15ರಂದು ಕನಕದಾಸ ಜಯಂತಿ ಆಚರಣೆಗೆ ಅಚ್ಚುಕಟ್ಟು ವ್ಯವಸ್ಥೆ ಮಾಡಿ: ಅಪರ ಜಿಲ್ಲಾಧಿಕಾರಿ ಮಾರುತಿ

ಕೊಪ್ಪಳ : ಜಿಲ್ಲಾಡಳಿತದ ವತಿಯಿಂದ ನವೆಂಬರ್ 15 ರಂದು ಶ್ರೀ ಕನಕದಾಸ ಜಯಂತಿಯನ್ನು ಆಚರಿಸಲಾಗುತ್ತಿದ್ದು, ಇದಕ್ಕೆ ಸಂಬಂಧಿಸಿದ ಎಲ್ಲಾ ಇಲಾಖೆಗಳು ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಿ ಜಯಂತಿ ಆಚರಣೆಯನ್ನು ಯಶಸ್ವಿಗೊಳಿಸಿ ಎಂದು ಅಪರ ಜಿಲ್ಲಾಧಿಕಾರಿ ಎಂ.ಪಿ. ಮಾರುತಿ ಹೇಳಿದರು. 

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಶ್ರೀ ಕನಕದಾಸರ ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಪ್ರಸಕ್ತ ವರ್ಷ ರಾಜ್ಯದಲ್ಲಿ ನೆರೆ ಹಾವಳಿ ಸಂಭವಿಸಿದ ಕಾರಣ ಬಹುತೇಕ ಜಯಂತಿಗಳನ್ನು ಸರಳವಾಗಿ ಆಚರಿಸಲಾಗಿದೆ. ಅದರಂತೆ ಕನಕದಾಸರ ಜಯಂತಿಯನ್ನೂ ಕೂಡ ಸಮುದಾಯದವರ ಅಭಿಪ್ರಾಯ ಹಾಗೂ ಒಪ್ಪಿಗೆ ಮೇರೆಗೆ ಅಚರಿಸಲು ಜಿಲ್ಲಾಡಳಿತದಿಂದ ಕ್ರಮ ಕೈಗೊಳ್ಳಲಾಗುವುದು. ಆದ್ದರಿಂದ ಸಮಾಜದ ಮುಖಂಡರು ಚಚರ್ಿಸಿ ಈ ಕುರಿತು ಒಮ್ಮತದ ಅಭಿಪ್ರಾಯವನ್ನು ನೀಡುವಂತೆ ಅವರು ತಿಳಿಸಿದರು. 

ವೇದಿಕೆ ಕಾರ್ಯಕ್ರಮವನ್ನು ನಗರದ ಸಾಹಿತ್ಯ ಭವನದಲ್ಲಿ ಆಯೋಜಿಸಲಾಗುವುದು. ಉಪನ್ಯಾಸ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಕಾರ್ಯಕ್ರಮ ದಿನದಂದು, ರಸ್ತೆ ಸ್ವಚ್ಛತೆ, ಮೆರವಣಿಗೆಯಲ್ಲಿ ಹಾಗೂ ವೇದಿಕೆ ಸಮಾರಂಭದಲ್ಲಿ ಪಾಲ್ಗೊಳ್ಳುವ ಜನರಿಗೆ ಕುಡಿಯುವ ನೀರಿನ ವ್ಯವಸ್ಥೆ ಕೈಗೊಳ್ಳಬೇಕು. ಜಿಲ್ಲಾ ಪೊಲೀಸ್ ಇಲಾಖೆ ಅಗತ್ಯ ಪೊಲೀಸ್ ಬಂದೋಬಸ್ತ್ ಒದಗಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ ಅಪರ ಜಿಲ್ಲಾಧಿಕಾರಿಗಳು, ಸಮಾಜ ಬಾಂಧವರು, ಸಾರ್ವಜನಿಕರು ಸಮಾರಂಭದಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. 

ಸಭೆಯಲ್ಲಿ ಉಪ ವಿಭಾಗಾಧಿಕಾರಿ ಸಿ. ಡಿ. ಗೀತಾ, ತಹಶೀಲ್ದಾರ ಜೆ.ಬಿ. ಮಜ್ಗಿ, ಡಿವೈಎಸ್ಪಿ ವೆಂಕಟಪ್ಪ ನಾಯಕ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿದರ್ೆಶಕರಾದ ಸಿದ್ಧಲಿಂಗೇಶ ಕೆ. ರಂಗಣ್ಣವರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಸಮಾಜದ ಮುಖಂಡರಾದ ಬಸವರಾಜ ಹಿಟ್ನಾಳ, ದ್ಯಾಮಣ್ಣ ಚಿಲವಾಡಗಿ, ರಾಮಣ್ಣ ಹಳ್ಳಿಗುಡಿ, ಬಸವರಾಜ ಆಕಳವಾಡಿ, ಅಲ್ಲಮಪ್ರಭು ಬೆಟದೂರು ಸೇರಿದಂತೆ ಇತರರು ಉಪಸ್ಥಿತರಿದ್ದು ಉಪಯುಕ್ತ ಸಲಹೆ ಸೂಚನೆಗಳನ್ನು ನೀಡಿದರು.