ಬೆಂಗಳೂರು, ಫೆ 27 : ಸ್ಯಾಂಡಲ್ ವುಡ್ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರಿಗೆ ನಿನ್ನೆ ಮಧ್ಯರಾತ್ರಿ ಹೃದಯಾಘಾತವಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತಮ್ಮ ನಿವಾಸದಲ್ಲಿ ತಂಗಿದ್ದ ಜನ್ಯ ಅವರಿಗೆ ಹಠಾತ್ ಹೃದಯಾಘಾತ ಉಂಟಾಗಿದ್ದು, ಸದ್ಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿತಿಗತಿಯ ಕುರಿತು ಆಸ್ಪತ್ರೆಯಿಂದ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಇವರು ಕನ್ನಡದ ಹಲವು ಚಿತ್ರಗಳಿಗೆ ಸಂಗೀತ ನಿರ್ದೇಶನ ಮಾಡಿದ್ದು, ರಿಯಾಲಿಟಿ ಶೋಗಳಲ್ಲಿ ಜಡ್ಜ್ ಆಗಿ ಕಾಣಿಸಿಕೊಂಡಿದ್ದಾರೆ.