ಅಗ್ನಿ ಶಾಮಕ ಠಾಣಾ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ
Approval for construction of fire station building
ಮೂಡಲಗಿ 25: ತಾಲೂಕಿನ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ಅಗ್ನಿ ಶಾಮಕ ಠಾಣಾ ಕಟ್ಟಡ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ 15 ನೇ ಹಣಕಾಸು ಯೋಜನೆಯಡಿ 3 ಕೋಟಿ ರೂಪಾಯಿ ಆಡಳಿತಾತ್ಮಕ ಅನುಮೋದನೆಯಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು.
ಈ ಬಗ್ಗೆ ಹೇಳಿಕೆಯನ್ನು ನೀಡಿರುವ ಅವರು, ಒಟ್ಟು 21 ಅಗ್ನಿಶಾಮಕ ಠಾಣಾ ಕಟ್ಟಡಗಳ ಪೈಕಿ 15 ಅಗ್ನಿ ಶಾಮಕ ಠಾಣೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದ್ದು, ಅದರಲ್ಲಿ ಮೂಡಲಗಿಯು ಸೇರಿದೆ ಎಂದು ಹರ್ಷ ವ್ಯಕ್ತಪಡಿಸಿದರು.ಇಷ್ಟರಲ್ಲೇ ಅಗ್ನಿಶಾಮಕ ಠಾಣೆಯ ನೂತನ ಕಟ್ಟಡಕ್ಕೆ ಗುದ್ದಲಿ ಪೂಜೆಯನ್ನು ನೆರವೇರಿಸಲಾಗುವುದು. ಮೂಡಲಗಿ ತಾಲೂಕಿನ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದು, ಇದು ಪಟ್ಟಣದ ಎಪಿಎಂಸಿ ಬಳಿ ನೂತನ ಕಟ್ಟಡವು ಆರಂಭಗೊಳ್ಳಲಿದೆ ಎಂದು ಬಾಲಚಂದ್ರ ಜಾರಕಿಹೊಳಿಯವರು ಮಾಹಿತಿಯನ್ನು ನೀಡಿದರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 