೆಯಾಗಿರುವ ಅನುದಾನದಡಿ ಕೈಗೊಳ್ಳಲು ಉದ್ದೇಶಿಸಿರುವ ಕಾಮಗಾರಿಗಳನ್ನು ತ್ವರಿತವಾಗಿ ಪ್ರಾರಂಭಿಸಬೇಕು ಎಂದರು. ನಗರೋತ್ಥಾನದಡಿ ಬಿಡುಗಡೆಯಾದಂತಹ ಅನುದಾನ ಹಾಗೂ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳ ಮಾಹಿತಿ ಪಡೆದ ಸಚಿವರು ನಗರೋತ್ಥಾನದಡಿ ಕೈಗೊಳ್ಳಲಾಗುವ ರಸ್ತೆ, ಚರಂಡಿ ಮುಂತಾದ ಕಾಮಗಾರಿಗಳನ್ನು ಕಾಲಮಿತಿಯೊಳಗಾಗಿ ಪೂರ್ಣಗೊಳಿಸಬೇಕು. ಗದಗ ವಿಧಾನ ಸಭಾ ಮತಕ್ಷೇತ್ರ ಸೇರಿದಂತೆ ಜಿಲ್ಲೆಯಲ್ಲಿ ಕೈಗೊಳ್ಳಲಾಗುತ್ತಿರುವ ಅಪೂರ್ಣವಾದಂತಹ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ.ಪಾಟೀಲ ಅವರು ಸೂಚಿಸಿದರು.
ಸಭೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಅಕಬರಸಾಬ್ ಬಬರ್ಚಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್,ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷಕುಮಾರ, ಅಪರ ಜಿಲ್ಲಾಧಿಕಾರಿ ಡಾ.ದುರಗೇಶ್.ಕೆ.ಆರ್, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ನಗರಸಭೆ ಪೌರಾಯುಕ್ತ ರಾಜಾರಾಮ್ ಪವಾರ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೆಶಕರಾದ ಆರ್.ಎಸ್.ಬುರುಡಿ, ನಿರ್ಮಿತ ಕೇಂದ್ರ ಯೋಜನಾ ನಿರ್ದೆಶಕ ಗಂಗಾಧರ್ ಶಿರೋಳ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಶರಣು ಗೊಗೇರಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೆಶಕಿ ನಂದಾ ಹಣಬರಟ್ಟಿ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೆಶಕ ಬಸವರಾಜ ಕೊಟೂರ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 