ತಾಯಿ, ಶಿಶು ಮರಣ ತಪ್ಪಿಸಲು ಕ್ರಮತಾಲ್ಲೂಕು ಆಸ್ಪತ್ರೆಗಳಲ್ಲಿ 24*7 ಆರೋಗ್ಯ ಸೇವೆಗೆ ವ್ಯವಸ್ಥೆ: ಸಚಿವ ದಿನೇಶ್ ಗುಂಡೂರಾವ್
Arrangements for 24*7 health services in taluk hospitals to prevent maternal and infant mortality: M
ಬೆಳಗಾವಿ ಸುವರ್ಣ ವಿಧಾನಸೌಧ ಡಿ.11: ತಾಯಿ ಹಾಗೂ ಶಿಶು ಮರಣ ಪ್ರಮಾಣವನ್ನು ಪರಿಣಾಮಕಾರಿಯಾಗಿ ಕಡಿಮೆ ಮಾಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲಿ ದಿನದ 24 ಗಂಟೆಯೂ ಸಾರ್ವಜನಿಕರಿಗೆ ಆರೋಗ್ಯ ಸೇವೆ ಒದಗಿಸುವಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಗುರುವಾರ ಅವರು ಮಾತನಾಡಿದರು. ರಾಜ್ಯದ ಎಲ್ಲ ತಾಲ್ಲೂಕು ಆಸ್ಪತ್ರೆಗಳಲ್ಲಿ ಕನಿಷ್ಠ ತಲಾ 02 ಸ್ತ್ರೀರೋಗ ಪ್ರಸೂತಿ ತಜ್ಞರು, ಅರವಳಿಕೆ ತಜ್ಞರು, ಮಕ್ಕಳ ತಜ್ಞರು ಸೇರಿದಂತೆ ತಜ್ಞ ವೈದ್ಯರನ್ನು ನೇಮಿಸಿ, ದಿನದ 24 ಗಂಟೆಯೂ ಸಾರ್ವಜನಿಕರಿಗೆ ಆರೋಗ್ಯ ಸೇವೆ ಲಭ್ಯವಾಗುವಂತೆ ಮಾಡುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಇದರಿಂದಾಗಿ ದಿನದ ಯಾವುದೇ ಸಮಯದಲ್ಲಿಯೇ ಹೆರಿಗೆ ಸೌಲಭ್ಯ, ನವಜಾತ ಶಿಶುಗಳ ಆರೈಕೆ ಸೇರಿದಂತೆ ಗುಣಮಟ್ಟದ ಆರೋಗ್ಯ ಸೇವೆ ತಾಲ್ಲೂಕು ಆಸ್ಪತ್ರೆಗಳಲ್ಲಿ ಲಭ್ಯವಾಗಲಿದೆ. ಬಾಣಂತಿ, ಶಿಶು ಮರಣ ಪ್ರಕರಣಗಳನ್ನು ತಡೆಗಟ್ಟಲು ಇದು ಪರಿಣಾಮಕಾರಿ ವ್ಯವಸ್ಥೆಯಾಗಲಿದೆ, ಅಲ್ಲದೆ ಹೆರಿಗೆ ಸೇರಿದಂತೆ ಇತರೆ ಆರೋಗ್ಯ ಸಮಸ್ಯೆಗಳಿಗೆ ಜಿಲ್ಲಾ ಆಸ್ಪತ್ರೆಗೆ ತೆರಳುವ ಪ್ರಕರಣಗಳಿಗೂ ಕಡಿವಾಣ ಬೀಳುತ್ತದೆ ಎಂದರು.
ಸಮುದಾಯ ಆರೋಗ್ಯ ಕೇಂದ್ರಗಳೂ ಕೂಡ 24 ಗಂಟೆ ಆರೋಗ್ಯ ಸೇವೆ ನೀಡಬೇಕೆಂಬುದು ಸರ್ಕಾರದ ಆಶಯವಾಗಿದ್ದು, ಹೀಗಾಗಿ ಸಮುದಾಯ ಆರೋಗ್ಯ ಕೇಂದ್ರಗಳಿಗೂ ತಜ್ಞ ವೈದ್ಯರು ಸೇರಿದಂತೆ ಅಗತ್ಯ ಸಿಬ್ಬಂದಿ ನೇಮಕಕ್ಕೆ ಸರ್ಕಾರ ಕ್ರಮ ಕೈಗೊಂಡಿದೆ. ಹೊಸ ತಾಲ್ಲೂಕು ರಚನೆಯಾಗಿರುವ ಕಡೆಗಳಲ್ಲಿ, ದೂರ ಇರುವ ಸ್ಥಳಗಳ ಆಸ್ಪತ್ರೆಗಳಲ್ಲಿನ ವೈದ್ಯರನ್ನು ಇಲ್ಲಿಗೆ ಸ್ಥಳಾಂತರಿಸುವುದಿಲ್ಲ, ಒಟ್ಟಾರೆ ಜನರಿಗೆ ಒಳ್ಳೆಯ ಆರೋಗ್ಯ ಸೇವೆ ಸಿಗಬೇಕು. ಸರ್ಕಾರಿ ಆಸ್ಪತ್ರೆಗಳಲ್ಲಿ ಒಳ್ಳೆಯ ಚಿಕಿತ್ಸೆ, ಓಷಧಿ ಸಿಗುತ್ತದೆ ಎಂಬ ಭಾವನೆ ಸಾರ್ವಜನಿಕರಿಗೆ ಬರಬೇಕು. ಇಲಾಖೆಯ ಕಾರ್ಯವೈಖರಿಗಳಲ್ಲಿ ಸುಧಾರಣೆಗಳನ್ನು ತರುವಾಗ ಆರಂಭದಲ್ಲಿ ಕೆಲವೊಂದು ಸಮಸ್ಯೆ ಬರುವುದು ಸಹಜ, ಅವುಗಳನ್ನು ಪರಿಹರಿಸಿ, ಉತ್ತಮ ಸೇವೆ ಲಭ್ಯವಾಗುವಂತೆ ಮಾಡುತ್ತೇವೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.----
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 