ಗಣಿಬಾಧಿತ ಪ್ರದೇಶದಲ್ಲಿ ತಾಲ್ಲೂಕಿಗೊಂದು ವೃಕ್ಷೋದ್ಯಾನ: ಅರಣ್ಯ ಸಚಿವ ಈಶ್ವರ ಖಂಡ್ರೆ
Arboriculture for a taluk in a mine-hit area: Forest Minister Ishwara Khandre
ಗಣಿಬಾಧಿತ ಪ್ರದೇಶದಲ್ಲಿ ತಾಲ್ಲೂಕಿಗೊಂದು ವೃಕ್ಷೋದ್ಯಾನ: ಅರಣ್ಯ ಸಚಿವ ಈಶ್ವರ ಖಂಡ್ರೆ
ಬಳ್ಳಾರಿ 21: ಗಣಿಬಾಧಿತ ಪ್ರದೇಶಗಳಲ್ಲಿ ಪರಿಸರದ ಮೇಲಿನ ದುಷ್ಪರಿಣಾಮ ತಗ್ಗಿಸಲು ತಾಲ್ಲೂಕಿಗೊಂದು ವೃಕ್ಷೋದ್ಯಾನ ನಿರ್ಮಿಸಲು ಕಾರ್ಯ ಯೋಜನೆ ರೂಪಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಅವರು ಸೂಚಿಸಿದರು. ಬಳ್ಳಾರಿಯ ಅರಣ್ಯ ಇಲಾಖೆ ಕಚೇರಿಯಲ್ಲಿ ಶನಿವಾರ ಪ್ರಗತಿ ಪರೀಶೀಲನಾ ಸಭೆ ನಡೆಸಿದ ಅವರು, ಕರ್ನಾಟಕ ಗಣಿ ಪರಿಸರ ಪುನರ್ ಸ್ಥಾಪನೆ ನಿಗಮ (ಕೆ.ಎಂ.ಇ.ಆರಿ್ಸ) ನಿಧಿ ಬಳಸಿಕೊಂಡು ಜೀವಿ ಪರಿಸ್ಥಿತಿಯ ಮೇಲಾಗಿರುವ ಹಾನಿ ತಗ್ಗಿಸಲು ಕ್ರಿಯಾಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು. ಗಣಿ ಪ್ರದೇಶಗಳಲ್ಲಿ ವನ್ಯಜೀವಿ ಸಂರಕ್ಷಣೆ ಯೋಜನೆಯನ್ನು ಸಮರ್ಕವಾಗಿ ಅನುಷ್ಠಾನಗೊಳಿಸುವಂತೆ ಹಾಗೂ ವನ್ಯ ಜೀವಿಗಳಿಗೆ ಬೇಸಿಗೆಯಲ್ಲಿ ನೀರಿನ ಕೊರತೆ ಬಾರದಂತೆ ನೀರುಗುಂಡಿಗಳನ್ನು ಸಮರ್ಕವಾಗಿ ನಿರ್ವಹಣೆ ಮಾಡುವಂತೆ ಸಚಿವರು ಸೂಚಿಸಿದರು.ಬಳ್ಳಾರಿ ವೃತ್ತದಲ್ಲಿ ಎಷ್ಟು ಸಿ ಪ್ರವರ್ಗದ ಗಣಿಗಳಿವೆ, ಗಣಿ ಕಂಪನಿಗಳಿಗೆ ಪರಿಹಾರಾತ್ಮಕ ಅರಣ್ಯ ಬೆಳೆಸಲು ಎಷ್ಟು ಡಿಗ್ರೇಡೆಡ್ ಅರಣ್ಯ ಭೂಮಿ ನೀಡಲಾಗಿದೆ, ಎಷ್ಟು ಭೂಮಿಯಲ್ಲಿ ಪರಿಹಾರಾತ್ಮಕ ಅರಣ್ಯ ಬೆಳೆಸಲಾಗಿದೆ. ಅರಣ್ಯದಂಚಿನಲ್ಲಿ ಶ್ರೀಗಂಧ, ಬೀಟೆ, ತೇಗ ಮೊದಲಾದ ಬೆಲೆಬಾಳುವ ಮರಗಳ ಜಿಯೋ ಟ್ಯಾಗ್ ಮಾಡಲಾಗಿದೆಯೇ ಎಂಬ ಪ್ರಶ್ನೆಗಳಿಗೆ ಅಧಿಕಾರಿಗಳು ಸಮರ್ಕ ಉತ್ತರ ನೀಡದ್ದಕ್ಕೆ ಸಚಿವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ದಾವಣಗೆರೆ, ಕೊಪ್ಪಳ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ ವಿಭಾಗದಲ್ಲಿ ಹೆಚ್ಚಿನ ಸಸಿಗಳನ್ನು ನೆಟ್ಟು ಪೋಷಿಸಲು ಮತ್ತು ರೈತರ ಬೇಡಿಕೆಗೆ ಅನುಗುಣವಾಗಿ ಸಸಿಗಳನ್ನು ವಿತರಿಸಲು ನರ್ಸರಿಗಳಲ್ಲಿ ಸಸಿ ಬೆಳೆಸಲು ಹೆಚ್ಚಿನ ಮುತುವರ್ಜಿ ವಹಿಸುವಂತೆ ಸೂಚಿಸಿದರು.
ಅರಣ್ಯ ಒತ್ತುವರಿ ಬಗ್ಗೆ ನಿಗಾ ಇಡಲು ಸೂಚನೆ: ಗುತ್ತಿಗೆ ನೀಡಿರುವ ಪ್ರದೇಶಕ್ಕಿಂತ ಹೆಚ್ಚುವರಿಯಾಗಿ ಗಣಿಗಾರಿಕೆಗೆ ಅರಣ್ಯ ಪ್ರದೇಶ ಒತ್ತುವರಿಯಾಗುತ್ತಿರುವ ಬಗ್ಗೆ ದೂರುಗಳಿದ್ದು, ಉಪಗ್ರಹ ಚಿತ್ರ ಮತ್ತು ಕೆ.ಎಂ.ಎಲ್. ನಕ್ಷೆ ಆಧರಿಸಿ ಅರಣ್ಯ ಸಂರಕ್ಷಿಸುವಂತೆಯೂ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಭೆಯಲ್ಲಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಚಂದ್ರಶೇಖರ ನಾಯ್ಕ್, ಬಳ್ಳಾರಿ ವಿಭಾಗದ ಉಪ ಸಂರಕ್ಷಣಾಧಿಕಾರಿ ಸಂದೀಪ್ ಹೆಚ್.ಸೂರ್ಯವಂಶಿ, ಅರಣ್ಯ ಇಲಾಖೆಯ ಸಾಮಾಜಿಕ ಅರಣ್ಯ ವಿಭಾಗದ ಮಾರ್ಕಂಡೇಯ ಸೇರಿದಂತೆ ವಿಜಯನಗರ ಜಿಲ್ಲೆಯ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 