ಸರ್ಕಾರದ ವಿರುದ್ಧ ಅರವಿಂದ ಕುಲಕರ್ಣಿ ಆಕ್ರೋಶ
Aravind Kulkarni expresses outrage against the government
ಲೋಕದರ್ಶನ ವರದಿ
ವಿಜಯಪುರ 01 : ವಿಶ್ವಗುರು ಬಸವಣ್ಣನವರ ಜನ್ಮಸ್ಥಳವಾದ ಇಂಗಳೇಶ್ವರ ಗ್ರಾಮವು ಐತಿಹಾಸಿಕ ಹಾಗೂ ಪೌರಾಣಿಕ ಹಿನ್ನೆಲೆಯುಳ್ಳ ಗ್ರಾಮವಾಗಿದ್ದು ಇನ್ನೂ ಮೂಲಭೂತ ಸೌಲಭ್ಯಗಳಿಂದ ವಂಚಿತವಾಗಿದ್ದು, ಅಭಿವೃದ್ಧಿ ಶೂನ್ಯವಾಗಿದೆ ಸರ್ಕಾರ ಕೂಡಲೇ ಗ್ರಾಮದ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡ ಹಾಗೂ ಬಸವಣ್ಣನವರ ವಂಶಸ್ಥರಾದ ಅರವಿಂದ ಕುಲಕರ್ಣಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಶನಿವಾರದಂದು ವಿಜಯಪುರ ನಗರದ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ಕರೆದಿದ್ದ ಮಾಧ್ಯಮ ಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜಗತ್ತಿಗೆ ಸಮಾನತೆ ಮತ್ತು ಮಾನವತೆಯ ಸಂದೇಶ ಸಾರಿದ ಬಸವಣ್ಣನವರ ಜನ್ಮಸ್ಥಳದಲ್ಲೇ ಅಭಿವೃದ್ಧಿಯ ಕೊರತೆ ಕಾಡುತ್ತಿದೆ ಎಂದು ಅರವಿಂದ ಕುಲಕರ್ಣಿ ವಿಷಾದ ವ್ಯಕ್ತಪಡಿಸಿದ್ದಾರೆ.
ಗ್ರಾಮದಲ್ಲಿ ಇದುವರೆಗೆ ಬಸ್ ನಿಲ್ದಾಣ ನಿರ್ಮಾಣವಾಗಿಲ್ಲ. ಪ್ರತಿದಿನ ಬಸವ ಜನ್ಮಸ್ಥಳ ವೀಕ್ಷಣೆಗೆ ಆಗಮಿಸುವ ನೂರಾರು ಭಕ್ತರು ಹಾಗೂ ಪ್ರವಾಸಿಗರು ಬಿಸಿಲು, ಮಳೆ, ಗಾಳಿ ನಡುವೆ ಬಯಲಿನಲ್ಲಿ ಬಸ್‌ಗಾಗಿ ಕಾಯುವ ಪರಿಸ್ಥಿತಿ ಎದುರಾಗಿದೆ. ಶೌಚಾಲಯದ ಇಲ್ಲದ ಕಾರಣ ಮಹಿಳೆಯರು ಮತ್ತು ವಯೋವೃದ್ಧರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಅದರಲ್ಲಿ ಮುಖ್ಯವಾಗಿ ಮಹಿಳೆಯರು ಮುಖಮುಚ್ಚಿಕೊಂಡು ಬಹಿರ್ದೆಸೆಗೆ ಹೋಗಬೇಕಾಗುತ್ತದೆ. ಬಸವ ಜನ್ಮ ಸ್ಥಳದಲ್ಲಿ ಇಂತಹ ದುಸ್ತಿತಿಯನ್ನು ಕಂಡು ಸರ್ಕಾರಕ್ಕಷ್ಟೇ ಅಲ್ಲ ಗ್ರಾಮಸ್ಥರಿಗೆ ಉಗಿದು ಹೋಗುತ್ತಿದ್ದಾರೆ.
ಇದು ಇಂಗಳೇಶ್ವರ ಗ್ರಾಮದ ಜನತೆಗೆ ಅಪಮಾನವಾಗುತ್ತಿದೆ. ಕಾರಣ ಸರ್ಕಾರ ತಕ್ಷಣವೇ ಸುಸಜ್ಜಿತ ಬಸ್ ನಿಲ್ದಾಣ ಹಾಗೂ ಸಾರ್ವಜನಿಕ ಶೌಚಾಲಯ ನಿರ್ಮಿಸಬೇಕು ಎಂದರು. ಶೈಕ್ಷಣಿಕ ಕ್ಷೇತ್ರದಲ್ಲಿಯೂ ಗ್ರಾಮ ಹಿಂದುಳಿದಿದ್ದು, ಸರ್ಕಾರಿ ಶಾಲೆ 10ನೇ ತರಗತಿವರೆಗೆ ಮಾತ್ರ ಇದೆ. ಉನ್ನತ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳು ಬೇರೆ ಊರುಗಳಿಗೆ ತೆರಳಬೇಕಾಗುತ್ತಿದೆ. ಖಾಸಗಿ ಶಿಕ್ಷಣ ಸಂಸ್ಥೆ ಇದ್ದರೂ ಹೆಚ್ಚಿನ ದೇಣಿಗೆ ನೀಡಲು ಬಡ ವಿದ್ಯಾರ್ಥಿಗಳಿಗೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಇಂಗಳೇಶ್ವರ ಗ್ರಾಮದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆರಂಭಿಸಬೇಕೆಂದು ಅವರು ಆಗ್ರಹಿಸಿದರು.
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ 