ಆರಿಫ್ ಅಹ್ಮದ್ಗೆ ‘ಕರುನಾಡ ಚೇತನ’ ಪ್ರಶಸ್ತಿ ಪ್ರದಾನ

ಆರಿಫ್ ಅಹ್ಮದ್ಗೆ ‘ಕರುನಾಡ ಚೇತನ’ ಪ್ರಶಸ್ತಿ ಪ್ರದಾನ  Arif Ahmed was awarded 'Karunada Chetana' award

ಆರಿಫ್ ಅಹ್ಮದ್ಗೆ ‘ಕರುನಾಡ ಚೇತನ’ ಪ್ರಶಸ್ತಿ ಪ್ರದಾನ  

ಕೊಪ್ಪಳ, ಸೆ.13: ಹಿರಿಯ ಸಾಹಿತಿ ಹಾಗೂ ಪತ್ರಕರ್ತ ಜಿ.ಎಸ್‌. ಗೋನಾಳ ಅವರ ‘ವಿಶಾಲ ಪ್ರಕಾಶನ’ ವತಿಯಿಂದ ನೀಡಲಾಗುವ ಪ್ರತಿಷ್ಠಿತ ‘ಕರುನಾಡ ಚೇತನ’ ಪ್ರಶಸ್ತಿಯನ್ನು ಮಾಧ್ಯಮ ಕ್ಷೇತ್ರದಲ್ಲಿ ಒಂದು ದಶಕಕ್ಕೂ ಹೆಚ್ಚು ಕಾಲ ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ವಾರ್ತಾ ಇಲಾಖೆಯ ಸುದ್ದಿ ವಿಭಾಗದ ಹೊರಗುತ್ತಿಗೆ ಸಿಬ್ಬಂದಿ ಆರಿಫ್ ಅಹ್ಮದ್ ಅವರಿಗೆ ಪ್ರದಾನ ಮಾಡಿ ಗೌರವಿಸಲಾಯಿತು.  ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ವಿಶಾಲ ಪ್ರಕಾಶನ, ಮಾದಿನೂರು, ಅಖಿಲ ಭಾರತ ವಚನ ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಿಷತ್ತು ಹಾಗೂ ಸಿರಿಗನ್ನಡ ವೇದಿಕೆ, ಕೊಪ್ಪಳ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಪುಸ್ತಕ ಲೋಕಾರೆ​‍್ಣ ಹಾಗೂ ವಿವಿಧ ಪತ್ರಿಕೆಗಳ ಬಿಡುಗಡೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.  ಜಿಲ್ಲಾಡಳಿತ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಸುದ್ದಿ ಪ್ರಸಾರ ಮತ್ತು ಸಾರ್ವಜನಿಕ ಸಂಪರ್ಕ ಕಾರ್ಯದಲ್ಲಿ ನಿರಂತರವಾಗಿ ತೊಡಗಿಸಿಕೊಂಡು ಸಲ್ಲಿಸುತ್ತಿರುವ ಸೇವೆಯನ್ನು ಗುರುತಿಸಿ ಆರಿಫ್ ಅಹ್ಮದ್ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಮಾಧ್ಯಮ ಹಾಗೂ ಸಮಾಜ ಸೇವಾ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸಿದ ಸಾಧಕರನ್ನೂ ಗೌರವಿಸಲಾಯಿತು.  ಆರಿಫ್ ಅಹ್ಮದ್ ಅವರು ಕೊಪ್ಪಳದ ಹಿರಿಯ ಪತ್ರಕರ್ತ ಎಂ. ಸಾದಿಕ್ ಅಲಿ ಅವರ ಪುತ್ರರಾಗಿದ್ದು, ಪತ್ರಿಕೋದ್ಯಮದಲ್ಲಿ ಡಿಪ್ಲೊಮಾ ಶಿಕ್ಷಣ ಪಡೆದಿದ್ದಾರೆ. ಕಳೆದ ಒಂದು ದಶಕದಿಂದ ಕೊಪ್ಪಳ ಜಿಲ್ಲೆಯ ವಾರ್ತಾ ಹಾಗೂ ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಹೊರಗುತ್ತಿಗೆ ಸಿಬ್ಬಂದಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸರ್ಕಾರಿ ಕಾರ್ಯಕ್ರಮಗಳು ಹಾಗೂ ಇಲಾಖೆಗಳ ಚಟುವಟಿಕೆಗಳ ಸುದ್ದಿಗಳನ್ನು ಮಾಧ್ಯಮಗಳಿಗೆ ತಲುಪಿಸುವ ಕಾರ್ಯದಲ್ಲಿ ಅವರು ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.  ಅವರ ಸೇವೆಯನ್ನು ಗುರುತಿಸಿ ‘ಕರುನಾಡ ಚೇತನ’ ಪ್ರಶಸ್ತಿ ಲಭಿಸಿರುವುದಕ್ಕೆ ಜಿಲ್ಲೆಯ ಕಾರ್ಯನಿರತ ಪತ್ರಕರ್ತರು ಹಾಗೂ ಕೆಜೆಯು ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.