ಏಪ್ರಿಲ್ 30 ರಂದು ಕರ್ನಾಟಕದ ಸಾಂಸ್ಕೃತಿಕ ನಾಯಕ ಶ್ರೀ ಬಸವೇಶ್ವರ ಜಯಂತಿ
ಧಾರವಾಡ 25: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವೇಶ್ವರ ಜಯಂತಿಯನ್ನು ಏಪ್ರಿಲ್ 30 ರಂದು ಸಂಜೆ 5 ಗಂಟೆಗೆ ಕರ್ನಾಟಕ ಕುಲ ಪುರೋಹಿತ ಆಲೂರು ವೆಂಕಟರಾವ ಸಾಂಸ್ಸೃತಿಕ ಭವನದಲ್ಲಿ ಆಯೋಜಿಸಲಾಗಿದೆ.
ಕೇಂದ್ರ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಹಾಗೂ ನವೀಕರಿಸಬಹುದಾದ ಇಂಧನ ಸಚಿವರಾದ ಪ್ರಲ್ಹಾದ ಜೋಶಿ ಹಾಗೂ ವಿಧಾನ ಪರಿಷತ್ತಿನ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ಕಾರ್ಯಕ್ರಮದಲ್ಲಿ ಘನ ಉಪಸ್ಥಿತಿ ವಹಿಸುವರು.
ಕಾರ್ಮಿಕ ಸಚಿವರಾದ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ.ಎಸ್.ಲಾಡ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು.
ಕರ್ನಾಟಕ ವಿಧಾನ ಪರಿಷತ್ತ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ, ಶಾಸಕರು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯ ಅಧ್ಯಕ್ಷ ವಿನಯ ಕುಲಕರ್ಣಿ, ಶಾಸಕರು ಹಾಗೂ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಬ್ಬಯ್ಯ ಪ್ರಸಾದ, ಶಾಸಕರು ಹಾಗೂ ವಾಯವ್ಯ ಸಾರಿಗೆ ನಿಗಮದ ಅಧ್ಯಕ್ಷ ಭರಮಗೌಡ ಅಲಗೌಡ ಕಾಗೆ, ಶಾಸಕರು ಹಾಗೂ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಜೆ.ಎನ್.ಗಣೇಶ, ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ಅಧ್ಯಕ್ಷ ಸೈಯದ್ ಅಜೀಮ್ ಪೀರ್.ಎಸ್.ಖಾದ್ರಿ ಅವರು ವಿಶೇಷ ಅತಿಥಿಗಳಾಗಿ ಭಾಗವಹಿಸುವರು.
ಶಾಸಕರಾದ ಅರವಿಂದ ಚಂದ್ರಕಾಂತ ಬೆಲ್ಲದ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.ಮುಖ್ಯ ಅತಿಥಿಗಳಾಗಿ ಶಾಸಕರಾದ ಎನ್.ಹೆಚ್.ಕೋನರಡ್ಡಿ, ಎಸ್.ವ್ಹಿ.ಸಂಕನೂರ, ಪ್ರದೀಪ ಶೆಟ್ಟರ, ಮಹೇಶ ಟೆಂಗಿನಕಾಯಿ, ಎಂ.ಆರ್.ಪಾಟೀಲ, ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಅಪ್ಪಾಸಿ ಬಬಲೇಶ್ವರ, ಹುಬ್ಬಳ್ಳಿ-ಧಾರವಾಡ ಮಹಾನಗರ ಮಹಾಪೌರರಾದ ರಾಮಪ್ಪ ಕೃಷ್ಣಪ್ಪ ಬಡಿಗೇರ, ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕಿರ್ ಸನದಿ ಅವರು ಭಾಗವಹಿಸುವರು.
ಧಾರವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಪ್ರಾಧ್ಯಾಪಕರಾದ ಡಾ. ಗೀರೀಶ ದೇಸೂರ ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ ನೀಡುವರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಗೋಪಾಲ.ಎಂ.ಬ್ಯಾಕೋಡ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ.ಎಸ್.ಘಾಳಿ ಅವರು ಭಾಗವಹಿಸುವರೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಏಪ್ರಿಲ್ 27 ರಂದು ಜಿಲ್ಲೆಗೆ ಅನುಭವ ಮಂಟಪ-ಬಸವಾದಿ ಶರಣರ
ವೈಭವ ರಥಯಾತ್ರೆ ಆಗಮನ
ಧಾರವಾಡ 25: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜಿಸಿರುವ ಅನುಭವ ಮಂಟಪ ಬಸವಾದಿ ಶರಣರ ವೈಭವ ರಥಯಾತ್ರೆಯು ಏಪ್ರಿಲ್ 27 ರಂದು ಧಾರವಾಡ ಜಿಲ್ಲೆಯಲ್ಲಿ ಸಂಚರಿಸಲಿದೆ.
ಎಪ್ರಿಲ್ 27 ರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣಕ್ಕೆ ಆಗಮಿಸಲಿದ್ದು, ರಥಾಯಾತ್ರೆಯ ಸ್ವಾಗತ ಕಾರ್ಯಕ್ರಮಕ್ಕೆ ಜಿಲ್ಲಾಮಟ್ಟದ ಅಧಿಕಾರಿಗಳು, ಬಸವ ಅಭಿಮಾನಿಗಳು, ಸಮಾಜದ ಪ್ರಮುಖರು, ಸಾರ್ವಜನಿಕರು ಆಗಮಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಧವೆಗೆ ರೂ.15 ಲಕ್ಷ ವಿಮಾ ಹಣಕೊಡಲು ನಿರಾಕರಿಸಿದ ವಿಮಾ ಕಂಪನಿಗೆ ದಂಡ ವಿಧಿಸಿ ಮತ್ತು ಪರಿಹಾರ ನೀಡಲು ಆಯೋಗ ಆದೇಶಧಾರವಾಡ.25: ದಾವಣಗೇರೆ ಜಿಲ್ಲೆಯ ಚನ್ನಗಿರಿಯ ಹೊಸಕೇರಿ ನಿವಾಸಿ ಹನುಮಂತ ಅನ್ನುವವರು ತನ್ನ ದ್ವ್ವಿ-ಚಕ್ರ ವಾಹನದಲ್ಲಿ ಹೋಗುವಾಗ ಅಪಘಾತಕ್ಕೀಡಾಗಿ ಮೃತ ಪಟ್ಟಿದ್ದರು. ಆ ವಾಹನಕ್ಕೆ ಮೃತ ಹೆಚ್.ಡಿ.ಎಫ್ ಸಿ. ಏರಗೋ ಕಂಪನಿಯಿಂದ ವಿಮೆ ಮಾಡಿಸಿದ್ದರು. ಅದರಲ್ಲಿ ವಾಹನದ ಮಾಲೀಕ, ಸವಾರನಿಗೆ ರೂ.15 ಲಕ್ಷ ಮೊತ್ತದ ಪಿ.ಎ.ಕವರೇಜ್ ಸೇರಿತ್ತು. ತನ್ನ ಗಂಡ ಅಪಘಾತದಲ್ಲಿ ಮೃತಪಟ್ಟ ನಂತರ ಆತನ ಹೆಂಡತಿ ರೋಜಾ ವಿಮೆ ಪರಿಹಾರ ಕೊಡುವಂತೆ ದಾಖಲೆಗಳ ಸಮೇತ ವಿಮಾ ಕಂಪನಿಗೆ ಕ್ಲೇಮ ಅರ್ಜಿ ಸಲ್ಲಿಸಿದ್ದರು. ದೂರುದಾರಳ ಕ್ಲೇಮನ್ನು ಎದುರುದಾರ ವಿಮಾ ಕಂಪನಿಯವರು ತಿರಸ್ಕರಿಸಿದರು. ಅಂತಹ ವಿಮಾ ಕಂಪನಿಯವರ ನಡಾವಳಿಕೆ ಗ್ರಾಹಕರ ರಕ್ಷಣಾ ಕಾಯಿದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಹೇಳಿ ಎದುರುದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಕೋರಿ ದೂರುದಾರಳು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ದಿ.27/08/2024 ರಂದು ದೂರು ಸಲ್ಲಿಸಿದ್ದರು.
ಸದರಿ ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷರಾದ ಈಶಪ್ಪ. ಭೂತೆ, ವಿಶಾಲಾಕ್ಷಿ. ಅ. ಬೋಳಶೆಟ್ಟಿ ಸದಸ್ಯರು, ದೂರು ದಾರಳು ಮೃತ ಹನುಮಂತಪ್ಪನ ಹೆಂಡತಿ ಇದ್ದಾಳೆ. ಮೃತತನ್ನ ದ್ವಿ ಚಕ್ರ ವಾಹನಕ್ಕೆ ಪ್ರೀಮಿಯಮ್ ಕಟ್ಟಿ ಎದುರುದಾರ ವಿಮಾ ಕಂಪನಿಯಿಂದ ವಿಮೆ ಪಡೆದಿದ್ದಾನೆ. ಆ ವಿಮೆ ಅಪಘಾತ ಮತ್ತು ಮೃತನ ಸಾವಿನ ಕಾಲಕ್ಕೆ ಚಾಲ್ತಿಯಿರುತ್ತದೆ. ವಿಮೆಯಲ್ಲಿ ಮೃತ ಮಾಲೀಕ, ಸವಾರನ ರಕ್ಷಣೆಗಾಗಿ ರೂ.15 ಲಕ್ಷ ಮೊತ್ತಕ್ಕೆ ಪಿ.ಎ.ಕವರೇಜ್ ಆಗಿರುತ್ತದೆ. ವಸ್ತು ಸ್ಥಿತಿ ಹೀಗಿರುವಾಗ ಮೃತ ಅಪಘಾತದಲ್ಲಿ ಸಾವನ್ನಪ್ಪಿದ ಕಾರಣಕ್ಕಾಗಿ ನಾಮಿನಿಯಾಗಿರುವ ದೂರುದಾರಳಿಗೆ ರೂ.15 ಲಕ್ಷ ಪರಿಹಾರ ಕೊಡುವುದು ಎದುರುದಾರ ವಿಮಾ ಕಂಪನಿಯವರ ಕರ್ತವ್ಯವಾಗಿದೆ. ಆದರೆ ಅವರು ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ವಿಫಲರಾಗಿದ್ದಾರೆ. ಪರಿಣಾಮವಾಗಿ ಎದುರುದಾರ ವಿಮಾ ಕಂಪನಿಯವರು ದೂರುದಾರಳಿಗೆ ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ ಎಸಗಿದ್ದಾರೆ ಅಂತಾ ಆಯೋಗ ಅಭಿಪ್ರಾಯಪಟ್ಟು ತೀರ್ು ನೀಡಿದೆ.
ತೀರ್ು ನೀಡಿದ ಒಂದು ತಿಂಗಳ ಒಳಗಾಗಿ ಎದುರುದಾರ ಎಚ್.ಎಇ.ಎಪ್.ಸಿ ಏರಗೊ ವಿಮಾ ಕಂಪನಿಯವರು ದೂರುದಾರಳಿಗೆ ರೂ. 15 ಲಕ್ಷ ಪರಿಹಾರ ಮತ್ತು ಅದರ ಮೇಲೆ ದೂರು ದಾಖಲಿಸಿದಾಗಿನಿಂದ ಶೇ10 ರಂತೆ ಬಡ್ಡಿ ಲೆಕ್ಕ ಹಾಕಿ ಕೊಡುವಂತೆ ಆಯೋಗ ನಿರ್ದೇಶಿಸಿದೆ. ದೂರುದಾರಳಿಗೆ ಆಗಿರುವ ಅನಾನುಕೂಲ ಹಾಗೂ ಮಾನಸಿಕ ತೊಂದರೆಗಾಗಿ ರೂ.50,000 ಪರಿಹಾರ ಮತ್ತು ಪ್ರಕರಣದ ಖರ್ಚು ವೆಚ್ಚ ರೂ.10,000 ಕೊಡುವಂತೆ ಎದುರುದಾರ ವಿಮಾ ಕಂಪನಿಗೆ ಆಯೋಗ ಆದೇಶಿಸಿದೆ.