ಬೆಂಗಳೂರು 27: ಅಕರ್ಾವತಿ ಡಿ ನೋಟೀಫಿಕೇಷನ್ ಪ್ರಕರಣದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರ ಸ್ವಾಮಿಯವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಅಕರ್ಾವತಿ ಡಿ ನೋಟೀಫಿಕೇಷನ್ ಪ್ರಕರಣದಿಂದ ಕೈ ಬಿಡುವಂತೆ ಸಲ್ಲಿಸಿದ ಅಜರ್ಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ವಿ.ವಿ.ಪಾಟೀಲ್ ಅವರು ಸಿಎಂ ಸೇರಿ ಮೂವರನ್ನು ತನಿಖೆಯಿಂದ ಕೈ ಬಿಟ್ಟು ಆದೇಶ ನೀಡಿದ್ದಾರೆ.
ಪ್ರಕರಣದಲ್ಲಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಶ್ರೀರಾಮ್, ಜ್ಯೋತಿರಾಮಲಿಂಗಂ ಅವರನ್ನು ಮುಕ್ತಗೊಳಿಸಿದೆ. ಮತ್ತೊಬ್ಬ ಆರೋಪಿಯಾಗಿದ್ದ ಚನ್ನಿಗಪ್ಪ ಯಾವುದೇ ಅಜರ್ಿ ಸಲ್ಲಿಸದ ಕಾರಣ ಅವರ ಬಗ್ಗೆ ಯಾವುದೇ ಆದೇಶ ನೀಡಿಲ್ಲ.
ಅಕರ್ಾವತಿ ಲೇಔಟ್ ಡಿ ನೋಟೀಫಿಕೇಷನ್ ಪ್ರಕರಣ ಸಂಬಂಧ ನ್ಯಾಯಾಲಯದ ತೀಪರ್ು ವ್ಯತಿರಿಕ್ತವಾಗಿದ್ದರೆ ಕುಮಾರಸ್ವಾಮಿ ಅವರಿಗೆ ಕಂಟಕವಾಗುವ ಸಾಧ್ಯತೆ ಇತ್ತು. ಈಗ ಅವರನ್ನು ಆರೋಪ ಮುಕ್ತಗೊಳಿಸಿರುವುದು ನಿರಾಳವಾದಂತಾಗಿದೆ.
ಅಕರ್ಾವತಿ ಡಿ ನೋಟೀಫಿಕೇಷನ್ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನವನ್ನೇ ಸೃಷ್ಟಿಸಿತ್ತು. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಾಯಕರ ನಡುವೆ ಪರಸ್ಪರ ಆರೋಪ-ಪ್ರತ್ಯಾರೋಪಕ್ಕೂ ಕಾರಣವಾಗಿತ್ತು. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ಅಕರ್ಾವತಿಯಲ್ಲಿ ಡಿ ನೋಟಿಫಿಕೇಷನ್ ಮಾಡಲಾಗಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ಆರೋಪಿಸಿ ಸಿಬಿಐ ತನಿಖೆಗೆ ಒತ್ತಾಯಿಸಿದ್ದರು. ಪ್ರತಿಪಕ್ಷ ಬಿಜೆಪಿಯೂ ಕೂಡ ಸಿಬಿಐ ತನಿಖೆಗೆ ಆಗ್ರಹಿಸಿತ್ತು.